,

ವಿಧಾನಸೌಧವನ್ನು ಬಾಂಬ್ ನಿಂದ ಉಡಾಯಿಸಿದಂತೆ AI ವೀಡಿಯೋ ಸೃಷ್ಟಿಸಿದ ಯುವಕ – ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರಿನ ವಿಧಾನಸೌಧವನ್ನು ಬಾಂಬ್ ಇಟ್ಟು ಉಡಾಯಿಸಿದಂತೆ ಕೃತಕ ಬುದ್ಧಿಮತ್ತೆ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಇನ್ಸ್ಟಾಗ್ರಾಮ್​ನಲ್ಲಿ ಅಪ್‌ಲೋಡ್ ಆಗಿರುವ ಈ ವೀಡಿಯೊದಲ್ಲಿ ಕಿಡಿಗೇಡಿ ಯುವಕ ತನ್ನನ್ನು ಭಯೋತ್ಪಾದಕನಂತೆ ಬಿಂಬಿಸಿಕೊಂಡಿದ್ದು, ದಸರಾ ವೇಳೆ ಆತಂಕ ಸೃಷ್ಟಿಸಲು ಯತ್ನಿಸಿದ್ದಾನೆ. ‘Jnx king Hg’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾನೆ. ವಿಧಾನಸೌಧದ ಮುಂಭಾಗ ಶೂಟ್ ಮಾಡಿ, ಅದನ್ನು ಬಾಂಬ್ ಬ್ಲಾಸ್ಟ್ ಮಾಡಿದಂತೆ ಅತ್ಯಂತ ನೈಜವಾಗಿ ಎಐ ತಂತ್ರಜ್ಞಾನ…

ಬೆಂಗಳೂರಿನ ವಿಧಾನಸೌಧವನ್ನು ಬಾಂಬ್ ಇಟ್ಟು ಉಡಾಯಿಸಿದಂತೆ ಕೃತಕ ಬುದ್ಧಿಮತ್ತೆ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಇನ್ಸ್ಟಾಗ್ರಾಮ್​ನಲ್ಲಿ ಅಪ್‌ಲೋಡ್ ಆಗಿರುವ ಈ ವೀಡಿಯೊದಲ್ಲಿ ಕಿಡಿಗೇಡಿ ಯುವಕ ತನ್ನನ್ನು ಭಯೋತ್ಪಾದಕನಂತೆ ಬಿಂಬಿಸಿಕೊಂಡಿದ್ದು, ದಸರಾ ವೇಳೆ ಆತಂಕ ಸೃಷ್ಟಿಸಲು ಯತ್ನಿಸಿದ್ದಾನೆ.

‘Jnx king Hg’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾನೆ. ವಿಧಾನಸೌಧದ ಮುಂಭಾಗ ಶೂಟ್ ಮಾಡಿ, ಅದನ್ನು ಬಾಂಬ್ ಬ್ಲಾಸ್ಟ್ ಮಾಡಿದಂತೆ ಅತ್ಯಂತ ನೈಜವಾಗಿ ಎಐ ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ, “ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಿದ್ದೇನೆ” ಎಂಬ ಶೀರ್ಷಿಕೆಯನ್ನೂ ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ತಾನೊಬ್ಬ ಭಯೋತ್ಪಾದಕ ಎಂಬಂತೆ ಬಿಂಬಿಸಿಕೊಳ್ಳಲು ಯತ್ನಿಸಿದ್ದಾನೆ.

ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ ಹಲವರು

ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಈ ರೀತಿ ಸಾರ್ವಜನಿಕವಾಗಿ ಆತಂಕ ಸೃಷ್ಟಿಸುವ ವಿಡಿಯೋ ಹಂಚಿಕೊಂಡಿರುವ ಕಿಡಿಗೇಡಿಯ ಉದ್ದೇಶವೇನು ಎಂಬ ಬಗ್ಗೆ ಜಾಲತಾಣಗಳಲ್ಲಿ ತೀವ್ರ ಚರ್ಚೆ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯದ ಅತ್ಯುನ್ನತ ಭದ್ರತಾ ವಲಯವಾದ ವಿಧಾನಸೌಧಕ್ಕೆ ಈ ರೀತಿ ಬೆದರಿಕೆ ಒಡ್ಡುವ ವಿಡಿಯೋ ಪ್ರಸಾರ ಮಾಡಿರುವ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆತ ಪೋಸ್ಟ್ ಮಾಡಿರುವ ವೀಡಿಯೋಗೆ ಹಲವು ಕಾಮೆಂಟ್​ಗಳು ಬಂದಿವೆ. ಅವುಗಳಲ್ಲಿ ಹಲವರು ಬೆಂಗಳೂರು ಪೊಲೀಸರ ಇನ್ಸ್ಟಾಗ್ರಾಮ್​ ಐಡಿಯನ್ನು ಟ್ಯಾಗ್ ಮಾಡಿ ಈತನ ಮೇಲೆ ಕ್ರಮ ಕೈಗೊಳ್ಳಿ ಎಂದು ಬರೆದುಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports