Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: ಕಾರು ಖರೀದಿ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ..!! ಹಣ ಕೇಳಿದಾಗ ಕೊಲೆ ಬೆದರಿಕೆ, ಆರೋಪಿಗಳು ಸೌದಿ–ಖತಾರ್ಗೆ ಪರಾರಿ
ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ. ವಂಚನೆಗೆ ಒಳಗಾದ ವ್ಯಕ್ತಿ ಅಶ್ರಫ್ MRPL ಉದ್ಯೋಗಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಎಂದು ಆರೋಪಿಸಲಾಗಿದೆ. ಪೀಡಿತ ವ್ಯಕ್ತಿಯ ಸ್ನೇಹಿತ ನಾದ ಗಂಗಾಧರ ಅವರು ಹರಿಯಾಣ ರಾಜ್ಯದಿಂದ HR-83-0630 ನಂಬರ್ನ ಇನೋವಾ ಕಾರನ್ನು ಖರೀದಿಸಿ ತಂದಿದ್ದರು. ನಂತರ ಕಾರು ಅವರಿಗೆ…
-

ಉಡುಪಿ: ಕೋಡಿಬೆಂಗ್ರೆ ಬಳಿ ಟೂರಿಸ್ಟ್ ಬೋಟ್ ದುರಂತ ಪ್ರಕರಣ: ಇಬ್ಬರು ಸಾವು,ನಾಲ್ವರ ಸ್ಥಿತಿ ಗಂಭೀರ
ಉಡುಪಿ: ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪ್ರವಾಸಿಗರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ ತಂಡದವರು ಎರಡು ಪ್ರವಾಸಿ ಬೋಟ್ಗಳಲ್ಲಿ ವಿಹಾರಕ್ಕೆ ತೆರಳಿದ್ದ ವೇಳೆ, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ ಮಗುಚಿ ಬಿದ್ದಿತ್ತು. ಅಪಘಾತದಲ್ಲಿ ಸಮುದ್ರದಲ್ಲಿ ಮುಳುಗಿದ್ದ ಪ್ರವಾಸಿಗರನ್ನು…
-

ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್!
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ, ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಸಿಕ್ಕಿದೆ. ತನಿಖೆ ವೇಳೆ ಬೆಚ್ಚಿ ಬೆಳಿಸುವ ಮಾಹಿತಿಯನ್ನು ಆರೋಪಿ ಕರ್ನಲ್ ಕುರೈ ಬಿಚ್ಚಿಟ್ಟಿದ್ದಾನೆ. ಆರೋಪಿಗೆ ಪ್ರೀತಿಗಿಂತ ಆಕೆಯ ಮೇಲೆ ವಿಕೃತಿ ಮನಸ್ಸು ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಕರ್ನಲ್ ಶರ್ಮಿಳಾ ಮೇಲೆ ಲೈಂಗಿಕ ವಿಕೃತಿ ಹೊಂದಿದ್ದ ಅಲ್ಲದೇ ಶರ್ಮಿಳಾ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ವಿಚಾರಣೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ತನಿಖೆ ಬೆಳೆ…
-

ಉಡುಪಿ: ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ವಂಚನೆ..! ಐವರ ಬಂಧನ
ಉಡುಪಿ: ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15 ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿದ್ದಾಗಿ ಬಂದಿರುವ ದೂರಿನ ಆಧಾರದ ಮೇಲೆ ಕೋಟ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25), ಕೊಳ್ಕೆಬೈಲುವಿನ ಸೃಜನ್ ಶೆಟ್ಟಿ(28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ(38) ಬಂಧಿತ ಆರೋಪಿಗಳು. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬಾತನಿಗೆ ಸುಮಾರು ಒಂದು ವರ್ಷದ ಹಿಂದೆ ಆನ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಶಿರಿಯಾರ ನಿವಾಸಿ ಪ್ರದೀಪ್ ಪರಿಚಯವಾಗಿತ್ತು. ಪ್ರದೀಪ್ ನೀಡಿದ ಸೂಚನೆಯಂತೆ ಸಂದೇಶ್ ಕುಲಾಲನು…
-

ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅನಧಿಕೃತ ಸರೋವರ ಬಾರ್ & ರೆಸ್ಟೋರೆಂಟ್..!! ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಯ ಬೆಂಬಲ..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿಯ ಬಗ್ಗೆ ನಾವು ಈ ಹಿಂದೆ ಎರಡೂ ಬಾರಿ ವರದಿಯನ್ನು ಮಾಡಿದ್ದೇವು.ಆದರೆ ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಎಂಬಾತನು ಕಟ್ಟಡ ಪರವಾನಿಗೆಯನ್ನು ಪಡೆಯದೇ ರಾಜರೋಷವಾಗಿ ಅಕ್ರಮ ಕಟ್ಟಡದ ನಿರ್ಮಾಣಕ್ಕೆ ಸುಮಾರು ಮೂವತ್ತು ಕಾರ್ಮಿಕರನ್ನು ಸೇರಿಸಿ ರಾತ್ರಿ ಹಗಲು ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ,…
-

ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು…
-

ಉಡುಪಿ: ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಹಲ್ಲೆ ಪ್ರಕರಣದ ಆರೋಪಿ ಕಿರಣ್ ಪಿಂಟೋ ಬಂಧನ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಂಕನಿಡಿಯೂರು ನಿವಾಸಿ ಕಿರಣ್ ಪಿಂಟೋ(49) ಬಂಧಿತ ಆರೋಪಿ. ಜ.18ರಂದು ಬ್ರಹ್ಮಾವರದ ಬಾರ್ ಎದುರು ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಿರಣ್ ಪಿಂಟೋ, ಗಾಯಗೊಂಡು ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದನು. ಈತ ಜ.21ರಂದು ಬೆಳಗಿನ ಜಾವ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ ಬ್ರಹ್ಮಾವರ ಪೊಲೀಸರು ಜ.24ರಂದು ಬಂಧಿಸಿ, ನ್ಯಾಯಾಲಯಕ್ಕೆ…
-

ಕಡಬ: ತಂದೆಗೆ ಚೂರಿಯಿಂದ ಇರಿದು ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!
ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ, ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೋಕ್ಷ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತಂದೆ ವಸಂತ ಅಮೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ಮೂಲತಃ…
-

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ…
-

ವೈದ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಆರೆಸ್ಟ್..!!
ಕಾರವಾರ: ಸಾಮಾಜಿಕ, ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ್ದಂತ ಕುಟುಂಬಕ್ಕೆ ಸೇರಿದ್ದಂತ ರಾಜೀವ್ ಪಿಕಳೆ ಅವರನ್ನು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನನ್ನು ತೇಜೋವಧೆ ಮಾಡಿದ ಕಾರಣಕ್ಕಾಗಿ ರಾಜೀವ್ ಪಿಕಳೆ ಎನ್ನುವಂತ ವೈದ್ಯರೊಬ್ಬರು ತಮ್ಮ ಡಬ್ಬಲ್ ಬ್ಯಾರಲ್ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸುಭಾಷ್, ಹರಿಶ್ಚಂದ್ರ ಎಂಬುದಾಗಿ ತಿಳಿದು ಬಂದಿದೆ. ಅಂಕೋಲಾ ಠಾಣೆಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











