, ,

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಬಳಿಕ ಬೆದರಿಕೆ ಹಾಕಿ, ವಿವಿಧ ಬ್ಯಾಂಕ್ ಖಾತೆಗಳ ಮೂಲಕ ವ್ಯಕ್ತಿಯೊಬ್ಬರಿಂದ ₹42.97 ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಟ್ರಾವೆಲ್ಗೈಡ್ ನೋಡಿ ಉಡುಪಿಯ ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಕೆ. ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೂರಿನ ಪ್ರಕಾರ, ಪ್ರದೀಪ್ ಅವರು…

ಉಡುಪಿ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಬಳಿಕ ಬೆದರಿಕೆ ಹಾಕಿ, ವಿವಿಧ ಬ್ಯಾಂಕ್ ಖಾತೆಗಳ ಮೂಲಕ ವ್ಯಕ್ತಿಯೊಬ್ಬರಿಂದ ₹42.97 ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಟ್ರಾವೆಲ್ಗೈಡ್ ನೋಡಿ

ಉಡುಪಿಯ ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಕೆ. ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದೂರಿನ ಪ್ರಕಾರ, ಪ್ರದೀಪ್ ಅವರು 2023ರ ಕೊನೆಯ ಭಾಗದಲ್ಲಿ ಹಾಗೂ 2024ರ ಜನವರಿಯಲ್ಲಿ ‘ಕನ್ನಡ ಜೋಡಿ ಮ್ಯಾಟ್ರಿಮೋನಿ’ ಆ್ಯಪ್ ಮೂಲಕ ನಾಗರತ್ನ ಎಚ್. ಎಂಬವರ ಪರಿಚಯ ಮಾಡಿಕೊಂಡಿದ್ದರು. ಬೈಂದೂರು ತಾಲೂಕಿನ ಬಡಬೇಟ್ಟು ಹೆಣ್ಬೇರು ಮೂಲದ ನಾಗರತ್ನ ಅವರು ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಕನ್ನಡ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪರಿಚಯದ ಬಳಿಕ ನಾಗರತ್ನ ಅವರು ವಿವಾಹದ ಪ್ರಸ್ತಾಪ ಮುಂದಿಟ್ಟಿದ್ದು, ಅದನ್ನು ಪ್ರದೀಪ್ ನಿರಾಕರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಾದ ಬಳಿಕ ನಾಗರತ್ನ ಅವರು ಕರೆಗಳು ಮತ್ತು ಸಂದೇಶಗಳ ಮೂಲಕ ಪ್ರದೀಪ್ ಅವರನ್ನು ಸಂಪರ್ಕಿಸಿ, ತಮ್ಮ ವೈಯಕ್ತಿಕ ಸಮಸ್ಯೆಗಳು ಹಾಗೂ ಆರ್ಥಿಕ ಸಂಕಷ್ಟಗಳನ್ನು ವಿವರಿಸಿ ಹಂತ ಹಂತವಾಗಿ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. 2024ರ ಜನವರಿಯಿಂದ 2026ರ ಜನವರಿವರೆಗಿನ ಅವಧಿಯಲ್ಲಿ ನಾಗರತ್ನ ಅವರ ಖಾತೆ ಸೇರಿದಂತೆ ಅವರ ಸಹೋದ್ಯೋಗಿ ಹೇಮಂತ್ ಕರ್ಕೇರಾ, ಚಿಕ್ಕಮ್ಮನ ಮಗ ಪ್ರಮೋದ್ ಹಾಗೂ ಅಕ್ಕ ರೇಣುಕಾ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹42,97,35 ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರ್ಗಾಯಿಸಿದ ಹಣವನ್ನು ವಾಪಸ್ ನೀಡುವಂತೆ ಪ್ರದೀಪ್ ಕೇಳಿದಾಗ, ಅವರಿಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ನಾಗರತ್ನ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ, ಪ್ರದೀಪ್ ಕೆಲಸ ಮಾಡುವ ಕಚೇರಿಗೆ ಆಗಮಿಸಿ ಸಿಬ್ಬಂದಿ ಹಾಗೂ ಗ್ರಾಹಕರ ಎದುರು ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಸಂಸ್ಥೆಯ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸುಳ್ಳು ಆರೋಪ ಮಾಡುವುದಾಗಿ ಎಚ್ಚರಿಕೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇದರೊಂದಿಗೆ, ಸಂಸ್ಥೆಯ ಮುಂದೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವುದಾಗಿಯೂ ಪ್ರದೀಪ್ ಆರೋಪಿಸಿದ್ದಾರೆ. ಈ ಎಲ್ಲ ಆರೋಪಗಳ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2026ರಡಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ತನಿಖೆಗಾಗಿ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ಅಕ್ಟೋಬರ್ 26ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಬಸವೇಶ್ವರ ನಗರದಲ್ಲಿ ಕಾರ್ಯಾಚರಣೆ ನಡೆಸಿ, ನಾಗರತ್ನ ಎಚ್. (42) ಮತ್ತು ಹೇಮಂತ್ (41) ಅವರನ್ನು ವಶಕ್ಕೆ ಪಡೆದು ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed