, ,

ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ

ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಗಾಗಿ…

ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ವಿದ್ಯಾರ್ಥಿನಿಗಾಗಿ ಶೋಧ ಕಾರ್ಯ ಮುಂದುವರಿದಿದ್ದ ವೇಳೆ, ಶುಕ್ರವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಆಕೆಯ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಗಾಯತ್ರಿ ಸ್ಥಳೀಯ ಕಾಲೇಜಿನಲ್ಲಿ ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಅಕಾಲಿಕ ನಿಧನದ ಸುದ್ದಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯ ನಿವಾಸಿಗಳನ್ನು ತೀವ್ರ ದುಃಖಕ್ಕೆ ದೂಡಿದೆ. ಚುರುಕು ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಗಾಯತ್ರಿಯ ಅಗಲಿಕೆ ಸಮುದಾಯದಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed