Author: News Editor
-

ಟಿ20 ವಿಶ್ವಕಪ್ ಗೆಲುವಿನ ಸಂಭ್ರಮ: ಉದ್ಯೋಗಿಗಳಿಗೆ ತಲಾ ₹2,000 ಗಿಫ್ಟ್ ನೀಡಿದ ಕೇರಳ ಉದ್ಯಮಿ
ಕೇರಳ: ಭಾರತದ ಕ್ರಿಕೆಟ್ ತಂಡ ICC Men’s T20 World Cup ಗೆದ್ದ ಸಂಭ್ರಮ ದೇಶದಾದ್ಯಂತ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಮೂಡಿಸಿದೆ. ಈ ಸಂತಸದ ಕ್ಷಣವನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿರುವ ಉದಾಹರಣೆಗಳ ನಡುವೆ ಕೇರಳದ ಉದ್ಯಮಿ ಒಬ್ಬರು ತಮ್ಮ ಸಂಸ್ಥೆಯ ಉದ್ಯೋಗಿಗಳಿಗೆ ತಲಾ ₹2,000 ನಗದು ಗಿಫ್ಟ್ ನೀಡಿ ಗಮನ ಸೆಳೆದಿದ್ದಾರೆ. ಕೇರಳದ ಕೋಟಾಯಂ ಜಿಲ್ಲೆಯ ಪಾಂಪಾಡಿ ಪ್ರದೇಶದ ಉದ್ಯಮಿ Nithin Babu ತಮ್ಮ ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಈ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಅವರ ಸಂಸ್ಥೆಯಲ್ಲಿ…
-

ಎಚ್ಚರ..!! ಎಚ್ಚರ..!! ಮೂಡುಬಿದಿರೆ: ವಾಟ್ಸಾಪ್ ಗ್ರೂಪ್‌ಗಳಲ್ಲಿ ಡಿ ಮಾರ್ಟ್ ಹೆಸರಿನ ಫೇಕ್ ಲಿಂಕ್ ವೈರಲ್
ಮೂಡುಬಿದಿರೆ : ಮೂಡುಬಿದಿರೆ ಹಾಗೂ ಸುತ್ತಮುತ್ತಲ ಪ್ರದೇಶಗಳ ವಾಟ್ಸಾಪ್ ಗುಂಪುಗಳಲ್ಲಿ “ಡಿ-ಮಾರ್ಟ್ ರೆಡಿ – ಮೆಗಾ ಗಿಫ್ಟ್” ಎಂಬ ಶೀರ್ಷಿಕೆಯ ಸಂದೇಶವೊಂದು ವೇಗವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ. ವಾಟ್ಸಾಪ್ ಮೂಲಕ ಬರುತ್ತಿರುವ ಈ ಸಂದೇಶದಲ್ಲಿ “ಡಿ-ಮಾರ್ಟ್ ಎಲ್ಲರಿಗೂ ವಿಶೇಷ ಉಡುಗೊರೆಗಳನ್ನು ನೀಡುತ್ತಿದೆ” ಎಂದು ಹೇಳಿ, ಒಂದು ಅನುಮಾನಾಸ್ಪದ ಲಿಂಕ್ ನೀಡಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದ ಬಳಿಕ ಬಳಕೆದಾರರಿಂದ ವೈಯಕ್ತಿಕ ಮಾಹಿತಿ, ಫೋನ್ ಸಂಖ್ಯೆ ಸೇರಿದಂತೆ ವಿವಿಧ ವಿವರಗಳನ್ನು ಕೇಳಲಾಗುತ್ತದೆ. ಇದರಿಂದ ಬ್ಯಾಂಕ್ ಖಾತೆ…
-

ಒಳ ಉಡುಪಿನಲ್ಲಿಟ್ಟು ಕೈದಿಗಳಿಗೆ ಗಾಂಜಾ ಸಾಗಿಸುತ್ತಿದ್ದ ವಾರ್ಡನ್ ಅರೆಸ್ಟ್!!
ಹಲವು ತಿಂಗಳುಗಳಿಂದ ಒಂದಲ್ಲಾ ಅಕ್ರಮಗಳಿಂದ ಒಂದು ರೀತಿಯ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಪ್ರಕಾಶ್ ಗಾವಡೆ ಅವರನ್ನು ಬಂಧಿಸಲಾಗಿದೆ. ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ-2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ…
-

ಮೂಡಬಿದ್ರೆ: ಮಹಿಳೆ ಸಂಶಯಾಸ್ಪದ ಸಾವು..!! ಪತಿ ವಿರುದ್ಧ ದೂರು
ಮೂಡಬಿದ್ರೆಯ ಪುತ್ತಿಗೆ ಗ್ರಾಮದ ವಿದ್ಯಾಗಿರಿ ಬಳಿಯ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದ ಸವಿತಾ ಎಂಬ ಮಹಿಳೆಯ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯ ವಿರುದ್ಧ ದೂರು ದಾಖಲಾಗಿದೆ. ಸವಿತಾ ಸಾವಿಗೆ ಪತಿ ದಿನೇಶ್ ಕಾರಣ ಎಂದು ಆರೋಪಿಸಿ ಮೃತಳ ಸಹೋದರಿ ಶಶಿಕಲಾ ಬುಧವಾರ ಮೂಡುಬಿದಿರೆ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾದ ದಿನೇಶ್ ಮತ್ತು ಪತ್ನಿ ಸವಿತಾ ತಮ್ಮ ಇಬ್ಬರು ಮಕ್ಕಳೊಂದಿಗೆ ಹಲವು ಸಮಯದಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ನಡೆದ…
-

ಮಂಗಳೂರು: ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣ; ಆರೋಪಿಯ ಬಂಧನ
ಮಂಗಳೂರು; ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಸದ್ಯ ಬೆಂಗಳೂರಿನ ಬನಶಂಕರಿಯಲ್ಲಿ ವಾಸವಿರುವ ಮುಖೇಶ್ ದಾಸ್ (45) ಬಂಧಿತ ಆರೋಪಿ. ಪ್ರಕರಣದ ವಿವರ: ದಿನಾಂಕ: 14/15-02-2026 ರಂದು ರಾತ್ರಿ ಸಮಯದಲ್ಲಿ ಲಾರಿವೊಂದರಲ್ಲಿ ಬಂದ ಚಾಲಕನೊಬ್ಬನು ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿರುವ ಫ್ರೆಂಡ್ಸ್ ಗ್ಯಾರೇಜ್ ನ ಬಳಿ ಲಾರಿಯನ್ನು ಪಾರ್ಕ್ ಮಾಡಿ ಗ್ಯಾರೇಜ್ ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಘನ ವಾಹನದ ಬಿಡಿಭಾಗಗಳನ್ನು ಕಳವು ಮಾಡಿಕೊಂಡು ಲಾರಿಯಲ್ಲಿ…
-

ಮಂಗಳೂರು: ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ; ಸವಾರ ಸಾವು
ಮಂಗಳೂರು : ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃತ ದುರ್ದೈವಿ. ಸಜೇಶ್, ಮಂಗಳೂರಿನ ಶೋರೂಮ್ ಒಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್ ಗಂಭೀರವಾಗಿ ಗಾಯಗೊಂಡಿದ್ದ ಸಜೇಶ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸಜೇಶ್ ಸಣ್ಣ ವಯಸ್ಸಿನಲ್ಲೇ…
-

ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣ- ದೂರುದಾರ ವಿಷ ಸೇವಿಸಿ ಆತ್ಮ*ಹ*ತ್ಯೆಗೆ ಯತ್ನ
ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್‌ಹೌಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಕುರಿತು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ 2022 ಡಿಸೆಂಬರ್ 18 ರಂದು ಶ್ರೀಧರ (30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್ ಬಿ ಮುಗೇರ ಮಾ 11 ರಂದು ರಾತ್ರಿ 9.45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಕೂಡಲೇ ಮಂಗಳೂರು ಆಸ್ಪತ್ರೆಗೆ…
-

ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್ ದಂಧೆ, ನಾಲ್ವರು ಸೆರೆ..!!
ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ…
-

ಮಂಗಳೂರು: ಪ್ಲಾಸ್ಟಿಕ್ ಚೀಲ, ಕವರ್‌ಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ನಿಷೇಧ- ಎಡಿಸಿ ಸೂಚನೆ
ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿವೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್‌ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು…
-

ಮಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಕೆರೆಯಲ್ಲಿ ಪತ್ತೆ..!!
ಮಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬನ ಶವ ಕೊಣಾಜೆ ಠಾಣಾ ವ್ಯಾಪ್ತಿಯ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕ. ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಅದರಂತೆ ಮಾರ್ಚ್ 9ರಂದು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











