, ,

ಮಂಗಳೂರು: ವಿದ್ಯಾರ್ಥಿಗಳ ಕಾರ್ಯಕ್ರಮದ ವೇಳೆ ಬಾಲ್ಕನಿ ತಡೆಗೋಡೆ ಕುಸಿತ

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ರಾಮ ಲಕ್ಷ್ಮೀ ನಾರಾಯಣ ಸಭಾಭವನದ ಮೊದಲನೇ ಮಹಡಿಯ ಬಾಲ್ಕನಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಂದರ್ಭದಲ್ಲಿ ಬಾಲ್ಕನಿ ತಡೆಗೋಡೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ಹಳೆಯ ಕಟ್ಟಡದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿತ್ತೇ ಎಂಬ ಪ್ರಶ್ನೆಯೂ ಇದೀಗ ಎದುರಾಗಿದೆ. ಘಟನೆ ಬೆನ್ನಲ್ಲೇ ನಗರದ…

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ರಾಮ ಲಕ್ಷ್ಮೀ ನಾರಾಯಣ ಸಭಾಭವನದ ಮೊದಲನೇ ಮಹಡಿಯ ಬಾಲ್ಕನಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಂದರ್ಭದಲ್ಲಿ ಬಾಲ್ಕನಿ ತಡೆಗೋಡೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ಹಳೆಯ ಕಟ್ಟಡದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿತ್ತೇ ಎಂಬ ಪ್ರಶ್ನೆಯೂ ಇದೀಗ ಎದುರಾಗಿದೆ.

ಘಟನೆ ಬೆನ್ನಲ್ಲೇ ನಗರದ ಹಳೆಯ ಕಟ್ಟಡಗಳ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಹಳೆಯ ಕಟ್ಟಡಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ಅವಕಾಶ ನೀಡುವ ಮುನ್ನ ಕಟ್ಟಡದ ಸ್ಥಿರತೆ, ಸುರಕ್ಷತಾ ವ್ಯವಸ್ಥೆ ಮತ್ತು ಅಗತ್ಯ ಅನುಮತಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿಯಾಗಿರುವ ಹಳೆಯ ಕಟ್ಟಡಗಳನ್ನು ಗುರುತಿಸಿ, ಅಗತ್ಯವಿದ್ದಲ್ಲಿ ಅವುಗಳನ್ನು ತೆರವುಗೊಳಿಸಲು ಅಥವಾ ದುರಸ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಕಚೇರಿಗಳಲ್ಲೇ ಕುಳಿತು ಕಡತಗಳ ಪರಿಶೀಲನೆ ನಡೆಸುವುದಕ್ಕಿಂತ, ಅಪಾಯದಂಚಿನಲ್ಲಿರುವ ಕಟ್ಟಡಗಳನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ.

ಈ ಘಟನೆಯ ಕುರಿತು ಕಟ್ಟಡದ ಅನುಮತಿ, ಸುರಕ್ಷತಾ ಪ್ರಮಾಣಪತ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪರಿಶೀಲನೆ ಸೇರಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪು ಕಂಡುಬಂದಲ್ಲಿ ಜವಾಬ್ದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed