,

ದೇರಳಕಟ್ಟೆಯಲ್ಲಿ ರಸ್ತೆ ಬದಿಯಲ್ಲೇ ಬಸ್‌ಗಳ ಪಾರ್ಕಿಂಗ್ ಹಾವಳಿ!

ಮಂಗಳೂರು: ನಗರದ ದೇರಳಕಟ್ಟೆ ಭಾಗದಲ್ಲಿ ರಸ್ತೆ ಬದಿಯಲ್ಲೇ ಬೃಹತ್ ಬಸ್‌ಗಳನ್ನು ಬೇಕಾಬಿಟ್ಟಿಯಾಗಿ ಪಾರ್ಕ್ ಮಾಡುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೊರ ಜಿಲ್ಲೆಗಳಿಂದ ರೋಗಿಗಳನ್ನು ಕರೆದುಕೊಂಡು ಬರುವ ಖಾಸಗಿ ಬಸ್‌ಗಳನ್ನು ದೇರಳಕಟ್ಟೆ ಪರಿಸರದಲ್ಲಿ ವಾರಗಟ್ಟಲೆ ರಸ್ತೆ ಬದಿಯಲ್ಲೇ ನಿಲ್ಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಸ್ತೆಯ ಬಹುಭಾಗ ಬಸ್‌ಗಳ ಪಾರ್ಕಿಂಗ್‌ಗೆ ಮೀಸಲಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ವಿಶೇಷವಾಗಿ ಸಂಜೆ ವೇಳೆಯಲ್ಲಿ ಯೆನಪೋಯ ಆಸ್ಪತ್ರೆ ಕಡೆಯಿಂದ ದೇರಳಕಟ್ಟೆಯವರೆಗೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವುದೇ ವಾಹನ…

ಮಂಗಳೂರು: ನಗರದ ದೇರಳಕಟ್ಟೆ ಭಾಗದಲ್ಲಿ ರಸ್ತೆ ಬದಿಯಲ್ಲೇ ಬೃಹತ್ ಬಸ್‌ಗಳನ್ನು ಬೇಕಾಬಿಟ್ಟಿಯಾಗಿ ಪಾರ್ಕ್ ಮಾಡುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಹೊರ ಜಿಲ್ಲೆಗಳಿಂದ ರೋಗಿಗಳನ್ನು ಕರೆದುಕೊಂಡು ಬರುವ ಖಾಸಗಿ ಬಸ್‌ಗಳನ್ನು ದೇರಳಕಟ್ಟೆ ಪರಿಸರದಲ್ಲಿ ವಾರಗಟ್ಟಲೆ ರಸ್ತೆ ಬದಿಯಲ್ಲೇ ನಿಲ್ಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಸ್ತೆಯ ಬಹುಭಾಗ ಬಸ್‌ಗಳ ಪಾರ್ಕಿಂಗ್‌ಗೆ ಮೀಸಲಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ವಿಶೇಷವಾಗಿ ಸಂಜೆ ವೇಳೆಯಲ್ಲಿ ಯೆನಪೋಯ ಆಸ್ಪತ್ರೆ ಕಡೆಯಿಂದ ದೇರಳಕಟ್ಟೆಯವರೆಗೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವುದೇ ವಾಹನ ಸವಾರರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಆಸ್ಪತ್ರೆಗಳಿಗೆ ಬರುವ ರೋಗಿಗಳು, ಅವರ ಸಂಬಂಧಿಕರು, ಸ್ಥಳೀಯ ನಿವಾಸಿಗಳು ಹಾಗೂ ಪ್ರತಿನಿತ್ಯ ಈ ರಸ್ತೆಯನ್ನು ಅವಲಂಬಿಸಿರುವ ವಾಹನ ಸವಾರರು ನಿತ್ಯವೂ ಈ ಸಮಸ್ಯೆಯಿಂದ ಪರದಾಡುವಂತಾಗಿದೆ.

ರೋಗಿಗಳನ್ನು ಕರೆತರುವ ಬಸ್‌ಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಅಗತ್ಯ. ಆದರೆ ಸಾರ್ವಜನಿಕ ರಸ್ತೆಯನ್ನೇ ವಾರಗಟ್ಟಲೆ ಪಾರ್ಕಿಂಗ್ ಸ್ಥಳವನ್ನಾಗಿ ಬಳಸುವುದು ಎಷ್ಟು ಸರಿ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸಂಬಂಧಪಟ್ಟ ಸಂಚಾರಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ರಸ್ತೆ ಬದಿಯ ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಿ, ಬಸ್‌ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed