Category: ಬ್ರೇಕಿಂಗ್ ನ್ಯೂಸ್
-

ಉಡುಪಿ: ಸಾಯಿರಾಜ್ ಸೊಸೈಟಿಯ CEO ನೇಣು ಬಿಗಿದು ಆತ್ಮಹತ್ಯೆ..!!
ಉಡುಪಿಯ ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ತಾವು ವಾಸವಿದ್ದ ಅಂಬಲಪಾಡಿ ಸಮೀಪದ ಫ್ಲಾಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.
-

ರಾಜ್ಯದ ಎಲ್ಲ ಹೋಟೆಲ್ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್
ರಾಜ್ಯದ ಹೋಟೆಲ್ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ. ಹೋಟೆಲ್ಗಳ ಅಡುಗೆ ಮನೆಯಲ್ಲಿ ಆಹಾರ ತಯಾರಿಸುವ ವಿಧಾನ ಮತ್ತು ಅಲ್ಲಿನ ನೈರ್ಮಲ್ಯವನ್ನು ಗ್ರಾಹಕರೇ ನೇರವಾಗಿ ವೀಕ್ಷಿಸುವಂತೆ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಹಕರಿಗೆ ಪೂರೈಸಲಾಗುವ ಆಹಾರ ಹೇಗೆ ಸಿದ್ಧವಾಗುತ್ತಿದೆ ಮತ್ತು ಅಲ್ಲಿ ನೈರ್ಮಲ್ಯ ಪಾಲನೆಯಾಗುತ್ತಿದೆಯೇ ಎಂಬ ಸಂಪೂರ್ಣ ಮಾಹಿತಿ…
-

ಹೋಟೆಲ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ವಿಚಾರ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಯುಟಿ ಖಾದರ್
ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಯು ಟಿ ಖಾದರ್ ಮಾತನಾಡಿ, ತಪಾಸಣೆ ನಮ್ಮ ಜವಾಬ್ದಾರಿ ಅದು ಮುಂದುವರಿಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳಷ್ಟು ಕಡೆ ದಾಳಿ ಮಾಡಿ ಸ್ಯಾಂಪಲ್ಸ್ ಗಳನ್ನು ಪಡೆಯಲಾಗಿದೆ. ಯಾವುದೇ ಪ್ರದೇಶಕ್ಕೆ ಈ ದಾಳಿಯನ್ನು ಸೀಮಿತ…
-

ಹೋಟೆಲ್ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ
ಬೆಂಗಳೂರಿನ ಪ್ರಮುಖ ನಕ್ಷತ್ರ (ಸ್ಟಾರ್) ಹೋಟೆಲ್ಗಳ ಅಡುಗೆ ಮನೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ದಿಢೀರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. “ಹೋಟೆಲ್ ಎಷ್ಟೇ ದೊಡ್ಡದಿದ್ದರೂ ಅಥವಾ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಕಾನೂನು ಎಲ್ಲರಿಗೂ ಒಂದೇ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡಿದರೆ ಉದ್ಯಮ ಪರವಾನಗಿ ರದ್ದುಪಡಿಸಿ ಜೈಲಿಗೆ ಕಳುಹಿಸುವುದು ಗ್ಯಾರಂಟಿ” ಎಂದು ಅವರು ಎಚ್ಚರಿಸಿದ್ದಾರೆ. ದಾಳಿಯ ಹಿನ್ನೆಲೆ ಮತ್ತು ಕಂಡುಬಂದ ಲೋಪಗಳು ಆಹಾರ ಸುರಕ್ಷತಾ…
-

ಉಡುಪಿ: ಯುಪಿಸಿಎಲ್ ಗುತ್ತಿಗೆ ಕಾಮಗಾರಿ ವಿಚಾರಕ್ಕೆ ಡೇವಿಡ್ ಡಿಸೋಜ ಹತ್ಯೆ-ಶೂಟರ್ ಸೇರಿ ಮೂವರು ಆರೋಪಿಗಳ ಬಂಧನ, 9 ಎಂಎಂ ಪಿಸ್ತೂಲ್ ವಶ
ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವ್ಯವಹಾರವೇ ಕೊಲೆಗೆ ಪ್ರಮುಖ ಕಾರಣ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆರೋಪಿಗಳ ಬಂಧನದ ಬಳಿಕ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣದ ಎ1 ಆರೋಪಿ ಶೂಟರ್ ರಾಜು ಎಂಬಾತನ ಬ್ಯಾಂಕ್ ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿಯಾಗಿರುವುದು…
-

ಸಂಜೀವಿನಿ ಒಕ್ಕೂಟದ ಮತ್ತೊಂದು ಆಕ್ರಮ: ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗ
ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ. ಒಕ್ಕೂಟದಲ್ಲಿ ಮುಖ್ಯ ಪುಸ್ತಕ ಬರಹಗಾರರಾಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ಈ ಆರೋಪ ಮಾಡಲಾಗಿದೆ. 2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಹಣವನ್ನು ಒಕ್ಕೂಟಕ್ಕೆ ಮರುಪಾವತಿಸಿದ್ದರೂ, ಆ ಮೊತ್ತವನ್ನು ಖಾತೆಗೆ ಜಮಾ ಮಾಡದೆ ಎರಡು ಖಾತೆ…
-

ಮಂಗಳೂರು: ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವವರ ವಿರುದ್ಧ ಕ್ರಮ ಯಾವಾಗ?
ಮಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ತೆರವು ಕಾರ್ಯಾಚರಣೆ ರಭಸವಾಗಿ ನಡೆಯುತ್ತಿದೆ. ರಸ್ತೆ ಬದಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ ಇದೇ ವೇಳೆ ಸಾರ್ವಜನಿಕರಲ್ಲಿ ಒಂದು ಪ್ರಶ್ನೆ ಮೂಡಿದೆ. ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವವರ ವಿರುದ್ಧ ಕ್ರಮ ಯಾವಾಗ? ಬೀದಿ ಬದಿ ವ್ಯಾಪಾರಿಗಳಿಗೆ ಮಾತ್ರ ಕಾನೂನು ಅನ್ವಯವಾಗುತ್ತದೆಯೇ? ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡ ನಿರ್ಮಾಣ ಮಾಡಿರುವವರಿಗೂ ಇದೇ ಕಾನೂನು ಅನ್ವಯವಾಗುವುದಿಲ್ಲವೇ? ನಗರದ…
-

ಮಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣ- ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಕೇವಲ ಮೂರು ದಿನಗಳಲ್ಲೇ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಸಂಪೂರ್ಣ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಾಲ ಸುಬ್ರಮಣ್ಯ (49), ಉರ್ವ ಮಟದಕಣಿ ನಿವಾಸಿ ಹಾಗೂ ಶ್ಯಾಮ್ ಕುಮಾರ್ (33), ತೊಕ್ಕೊಟ್ಟು ಮೂಲದ, ಪ್ರಸ್ತುತ ಮಣ್ಣಗುಡ್ಡ ನಿವಾಸಿ ಹಾಗೂ ಆಟೋರಿಕ್ಷಾ ಮಾಲೀಕ ಎಂದು…
-

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಕೊಲೆ ಪ್ರಕರಣ- ಆರೋಪಿಗೆ ಪೊಲೀಸರಿಂದ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಜು ಎಂಬಾತನಿಗೆ ಪೊಲೀಸರು ಗುಂಡೇಟು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ. ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು…
-

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿ’ಸೋಜಾ ಮೇಲೆ ಗುಂಡಿನ ದಾಳಿ..!! ಗಂಭೀರ ಗಾಯಗೊಂಡ ಡೇವಿಡ್ ದಾರಿಮಧ್ಯೆ ಸಾವು
ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











