Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ
ಮಂಗಳೂರು: ಮನೆ ದುರಸ್ತಿ ಕಾಮಗಾರಿ ವೇಳೆ ಸುಮಾರು ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಜಹೀರುದ್ದೀನ್ (24), ನಿರಾಜುದ್ದೀನ್ ಅವರ ಪುತ್ರ, ಮೂಲತಃ ಉತ್ತರ ಪ್ರದೇಶದ ಬಲರಾಮ್ಪುರ ಜಿಲ್ಲೆಯ ಮುಜಾಹನಿ, ಗುಮಾರಿ ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದ ಅಜಿಜುದ್ದೀನ್ ರಸ್ತೆಯಲ್ಲಿ ವಾಸವಾಗಿರುವವನಾಗಿ ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಪ್ರದೇಶದ…
-

ಬೃಹತ್ ನಕಲಿ ನೋಟು ಜಾಲ ಪತ್ತೆ : 1.60 ಲಕ್ಷ ನಕಲಿ ನೋಟು ಜಪ್ತಿ, ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರಿನಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನಮಣಿಕೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ಅರವಿಂದ ಹಾಗೂ ಚೆನ್ನೈ ಮೂಲದ ವೆಂಕಟಸುಬ್ರಮಣಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. 1.69 ಲಕ್ಷ ಮೌಲ್ಯದ ನಕಲಿ ನೋಟು ವಶಕ್ಕೆ ಪಡೆದಿದ್ದಾರೆ ಅಲ್ಲದೆ 1.60 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಲ್ಯಾಪ್ಟಾಪ್ ಕೂಡ ಜಪ್ತಿ ಮಾಡಿಕೊಂಡಿದ್ದಾರೆ. ಇಬ್ಬರನ್ನು ಅರೆಸ್ಟ್ ಮಾಡಿ ಇದೀಗ…
-

ವಸತಿ ಶಾಲೆಯ 7ನೇ ತರಗತಿ ದಾಖಲಾತಿಗೆ 10,000 ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ
ವಿದ್ಯಾರ್ಥಿನಿಯೊಬ್ಬಳ ದಾಖಲಾತಿಗಾಗಿ ಪೋಷಕರಿಂದ ಲಂಚದ ಹಣ ಪಡೆಯುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಸೋಮವಾರ (ಜುಲೈ 20) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ನಾಮದೇವ ಎಂಬುವವರೇ ಭ್ರಷ್ಟಾಚಾರ ನಿಗ್ರಹ ದಳದ ಜಾಲಕ್ಕೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಡ್ರಮ್ ಸೆಟ್ ನೆಪದಲ್ಲಿ ಹಣಕ್ಕೆ ಬೇಡಿಕೆ ಬಾಲಕಿಯೊಬ್ಬಳನ್ನು ಶಾಲೆಯ 7ನೇ ತರಗತಿಗೆ ಸೇರಿಸಿಕೊಳ್ಳಲು ಪ್ರಾಂಶುಪಾಲ ನಾಮದೇವ ಅವರು ಪೋಷಕರಿಂದ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಾಲೆಗೆ ಡ್ರಮ್ ಸೆಟ್ ಖರೀದಿಸಬೇಕಿದೆ…
-

ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಖತರ್ನಾಕ್ ಕಿಲಾಡಿ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನಕ್ಕೊಂದರಂತೆ ಹೆಚ್ಚಾಗುತ್ತಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು ಉದ್ಯಮಿಯೊಬ್ಬರಿಗೆ ಬರೋಬ್ಬರಿ 87 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಜಾಲ ಬೆಳಕಿಗೆ ಬಂದಿದೆ. ಹಂತ ಹಂತವಾಗಿ ಕೋಟಿ ರೂಪಾಯಿಯ ಸಮೀಪದ ಮೊತ್ತವನ್ನು ಕಸಿದು, ಸದ್ಯ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಮಹಿಳೆಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕು ನಿವಾಸಿಯಾಗಿರುವ ಉದ್ಯಮಿಯೊಬ್ಬರಿಗೆ 2024ರ…
-

₹30,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಸೆಸ್ಕಾಂ ಎಇ
ಹೊಸದಾಗಿ ನಿರ್ಮಿಸಿದ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರಿ ನಿಯಮಿತ ಶುಲ್ಕದ ಹೊರತಾಗಿಯೂ ಭಾರಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆಸ್ಕಾಂ ಸಹಾಯಕ ಎಂಜಿನಿಯರ್ (AE) ಒಬ್ಬರು ಈಗ ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ಮಂಡ್ಯದ ಸೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ್ ಬಂಧಿತ ಅಧಿಕಾರಿಯಾಗಿದ್ದು, ದೂರುದಾರರಿಂದ ಮುಂಗಡ ಹಣ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರೊಬ್ಬರು ತಮ್ಮ ನೂತನ ಮನೆಗೆ ವಿದ್ಯುತ್ ಸಂಪರ್ಕ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ನಿಯಮಾನುಸಾರ ಪಾವತಿಸಬೇಕಾದ…
-

ಉಡುಪಿ: ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ನೀಡುವುದಾಗಿ ನಂಬಿಸಿ 5.11 ಲಕ್ಷಕ್ಕೂ ಅಧಿಕ ಹಣ ವಂಚನೆ
ಉಡುಪಿ: ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ನೀಡುವುದಾಗಿ ನಂಬಿಸಿ 66 ವರ್ಷದ ವ್ಯಕ್ತಿಯಿಂದ ಸುಮಾರು 5.11 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಕಡಿಯಾಳಿ ನಿವಾಸಿ ಉಸ್ಮಾನ್ ಸಾಹೇಬ್ (66) ಅವರು ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ಪಡೆಯುವ ಉದ್ದೇಶದಿಂದ ಹಂತ ಹಂತವಾಗಿ ಆರೋಪಿಗಳ ಸೂಚನೆಯಂತೆ ಹಣ ವರ್ಗಾಯಿಸಿದ್ದರು. ಜೂನ್ 27ರಂದು 29,000 ರೂ, ಜುಲೈ 9ರಂದು 84,882 ರೂ. ಹಾಗೂ…
-

ಮಂಗಳೂರು: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ
ಮಂಗಳೂರು: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಸದ್ಯ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆಗೈದ ಆರೋಪಿ ಎನ್ನಲಾಗಿದ್ದು ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಲಗಿದ್ದಲ್ಲೇ…
-

CJP ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್ : ದೆಹಲಿಯ ಹಲವೆಡೆ ಮೊಬೈಲ್ ಇಂಟರ್ನೆಟ್ ಸ್ಥಗಿತ
ನವದೆಹಲಿ: ಶಿಕ್ಷಣ ಮತ್ತು ಯುವ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೋಮವಾರ ಹಮ್ಮಿಕೊಂಡಿದ್ದ ‘ಚಲೋ ಸಂಸದ್’ ಪಾದಯಾತ್ರೆಯು ಜಂತರ್ ಮಂತರ್ ಬಳಿ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ನೂರಾರು ವಿದ್ಯಾರ್ಥಿಗಳು ಮತ್ತು ಯುವ ಕಾರ್ಯಕರ್ತರು ಸಂಸತ್ತಿನತ್ತ ಮುನ್ನಡೆಯಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಕೇರಳ…
-

1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ ಬಯಲಾಯ್ತು ಕೃತ್ಯ
ಹೈದರಾಬಾದ್: ಹಣದ ಆಸೆಗೆ ಹೆತ್ತವರೇ ತಮ್ಮ ನವಜಾತ ಗಂಡು ಮಗುವನ್ನು 1 ಲಕ್ಷ ರೂ.ಗೆ ಮಾರಾಟ ಮಾಡಿದ ಮನಕಲಕುವ ಘಟನೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಬೂಬ್ನಗರ ಗ್ರಾಮೀಣ ಮಂಡಲದ ತೆಲುಗುಗುಡೆಂ ಗ್ರಾಮದಲ್ಲಿ ಘಟನೆ ನಡೆದಿದೆ. ಕೇಶವುಲು ಮತ್ತು ನೀಲಮ್ಮ ಎಂಬ ದಂಪತಿ ದಿನಗೂಲಿ ಕಾರ್ಮಿಕರಾಗಿದ್ದು, ಅವರಿಗೆ ಈಗಾಗಲೇ ಒಬ್ಬಳು ಮಗಳು ಮತ್ತು ಇಬ್ಬರು ಗಂಡು ಮಕ್ಕಳು ಇದ್ದಾರೆ. ಕಳೆದ ಜೂನ್ 16ರಂದು ಮಹಬೂಬ್ನಗರ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನೀಲಮ್ಮ ಆರೋಗ್ಯವಂತ ಗಂಡು ಮಗುವಿಗೆ ಜನ್ಮ…
-

ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











