Author: News Editor
-

ಕೋರ್ಟ್ ಕೆಲಸದ ಆಮಿಷವೊಡ್ಡಿ 500 ಜನರಿಗೆ 25 ಕೋಟಿ ರೂ.ಗೂ ಹೆಚ್ಚು ವಂಚನೆ-ದಂಪತಿ ಅರೆಸ್ಟ್
ಬೆಂಗಳೂರು: ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ…
-

ಅಪಘಾತದಲ್ಲಿ ತಪ್ಪಿಲ್ಲದೆ ಸಾವನ್ನಪ್ಪಿದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ನೀಡುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ವಾಹನ ಅಪಘಾತದಲ್ಲಿ ಯಾವುದೇ ತಪ್ಪು ಇಲ್ಲದಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೋಟಾರು ವಾಹನ ತಿದ್ದುಪಡಿ ಕಾಯ್ದೆ-2019ರ ಸೆಕ್ಷನ್ 164 ರ ಅನ್ವಯ, ಆದಾಯದ ಮಿತಿಯ ನಿರ್ಬಂಧವಿಲ್ಲದೆ ಈ ಪರಿಹಾರ ಒದಗಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ 2014ರ ಏಪ್ರಿಲ್ 17ರಂದು ರಂಜಾನ್ ಹುಸೇನ್ ಕಲ್ಲೋಳೆ ಮತ್ತು ರವಿ ಮಹದೇವ್ ಮಗದುಮ್ ಅವರು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಎಮ್ಮೆ ಬಂದಿತ್ತು.…
-

ಉಡುಪಿ : ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ- ಮಹಿಳೆಗೆ ಲಕ್ಷ ರೂ. ಆನ್ಲೈನ್ ವಂಚನೆ
ಉಡುಪಿ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್ಲೈನ್ ವಂಚನೆಗೆ ಒಳಗಾದ ಘಟನೆ ನಡೆದಿದೆ. ಸಹನ ಎಂಬವರು ಟ್ರೇಡಿಂಗ್ ಬಗ್ಗೆ ತಿಳಿದುಕೊಳ್ಳಲು ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿದ್ದು, ಮುಂದೆ 15 ದಿನಗಳ ನಂತರ ಅಪರಿಚಿತನೋರ್ವ ಕರೆ ಮಾಡಿ, ವಾಟ್ಸಾಪ್ ಗ್ರೂಪ್ಗೆ ಸೇರಿಸಿದ್ದನು. ಅದರಲ್ಲಿ ಲಿಂಕ್ ನ್ನು ಕಳುಹಿಸಿ ಕೆವೈಸಿ ಡಿಟೈಲ್ ಫಿಲ್ ಮಾಡುವಂತೆ ತಿಳಿಸಲಾಗಿತ್ತು. ನಂತರ ಟ್ರೇಡಿಂಗ್ ಬಗ್ಗೆ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಸಹನ ಮಾ.6ರಿಂದ ಮಾ.14ರವರೆಗೆ ಹಂತ ಹಂತವಾಗಿ ಒಟ್ಟು 11,75,000ರೂ. ಹಣವನ್ನು…
-

ಡ್ರಗ್ಸ್ ದಂಧೆಕೋರರ ಜೊತೆ ಶಾಮೀಲಾದ್ರೆ ಹುಷಾರ್.. ! 26 ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮಾದಕ ವಸ್ತು ಮುಕ್ತವನ್ನಾಗಿಸಲು ಪಣ ತೊಟ್ಟಿರುವ ಬೆಂಗಳೂರು ಪೊಲೀಸರು, ಡ್ರಗ್ಸ್ ಜಾಲದ ವಿರುದ್ಧ ಐತಿಹಾಸಿಕ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 104 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಮೂಲಕ ಡ್ರಗ್ಸ್ ಮಾಫಿಯಾಕ್ಕೆ ಭಾರಿ ಪೆಟ್ಟು ನೀಡಿದ್ದಾರೆ. ಈ ಕಾರ್ಯಾಚರಣೆಯು ಕೇವಲ ಪೆಡ್ಲರ್ಗಳಿಗೆ ಸೀಮಿತವಾಗದೆ, ದಂಧೆಗೆ ಸಹಕರಿಸಿದ ಇಲಾಖೆಯೊಳಗಿನ ಪೊಲೀಸರಿಗೂ ಬಿಸಿ ಮುಟ್ಟಿಸಿದ್ದಾರೆ. ಡ್ರಗ್ಸ್ ದಂಧೆಕೋರರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ…
-

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ
ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಮತ್ತೊಂದು ಸೈಬರ್ ವಂಚನೆ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.81 ವರ್ಷದ ವೃದ್ಧ ಉದ್ಯಮಿಯನ್ನು ಬೆದರಿಸಿ ಸೈಬರ್ ವಂಚಕರು 15 ಕೋಟಿ ರೂ. ದೋಚಿರುವ ಘಟನೆ ನಡೆದಿದೆ.ದುಷ್ಕರ್ಮಿಗಳು ಡಾರ್ಕ್ ವೆಬ್ ಮೂಲಕ ವೃದ್ಧನ ಸಂಪರ್ಕಕ್ಕೆ ಬಂದು, ಅವರ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ಬಳಿಕ ವಿಡಿಯೋ ಕಾಲ್ ಮಾಡಿ ತಾವು ಈಡಿ ಅಧಿಕಾರಿಗಳೆಂದು ನಂಬಿಸಿ, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. “ತನಿಖೆ ಪೂರ್ಣಗೊಳ್ಳುವವರೆಗೂ ನಿಮ್ಮ…
-

ಬಂಟ್ವಾಳ: ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಆಟೋ ಚಾಲಕನಿಂದ ಸಿಬ್ಬಂದಿ ಮೇಲೆ ಹಲ್ಲೆ-ಪ್ರಕರಣ ದಾಖಲು
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಹಾನಿಗೊಳಿಸಿರುವ ಘಟನೆ ಮಾರ್ಚ್ 20ರಂದು ಸಂಜೆ ನಡೆದಿದೆ. ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಕುನಲ್ ಭುಹ್ನಿಯಾ (27) ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶುಕ್ರವಾರ ಸಂಜೆ ಕೆಎ 19 ಎಸಿ 2102 ನೊಂದಾವಣಿ ಸಂಖ್ಯೆಯ…
-

ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ : 38 ಮಂದಿ ಕಾರ್ಯಕರ್ತರ ವಿರುದ್ಧ FIR
ಉಡುಪಿ : ಹಿಂದು ಜಾಗರಣ ವೇದಿಕೆಯ ಪ್ರತಿಭಟನೆ, ಎಚ್ಚರಿಕೆ ನಡುವೆಯೂ ತಮಿಳುನಾಡು ಮೂಲದ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ಆರಂಭಗೊಂಡಿದೆ. ಉಡುಪಿ ನಗರದ ಮಿಷನ್ ಕಂಪೌಂಡಿನಲ್ಲಿ ಮಾರ್ಚ್ 20ರಿಂದ 22ರ ವರೆಗೆ ಕಾರ್ಯಕ್ರಮ ಆಯೋಜಿಸಿದ್ದು, ಇದರ ಹಿಂದೆ ಮತಾಂತರದ ಷಡ್ಯಂತ್ರ ಇದೆ, ಲಾಜರಸ್ ಭಾಗವಹಿಸಲು ಅವಕಾಶ ನೀಡಬಾರದೆಂದು ಹಿಂದು ಜಾಗರಣ ವೇದಿಕೆ ಮುಖಂಡರು ಆಕ್ಷೇಪಿಸಿದ್ದರು. ಅಲ್ಲದೆ, ಜಿಲ್ಲಾಡಳಿತಕ್ಕೂ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಒತ್ತಾಯ ಮಾಡಿದ್ದರು. ಆದರೆ ಕಾರ್ಯಕ್ರಮ ಸಂಘಟಕರು ಹೈಕೋರ್ಟ್…
-

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ
ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ವಿರುದ್ಧ ಕಿರುಕುಳದ…
-

ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು- ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ
ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ…
-

ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಜಾಲ ಪತ್ತೆ..!! ಆರು ಮಂದಿ ವಿರುದ್ಧ FIR ದಾಖಲು
ರಾಜ್ಯದಲ್ಲಿ ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಮಾಡುತ್ತಿದ್ದಂತ ಜಾಲವೊಂದು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಛೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ನಡೆಯುತ್ತಿರುವ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯದಲ್ಲಿ ನಕಲಿ ದಾಖಲೆಗಳನ್ನು ಸೇರಿಸಲು ಯತ್ನಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಅವರು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 18-03-2026 ರಂದು ಮಧ್ಯಾಹ್ನ ತಾಲೂಕು ಕಛೇರಿಯಲ್ಲಿ ಗಣಕೀಕರಣ ಕಾರ್ಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











