Author: News Editor
-

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ. ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ…
-

ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್
ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್…
-

ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ
ಅಬುಧಾಬಿ: ಅಮೆರಿಕ-ಇಸ್ರೇಲ್, ಇರಾನ್ ನಡುವಿನ ಯುದ್ಧದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿಯ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ. ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಮತ್ತು ನಿರೂಪಣೆಗಳನ್ನು ಪ್ರಸಾರ ಮಾಡಲು ಆರೋಪಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಜನರ ದಾರಿ ತಪ್ಪಿಸುವ, ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ಹರಡಿದ ಆರೋಪ…
-

ಯುವತಿಗೆ ಬೆದರಿಸಿ 14 ಲಕ್ಷ ರೂ. ಪಡೆದ ಯುವಕ: ಪ್ರಕರಣ ದಾಖಲು
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ ಮಹಿಮಾ (22) ಎಂಬಾಕೆಗೆ ಕೆ.ಆರ್.ಪೇಟೆಯ ಶರತ್ ಎಂಬಾತನು ಕಳೆದ 2ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ. ಮೊದಲಿಗೆ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು 500, 1000, 2000 ರೂ. ಹೀಗೆ ಹಣವನ್ನು ಪಡೆದುಕೊಳ್ಳುತ್ತಿದ್ದನು. ಈ ಹಣವನ್ನು ಮಹಿಮಾ ವಾಪಸ್ಸು ಕೇಳಿದಾಗ ಏನಾದರೂ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ…
-

ಪಂಚ ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ
ನವದೆಹಲಿ: ಭಾರತದ ರಾಜಕೀಯ ರಣರಂಗದಲ್ಲಿ ಮತ್ತೆ ಚುನಾವಣಾ ಸದ್ದು ಮೊಳಗುತ್ತಿದೆ. ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. 2026 ರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾನ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಎಲ್ಲಾ ಮತಗಟ್ಟೆಗಳಲ್ಲಿ 100 ಪ್ರತಿಶತ…
-

ಹೋಟೆಲ್, ಟೀ ಅಂಗಡಿಯಲ್ಲಿ ಮನೆ ಗ್ಯಾಸ್ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು
ಬೆಂಗಳೂರು: ನೀವು ಹೋಟೆಲ್, ಕೆಫೆ ಅಥವಾ ಟೀ ಅಂಗಡಿ ನಡೆಸುತ್ತಿದ್ದೀರಾ? ಲಾಭದ ಆಸೆಗೆ ಬಿದ್ದು ಗೃಹಬಳಕೆಯ (Domestic) ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಎಚ್ಚರ! ರಾಜ್ಯದಾದ್ಯಂತ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ನೂರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ. 316 ಪ್ರಕರಣ ದಾಖಲು, ಸಾವಿರಾರು ಸಿಲಿಂಡರ್ ವಶ ವಾಣಿಜ್ಯ ಉದ್ದೇಶಕ್ಕೆ ಕಡಿಮೆ ಬೆಲೆಯ ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ಗದಾಪ್ರಹಾರ ನಡೆಸಿದ್ದಾರೆ. ಅಗತ್ಯ ವಸ್ತುಗಳ ಕಾಯ್ದೆ ಅಡಿ…
-

ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಪಾಪಿ!
ಮದುವೆ ನಿಶ್ಚಯವಾದ ನಂತರ ಮಗನಿಗೆ ಹೆಚ್‌ಐವಿ (HIV) ಇರುವುದು ತಿಳಿದು ಹುಡುಗಿಯ ಕಡೆಯವರು ಸಂಬಂಧ ನಿರಾಕರಿಸಿದ್ದಕ್ಕೆ, ಆಕ್ರೋಶಗೊಂಡ ಯುವಕನೊಬ್ಬ ತನ್ನದೇ ಹೆಚ್‌ಐವಿ ಪೀಡಿತ ರಕ್ತವನ್ನು ಯುವತಿಯ ದೇಹಕ್ಕೆ ಇಂಜೆಕ್ಷನ್ ಮೂಲಕ ಚುಚ್ಚಿದ ಅಮಾನವೀಯ ಘಟನೆ ಹೈದರಾಬಾದ್‌ನ ಪೋಚರಂನಲ್ಲಿ ನಡೆದಿದೆ. ಘಟನೆಯ ಭೀಕರ ವಿವರಗಳು:ಸಂಬಂಧ ಕ್ಯಾನ್ಸಲ್ ಆಗಿದ್ದೇಕೆ?: ಆರೋಪಿ ಮನೋಹರ್ (24) ಮತ್ತು ಸಂತ್ರಸ್ತ ಯುವತಿ ಸಂಬಂಧಿಕರಾಗಿದ್ದು, ಇವರಿಬ್ಬರಿಗೂ ಮದುವೆ ನಿಶ್ಚಯವಾಗಿತ್ತು. ಆದರೆ, ಮನೋಹರ್ ಪೋಷಕರು ಹೆಚ್‌ಐವಿಯಿಂದ ಮೃತಪಟ್ಟಿದ್ದರಿಂದ ಸಂಶಯಗೊಂಡ ಯುವತಿಯ ತಂದೆ, ಮನೋಹರ್‌ನನ್ನು ರಕ್ತ ಪರೀಕ್ಷೆಗೆ ಒಳಪಡಿಸಿದ್ದರು.…
-

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ..!!
ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಪ್ರಕರಣದ ಹಿನ್ನೆಲೆಯುಳ್ಳ ಸಂದೇಶ, ಸುಶಾಂತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಜಬ್ಬಾರ್ ಹುಸೇನ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಕಾಪು ನಡ್ಸಾಲು ನಿವಾಸಿ ಜಬ್ಬಾರ್ ಹುಸೈನ್ ಎಂಬುವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದ್ದು, ಈತನ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಇದುವರೆಗೆ ಒಟ್ಟು…
-

ಜಿಲ್ಲಾಧಿಕಾರಿ, ಎಡಿಸಿ ಸಹಿ ಫೋರ್ಜರಿ : 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ಆರೋಪಿಗಳು ಅರೆಸ್ಟ್
ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ.…
-

ಉಡುಪಿ: ಅಬಕಾರಿ ಡಿಸಿ ಶ್ರೀನಿವಾಸ್ ಮನೆಗೆ ಲೋಕಾಯುಕ್ತ ದಾಳಿ-8.69 ಕೋಟಿ ಮೌಲ್ಯದ ಆಸ್ತಿ ಪತ್ತೆ
ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











