ಕಾರ್ಕಳ ತಾಲೂಕಿನ ಅಜೆಕಾರ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಬಜಾಜ್ ಫೈನಾನ್ಸ್ ಕಂಪನಿಯ ಹೆಸರಿನಲ್ಲಿ ಕರೆ ಮಾಡಿ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಘಟನೆ ವರದಿಯಾಗಿದೆ.
ದಿನಾಂಕ 25-03-2026 ರಂದು, ಬಜಾಜ್ ಫೈನಾನ್ಸ್ನಿಂದ ಕರೆ ಬಂದಿದೆ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಿಳೆಗೆ ಸಂಪರ್ಕಿಸಿ, “ನಿಮ್ಮ ಗಂಡನಿಗೆ ಸಾಲ ಕಟ್ಟಲು ಆಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಮಹಿಳೆ, ತಾನು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲವೆಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರೆ ಮಾಡಿದ ವ್ಯಕ್ತಿ, “ಸುಧೀರ್ ನಿನ್ನ ಗಂಡ ಅಲ್ಲವಾ?” ಎಂದು ಪ್ರಶ್ನಿಸುತ್ತಾ ಅವಾಚ್ಯ ಪದಗಳನ್ನು ಬಳಸಿಕೊಂಡು ಮಹಿಳೆಯ ಮಾನಕ್ಕೆ ಧಕ್ಕೆ ಉಂಟಾಗುವಂತೆ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಮಹಿಳೆ ಕಾರ್ಕಳದ ಅಜೆಕಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಲ ವಸೂಲಾತಿ ಸಂಬಂಧಿತ ಕರೆಗಳ ಸಂದರ್ಭದಲ್ಲಿ ಈ ರೀತಿಯ ವರ್ತನೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗುತ್ತಿದೆ.
