Category: ಬ್ರೇಕಿಂಗ್ ನ್ಯೂಸ್
-

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನ ಹುಚ್ಚಾಟ: ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ
ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ವಿಚಿತ್ರ ವರ್ತನೆಯ ಮೂಲಕ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಬೆಲ್ಲದ ಗಣಪತಿ ದೇವಸ್ಥಾನ ಸಮೀಪ ನಿವಾಸಿಯಾಗಿರುವ ರಂಜಿತ್ ಸೋಮಯಾಜಿ (25) ಎಂಬಾತ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಇದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಉದ್ದನೆಯ ತಲೆಕೂದಲು ಹಾಗೂ ಗಡ್ಡ ಹೊಂದಿದ್ದ ಯುವಕನ ವರ್ತನೆ…
-

ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ
ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ…
-

ಮಂಗಳೂರು ಆರ್‌ಟಿಒದಲ್ಲಿ 12 ವರ್ಷಗಳಿಂದ ಅದೇ ಸೀಟಿನಲ್ಲಿ ಗುಮಾಸ್ತ? ಎರಡು ಬಡ್ತಿ ಆದರೂ ವರ್ಗಾವಣೆ ಆಗದ ಆರೋಪ!
ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಮಾಸ್ತ ಸೋಮರಾಜ್ ಅವರ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಲಭ್ಯವಾದ ಮಾಹಿತಿಯ ಪ್ರಕಾರ, ಸೋಮರಾಜ್ ಅವರು ಕಳೆದ 12 ವರ್ಷಗಳಿಂದ ಅದೇ ಹುದ್ದೆಯಲ್ಲಿ ಹಾಗೂ ಅದೇ ಸೀಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲಿ ಅವರಿಗೆ ಎರಡು ಬಾರಿ ಬಡ್ತಿ (ಪ್ರಮೋಶನ್) ದೊರೆತಿದ್ದರೂ, ವರ್ಗಾವಣೆಗೊಂಡಿಲ್ಲ ಎನ್ನಲಾಗಿದೆ. ಇನ್ನೂ, ಬಡ್ತಿಯ ನಂತರ ಉಡುಪಿಯಲ್ಲಿ ಕ್ಲರ್ಕ್ ಹುದ್ದೆ ಲಭಿಸಿದ್ದರೂ, ಅವರು ಅದನ್ನು ಸ್ವೀಕರಿಸದೆ ಮಂಗಳೂರು ಆರ್‌ಟಿಒದಲ್ಲೇ ಮುಂದುವರಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಲ್ಲದೆ,…
-

ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ: ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮೊಯಿದ್ದೀನ್ ಇಸ್ಲಾಂ , ದಿಲ್ವಾರ್…
-

ಬೆಳ್ತಂಗಡಿ: ಮುಸ್ತಾಕ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್..!!
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿ ಅನುಮಾನಾಸ್ಪದವಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ನಡೆದಿದ್ದು ಇಲ್ಲಿಂದ ಅಲ್ಯೂಮಿನಿಯಂ ತಂತಿ ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಎಸ್.ಎಲ್.ವಿ.ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು.1ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ತಂತಿಗೆ ಸಿಲುಕಿ ಅಥವಾ ಇನ್ಯಾವುದೋ ರೀತಿಯಲ್ಲಿ ಕರಾಯ ಗ್ರಾಮದ ನಿವಾಸಿ…
-

ದಸರಾ ಕಂಬಳಕ್ಕೆ ಮರಗಳ ಮಾರಣಹೋಮ : ಕ್ರೀಡಾ ಇಲಾಖೆ ಅಧಿಕಾರಿ ಸೇರಿ ಮೂವರ ವಿರುದ್ಧ ‘FIR’ ದಾಖಲು!
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬಹುನಿರೀಕ್ಷಿತ ‘ದಸರಾ ಕಂಬಳ’ ಕ್ರೀಡಾಕೂಟವು ಈಗ ಆರಂಭಕ್ಕೆ ಮುನ್ನವೇ ತೀವ್ರ ವಿವಾದ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಕಂಬಳ ಕೂಟಕ್ಕಾಗಿ ಕೆಸರು ಗದ್ದೆ (ಟ್ರ್ಯಾಕ್) ನಿರ್ಮಿಸುವ ನೆಪದಲ್ಲಿ ಸಾತಗಳ್ಳಿ ಬಡಾವಣೆಯ ಮೈದಾನದಲ್ಲಿದ್ದ ಹತ್ತಾರು ಮರಗಳನ್ನು ನಿಯಮಬಾಹಿರವಾಗಿ ಕತ್ತರಿಸಿ ಪರಿಸರಕ್ಕೆ ಹಾನಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು (DD) ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್‌ಐಆರ್…
-

ಮಂಗಳೂರು: 14 ಬಾರಿ ಬಂಧನ ವಾರೆಂಟ್, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!
ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರ ಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ. ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 14 ಬಾರಿ ದಸ್ತಗಿರಿ ವಾರೆಂಟ್…
-

ರಾಮ ಮಂದಿರ ನಿಧಿ ದುರ್ಬಳಕೆ ಆರೋಪ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ
ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಹಣದ ಅಕ್ರಮ ದುರುಪಯೋಗದ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಮಹತ್ವದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 13 ರ ಸೋಮವಾರದಂದು ಕೈಗೆತ್ತಿಕೊಳ್ಳಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ವಿಶೇಷ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದ್ದು, ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ…
-

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್
ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್‌ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು…
-

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್
ಮಂಗಳೂರು: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು. ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂ ಙಳ್ ಕೆಲವು ದಿನಗಳ ಹಿಂದೆಯೇ ದ.ಕ.ಜಿಲ್ಲಾ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











