Category: ಬ್ರೇಕಿಂಗ್ ನ್ಯೂಸ್
-

ಮಂಗಳೂರಿನಲ್ಲಿ ಮುಂದುವರಿದ ಆಹಾರ ಮಳಿಗೆಗಳ ತಪಾಸಣೆ: ಮೆಕ್‌ಡೊನಾಲ್ಡ್ಸ್ ಪರಿಶೀಲನೆ
ಮಂಗಳೂರು: ನಗರದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೈಗೊಂಡಿರುವ ಆಹಾರ ಮಳಿಗೆಗಳ ತಪಾಸಣಾ ಕಾರ್ಯಾಚರಣೆ ಮುಂದುವರಿದಿದ್ದು, ರವಿವಾರ ನಗರದ ಕೆ.ಎಸ್.ರಾವ್ ರಸ್ತೆಯ ಮಾಲ್‌ನಲ್ಲಿರುವ ಬಹುರಾಷ್ಟ್ರೀಯ ಸಂಸ್ಥೆ ‘ಮೆಕ್‌ಡೊನಾಲ್ಡ್ಸ್’ (McDonald’s) ಔಟ್‌ಲೆಟ್ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಶನಿವಾರದಂದು ಅದೇ ಮಾಲ್‌ನಲ್ಲಿರುವ ಕೆಎಫ್‌ಸಿ (KFC) ಮಳಿಗೆಯ ಮೇಲೆ ದಾಳಿ ನಡೆಸಿ ಕಲುಷಿತ ಆಹಾರ ಪೂರೈಕೆಯನ್ನು ಪತ್ತೆ ಹಚ್ಚಿದ್ದ ಅಧಿಕಾರಿಗಳ ತಂಡ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದಂತೆ ಎರಡನೇ ದಿನವೂ ತಮ್ಮ ಜಾಗೃತಿ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಜಿಲ್ಲಾ…
-

ಕಡಬ: ಕುಟುಂಬದ ಮೇಲೆ ಅನೈತಿಕ ಪೊಲೀಸ್‌ಗಿರಿ ಆರೋಪ- 9 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಕಡಬ ತಾಲೂಕಿನ ಕೋಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಗುಂಪೊಂದು ನೈತಿಕ ಪೊಲೀಸ್‌ಗಿರಿ ನಡೆಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 12ರ ರಾತ್ರಿ ಈ ಕೃತ್ಯ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಮೆಲ್ಕಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಲ್ಪೆಯ 18 ವರ್ಷದ ಯುವತಿ, ಆಗಸ್ಟ್ 12ರಂದು ಕೆಲಸ ಮುಗಿದ ಬಳಿಕ ತಮ್ಮ ಅಂಗಡಿ…
-

ಮಂಗಳೂರು KFC ವಿರುದ್ಧ ಗಂಭೀರ ಆರೋಪ: ಹಳೆಯ ಚಿಕನ್ ಬಳಕೆ ಶಂಕೆ, FSSAI ನವೀಕರಣಕ್ಕೆ ವಿರೋಧ
ಮಂಗಳೂರು: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಚಿಕನ್‌ನಿಂದ ದುರ್ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ, ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಶನಿವಾರ ದಿಢೀರ್ ಪರಿಶೀಲನೆ ನಡೆಸಿದರು. ತಪಾಸಣೆ ವೇಳೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಚಿಕನ್ ಉತ್ಪನ್ನಗಳ ದಾಸ್ತಾನು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಉತ್ಪನ್ನಗಳಿಗೆ ಆರು ತಿಂಗಳಿಗಿಂತ ಹೆಚ್ಚಿನ ಶೆಲ್ಫ್ ಲೈಫ್ ಇದೆ ಎಂದು ಮಳಿಗೆ ಸಿಬ್ಬಂದಿ ಅಧಿಕಾರಿಗಳಿಗೆ…
-

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ..!!
ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ…
-

ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ಆದೇಶ
ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 102ರ ಅಡಿಯಲ್ಲಿ (ಹಾಗೂ ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – BNSS ಅಡಿಯಲ್ಲಿ) ತನಿಖಾಧಿಕಾರಿಗಳಿಗೆ ನೀಡಲಾಗಿರುವ ಅಧಿಕಾರಗಳ ಕುರಿತಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ತನಿಖಾ ಹಂತದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಅಥವಾ ಅನುಮಾನಾಸ್ಪದ ಹಣಕಾಸು ವಹಿವಾಟು ನಡೆದಿರುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಅಧಿಕಾರ ತನಿಖಾಧಿಕಾರಿಗೆ ಇದೆ. ಈ ಪ್ರಕ್ರಿಯೆ ನಡೆಸಲು ಪ್ರತಿ ಬಾರಿಯೂ ಮ್ಯಾಜಿಸ್ಟ್ರೇಟ್ ಅಥವಾ ನ್ಯಾಯಾಲಯದ ಪೂರ್ವಾನುಮತಿಯ ಅಗತ್ಯವಿರುವುದಿಲ್ಲ ಎಂದು…
-

ಮಂಗಳೂರು ಸಿಟಿ ಸೆಂಟರ್‌ನ KFC ಮೇಲೆ ಆರೋಗ್ಯ ಇಲಾಖೆ ದಾಳಿ- ಕೊಳೆತ ಚಿಕನ್ ಮಾಂಸ ಪತ್ತೆ
ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿರುವ KFC ಔಟ್‌ಲೆಟ್‌ನಲ್ಲಿ ಕೊಳೆತ ಚಿಕನ್ ನೀಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಹಲವು ತಿಂಗಳ ಹಿಂದೆ ಪ್ಯಾಕ್ ಮಾಡಲಾಗಿದ್ದ ಚಿಕನ್ ಮಾಂಸ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಅಧಿಕಾರಿಗಳು ಮೂರು ಮಾದರಿಯ ಚಿಕನ್ ಹಾಗೂ ಬಳಸಲಾಗುತ್ತಿದ್ದ ಎಣ್ಣೆಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರಿಶೀಲನೆಯ ಬಳಿಕ KFC ಔಟ್‌ಲೆಟ್‌ನ್ನು ಬಂದ್ ಮಾಡಲಾಗಿದೆ. ಪ್ರಯೋಗಾಲಯದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು…
-

ಪುತ್ತೂರು: ಅಕ್ರಮ ಮರ ಸಾಗಾಟ- ಲಾರಿ, ಮರದ ದಿಮ್ಮಿಗಳ ಸಹಿತ ಆರೋಪಿ ಬಂಧನ
ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ…
-

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಅರೆಸ್ಟ್!!
ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು…
-

ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ, ಪ್ರಕರಣ ದಾಖಲು
ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ…
-

ಕೋಟಿ ಕೋಟಿ ವಂಚನೆ ಕೇಸ್: ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣನವರ್ ಅರೆಸ್ಟ್, 12 ದಿನ ED ಕಸ್ಟಡಿಗೆ
ತಿಂಗಳಿಗೆ ಶೇಕಡಾ 3ರಷ್ಟು ಅಧಿಕ ಲಾಭಾಂಶ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಗೆ ಬರೋಬ್ಬರಿ ₹2,110 ಕೋಟಿ ವಂಚಿಸಿದ ಆರೋಪದಡಿ ‘ಶಿವಂ ಅಸೋಸಿಯೇಟ್ಸ್’ ಮುಖ್ಯಸ್ಥ ಶಿವಾನಂದ ಸಿದ್ದಪ್ಪ ನೀಲಣ್ಣವರ್‌ನನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಮಂಗಳೂರು ಉಪ ವಲಯ ಕಚೇರಿಯ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಶಿವಾನಂದ್‌ನನ್ನು ಬಂಧಿಸಿದ್ದು, ವಿಚಾರಣೆಗಾಗಿ 12 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ವಂಚನೆ ಪ್ರಕರಣದ ಎಫ್‌ಐಆರ್ ಆಧಾರದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











