Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು ಮಹಾನಗರ ಪಾಲಿಕೆಯ ಕೋಟ್ಯಂತರ ಮೌಲ್ಯದ ಆಸ್ತಿಗಳಿಗೆ ರಕ್ಷಣೆ ಇಲ್ಲವೇ?
ಹಂಪನಕಟ್ಟೆ, ಮಣ್ಣಗುಡ್ಡ, ಬಂದರು ವಾರ್ಡ್ಗಳ ಪಾಲಿಕೆ ಜಾಗಗಳ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ! ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಹಾಗೂ ಮಹಾನಗರ ಪಾಲಿಕೆಯ ಆಸ್ತಿಗಳು ಸೂಕ್ತ ನಿರ್ವಹಣೆಯಿಲ್ಲದೆ ಖಾಸಗಿ ಬಳಕೆಗೆ ಹೋಗುತ್ತಿವೆಯೇ? ಪಾಲಿಕೆಯ ಜಾಗಗಳನ್ನು ಸಂರಕ್ಷಿಸಬೇಕಾದ ಅಧಿಕಾರಿಗಳೇ ಅವುಗಳ ರಕ್ಷಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಯೇ? ಇಂತಹ ಹಲವು ಪ್ರಶ್ನೆಗಳಿಗೆ ಇದೀಗ ಉತ್ತರ ಬೇಕಾಗಿದೆ. ಹಂಪನಕಟ್ಟೆ–ಶರವು ದೇವಸ್ಥಾನದ ಬಳಿ ಪಾಲಿಕೆ…
-

ಉಡುಪಿ: ಬೀಚ್ ಗಳಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!
ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾಪು ತಾಲೂಕಿನ ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್ನಲ್ಲಿ ದಾಳಿ ನಡೆಸಿ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ₹2.85 ಲಕ್ಷ ಎಂದು ಅಂದಾಜಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ, ಬದ್ರಿಯಾ ಮಸೀದಿ ಬಳಿಯ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ, ಕೆಮ್ಮಣ್ಣು ಜಾಮೀಯ ಮಸೀದಿ ಬಳಿಯ ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ…
-

ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ- ಆರೋಪಿ ಸಹೋದರರಿಬ್ಬರ ಬಂಧನ
ಬ್ರಹ್ಮಾವರ : ರೌಡಿಶೀಟರ್ ಸುಜಿತ್ ಪಿಂಟೊ (43) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಂಶ ಬೆಳಕಿಗೆ ಬಂದಿದ್ದು, ವೈಯಕ್ತಿಕ ಹಾಗೂ ಹಣಕಾಸಿನ ವಿಚಾರದ ಗಲಾಟೆಯಲ್ಲಿ ಸಹೋದರರಿಬ್ಬರು ಸೇರಿ ಸ್ಟೀಲ್ ಪೈಪ್ನಿಂದ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿ ಬೈಕಾಡಿ ಗ್ರಾಮದ ಪಡುಬೈಕಾಡಿ ನಿವಾಸಿಗಳಾದ ಪ್ರದೀಪ್ ಪೂಜಾರಿ ಹಾಗೂ ಪ್ರಮೋದ್ ಪೂಜಾರಿ ಎಂಬ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದಾರೆ.ಅಕ್ಟೋಬರ್ 27ರ ರಾತ್ರಿ 7:30 ರಿಂದ 8:30 ರ…
-

ಉಡುಪಿ: ರೌಡಿಶೀಟರ್ ಸುಜಿತ್ ಪಿಂಟೊ ಬರ್ಬರವಾಗಿ ಕೊಲೆ- ರಿಕ್ಷಾ ಚಾಲಕನ ಬಂಧನ
ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್ ಪಿಂಟೋ ಎಂದು ಗುರುತಿಸಲಾಗಿದೆ. ಈತ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸುಜಿತ್ ಪಿಂಟೋನನ್ನು ಕರೆಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಮೃತ ರೌಡಿ ಶೀಟರ್ ಸುಜಿತ್ ಪಿಂಟೋ ಮಣಿಪಾಲದ ಬಾರ್ನಲ್ಲಿ ಕ್ರಿಮಿನಲ್ ಹಿನ್ನೆಲೆಯ ಗುರುಭಟ್ನ ಹಾಡುಹಗಲೇ ಹತ್ಯೆ, ಹಿರಿಯಡ್ಕ ಕೋಟ್ನಕಟ್ಟೆಯಲ್ಲಿ ನಡೆದ ರೌಡಿಶೀಟರ್ ವರ್ವಾಡಿ ಪ್ರವೀಣ್…
-

ಮಂಗಳೂರು: ಕಾಲೇಜಿನಲ್ಲಿ ಸೀನಿಯರ್ಗಳ ರ್ಯಾಗಿಂಗ್, ಜೂನಿಯರ್ ವಿದ್ಯಾರ್ಥಿಗಳಿಗೆ ಕೊಲೆ ಬೆದರಿಕೆ
ಮಂಗಳೂರು: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಅ. 2ರಂದು ದೂರುದಾರ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಪ್ರಾರ್ಥನೆಗೆಂದು ಕಾಲೇಜು ಆವರಣದ ಹೊರಗೆ ತೆರಳಿದ್ದ ವೇಳೆ ಹಿರಿಯ ವಿದ್ಯಾರ್ಥಿಗಳಾದ ಅಶಬ್ ಹಾಗೂ ಅಶ್ನಾಕ್ ಬಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅ. 15ರಂದು ದೂರುದಾರ…
-

ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ
ಮಂಗಳೂರು: ಯುವ ಜೋಡಿಯೊಂದಿಗಿನ ವಾಗ್ವಾದದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ, ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂದೆ ಇಟ್ಟು ಸ್ಥಳೀಯರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು. ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಯುವ ಜೋಡಿಯ ವಿರುದ್ಧವೂ ದೂರು ದಾಖಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮೃತ ಯುವಕನನ್ನು ಹೊಸಬೆಟ್ಟು ನಿವಾಸಿ ಸೋಮನಾಥ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಸರಗೋಡು ಮೂಲದ ಯುವಕ…
-

ಮಂಗಳೂರು: ಕಾನೂನುಬದ್ಧ ಗೋ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಕರಪತ್ರದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಗೋಹತ್ಯೆ ನಿಷೇಧಿತವಾದರೂ ಕಾನೂನುಬದ್ಧ ಮಾಂಸ ಸಾಗಣೆ ಹಾಗೂ ಮಾರಾಟಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ಬಜರಂಗದಳ ಮಂಗಳೂರು ಮಹಾನಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕರಪತ್ರವೊಂದು ಹರಿದಾಡುತ್ತಿದ್ದು, “ತಲಪಾಡಿಯಿಂದ ಜೋಗಟ್ಟಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ರಮ ಗೋಸಾಗಾಟದ ವಾಹನದ ಮಾಹಿತಿಯನ್ನು ಕಂಕನಾಡಿ ಪೊಲೀಸ್ ಠಾಣೆಗೆ ನೀಡಿದರೂ ನಿರ್ಲಕ್ಷಿಸಲಾಯಿತು. ಯಾವುದೇ ಕೇಸು ದಾಖಲಿಸದೆ ಕಸಾಯಿಖಾನೆಗೆ ತಲುಪಲು ಬಿಡಲಾಗಿದೆ” ಎಂದು ಆರೋಪಿಸಲಾಗಿತ್ತು. ಈ…
-

ರಸ್ತೆ ಸಮಸ್ಯೆಯ ವಿರುದ್ಧ ಮಂಗಳೂರಿನ ಕದ್ರಿ ಶಿವಭಾಗ್ ರಸ್ತೆಯಲ್ಲಿ ವ್ಯಂಗ್ಯಭರಿತ ಬ್ಯಾನರ್!
ಮಂಗಳೂರು ನಗರದ ಕದ್ರಿ ಶಿವಭಾಗ್ನ 5ನೇ ಅಡ್ಡ ರಸ್ತೆಯಲ್ಲಿ ಹಾಕಲಾಗಿರುವ ಒಂದು ಬ್ಯಾನರ್ ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ರಸ್ತೆ ಸಮಸ್ಯೆಯ ವಿರುದ್ಧ ನಾಗರಿಕರು ವಿನೂತನವಾಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. “ನಿಧಾನವಾಗಿ, ಎಚ್ಚರಿಕೆಯಿಂದ ಸಾಗಿರಿ… ಓಟು ಬೇಡಿದವರ ಸ್ಮಾರಕ ಹೊಂಡಗಳಿವೆ!” ಎಂಬ ವ್ಯಂಗ್ಯಭರಿತ ಸಂದೇಶದ ಮೂಲಕ ರಸ್ತೆಗಳಲ್ಲಿ ನಿರ್ಮಾಣವಾಗಿರುವ ಹೊಂಡಗಳ ದುಸ್ಥಿತಿಯನ್ನು ಜನಪ್ರತಿನಿಧಿಗಳ ಗಮನಕ್ಕೆ ತರಲು ನಾಗರಿಕರು ಮುಂದಾಗಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಮತಯಾಚನೆಗಾಗಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಎಷ್ಟು…
-

ಟೈಗರ್ ಶ್ರಾಫ್ ಕಾರಿನ ಮೇಲಿನ ಗುಂಡಿನ ದಾಳಿ ಪ್ರಕರಣ: ಸೋನಿಪತ್ನಲ್ಲಿ ಇಬ್ಬರ ಬಂಧನ – ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದು, ಹರಿಯಾಣದ ಸೋನಿಪತ್ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬೆಳವಣಿಗೆಯೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಬ್ಬನನ್ನು ಗುಜರಾತ್ ಪೊಲೀಸರು ಬಂಧಿಸಿದ ಕೆಲವೇ ಗಂಟೆಗಳಲ್ಲಿ, ಮುಂಬೈ ಪೊಲೀಸರು ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಸೋನಿಪತ್ನಲ್ಲಿ ವಶಕ್ಕೆ ಪಡೆದಿದ್ದಾರೆ. ದಾಳಿಗೆ ಅಗತ್ಯವಾದ ಶಸ್ತ್ರಾಸ್ತ್ರಗಳನ್ನು ವ್ಯವಸ್ಥೆಗೊಳಿಸುವಲ್ಲಿ…
-

ಉಡುಪಿ: ಅನ್ಲೋಡ್ ಮಾಡುವಾಗ ಅವಘಡ- ಗಾಜಿನ ಬ್ಲಾಕ್ಗಳ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸಾವು
ಉಡುಪಿ: ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್ ಅವರು ಶಿರೂರು ಮಠದ ದಿವಂಗತ ಲಕ್ಷ್ಮೀವರ ತೀರ್ಥ ಶ್ರೀಪಾದರ ಆಪ್ತರಾಗಿದ್ದರು. ಶ್ರೀಗಳ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು. ಉಡುಪಿ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿದರೂ ಫಲಾಪೇಕ್ಷೆಯಿಲ್ಲದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಸಾರ್ವಜನಿಕರ ನೆರವಿಗೆ ಧಾವಿಸುತ್ತಿದ್ದರು. ಕಲ್ಸಂಕ ಜಂಕ್ಷನ್ನಲ್ಲಿ ವಾಹನ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











