Category: ಬ್ರೇಕಿಂಗ್ ನ್ಯೂಸ್
-

ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ!!
ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 32 ಲಕ್ಷ ರೂ. ಕಳೆದುಕೊಂಡ ಘಟನೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು. 17ರಂದು ಲಕ್ಷ್ಮಣ್ ಎಂಬವರಿಗೆ ಫೇಸ್ ಬುಕ್ನಲ್ಲಿ ಒಂದು ವೀಡಿಯೋ ಬಂದಿದ್ದು ಅದರಲ್ಲಿ JB (Julius Baer VIP Group) ಮತ್ತು 5paisa ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಲಾಭಾಂಶ ಕೊಡುವುದಾಗಿ ಇತ್ತು. ಅದರಲ್ಲಿದ್ದ ಲಿಂಕನ್ನು ಲಕ್ಷ್ಮಣ್ ಅವರು ಕ್ಲಿಕ್ ಮಾಡಿದಾಗ JB (Julius Baer VIP…
-

ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ
ಸರ್ಕಾರಿ ಬಿಲ್ಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಮತ್ತು ಮಂಜೂರಾತಿಗಾಗಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಬೆನ್ನಲ್ಲೇ, ರಾಜಧಾನಿಯ ವಿವಿಧ ಖಜಾನೆ (ಟ್ರೆಜರಿ) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಭಾರಿ ಪ್ರಮಾಣದ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಹಾಗೂ ಎಡಿಜಿಪಿ ಮನೀಶ್ ಖರ್ಭೀಕರ್ ಅವರ ನೇತೃತ್ವದಲ್ಲಿ ಈ ಮೆಗಾ ಕಾರ್ಯಾಚರಣೆ ನಡೆದಿದೆ. ಒಟ್ಟು 11 ನ್ಯಾಯಾಂಗ ಅಧಿಕಾರಿಗಳು ಮತ್ತು 39…
-

ಮಂಗಳೂರು: ಶೇರ್ ಟ್ರೇಡಿಂಗ್ನಲ್ಲಿ ದುಪ್ಪಟ್ಟು ಲಾಭದ ಆಮಿಷ- ₹12.87 ಲಕ್ಷ ವಂಚನೆ
ಮಂಗಳೂರು: ವಾಟ್ಸ್ಆ್ಯಪ್ ಗ್ರೂಪ್ ಹಾಗೂ ‘JB X One’ ಹೆಸರಿನ ನಕಲಿ ಆ್ಯಪ್ ಮೂಲಕ ಶೇರ್ ಟ್ರೇಡಿಂಗ್ನಲ್ಲಿ ದುಪ್ಪಟ್ಟು ಲಾಭಾಂಶ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹12,87,108 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ 44 ವರ್ಷದ ವ್ಯಕ್ತಿಗೆ ಜೂನ್ 13, 2026 ರಂದು ವಾಟ್ಸ್ಆ್ಯಪ್ನಲ್ಲಿ ‘Julius Baer Group Ltd’ ಕಂಪನಿಯ ಹೆಸರಿನ ‘B1062 Prime Leaders’ ಎಂಬ ಗ್ರೂಪ್ಗೆ ಸೇರಿಸಲಾಗಿತ್ತು. ಅದರಲ್ಲಿ ಅಪರಿಚಿತ ವ್ಯಕ್ತಿಗಳು ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ…
-

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ
ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್ಸೈಕಲ್ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ…
-

ಮಂಗಳೂರು: ತಂಗಿ ಆತ್ಮಹತ್ಯೆ ದುರಂತ ಮಾಸುವ ಮುನ್ನವೇ ಅಣ್ಣ ಶವವಾಗಿ ಪತ್ತೆ!! ಏನಿದು ದುರಂತ ಈ ಸುದ್ದಿ ಓದಿ
ಮಂಗಳೂರು : ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ. ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ದುರ್ದೈವಿ. ಕಳೆದ ಜೂನ್ ತಿಂಗಳಿನಲ್ಲಿ ಪಾಲಾದ ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್…
-

‘SIR’ ಪ್ರಕ್ರಿಯೆ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ ವೋಟರ್ ಐಡಿ ಡಿಲೀಟ್
ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್ಐಆರ್ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಸ್ಯಾಂಡಲ್ವುಡ್ ಹಾಗೂ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ರದ್ದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯ ನೆಪದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 65 ಲಕ್ಷ ಜನರ ಮತದಾರರ ಹಕ್ಕನ್ನು…
-

ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್ಗೇಟ್ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು- ಸುಮಾರು ₹7 ಲಕ್ಷ ವಂಚನೆ ಯತ್ನ!!
ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಬ್ಬರ್ ಮರ ತುಂಬಿದ್ದ ಲಾರಿಯನ್ನು ಪಡುಬಿದ್ರೆ ಟೋಲ್ಗೇಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮುದ್ರಾಡಿಯ ಸುಜಾತ ಶೆಟ್ಟಿ, ವಿಜೇಂದ್ರ ಶೆಟ್ಟಿ ಅವರ ಮನೆ, ಮುದ್ರಾಡಿಯ ಆಶಾ ಆಚಾರ್ ಅವರ ಮನೆ ಹಾಗೂ ಮುನಿಯಾಲಿನ ಸೀಜು ಎಂಬವರ ಜಾಗದಲ್ಲಿದ್ದ ರಬ್ಬರ್…
-

ನದಿಗೆ ರಾಸಾಯನಿಕ ತ್ಯಾಜ್ಯ ಬಿಟ್ಟವರಿಗೆ ಬಿಗ್ ಶಾಕ್: ಕೈಗಾರಿಕೆ ಮುಚ್ಚಲು ಸೂಚನೆ
ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲೆ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H ಇಂಡಸ್ಟ್ರೀಸ್, ಮೆ. ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ. ಹಿಮಾಲಯ ಕೈಗಾರಿಕೆಗಳಿಗೆ ತತ್…
-

ದ.ಕ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿ ಹೆಸರು: ಮುಖ್ಯ ಕಾರ್ಯದರ್ಶಿಗೆ ದೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಪ್ರದರ್ಶಿಸಲಾಗಿದ್ದು, ಇದಕ್ಕೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ. ಆದರೆ ಇಲ್ಲಿ ಸಂಗಾತಿಯ ಹೆಸರು ಸೇರಿಸಿರುವುದು…
-

ಉಡುಪಿ: ಸಾಯಿರಾಜ್ ಸೊಸೈಟಿಯ CEO ನೇಣು ಬಿಗಿದು ಆತ್ಮಹತ್ಯೆ..!!
ಉಡುಪಿಯ ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ತಾವು ವಾಸವಿದ್ದ ಅಂಬಲಪಾಡಿ ಸಮೀಪದ ಫ್ಲಾಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











