Category: ಬ್ರೇಕಿಂಗ್ ನ್ಯೂಸ್

  • 9 ಅಬಕಾರಿ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!!
    ,

    9 ಅಬಕಾರಿ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!!

    ಬೆಂಗಳೂರು: ರಾಜ್ಯ ರಾಜಧಾನಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯ ಉಪ ಆಯುಕ್ತರ (DC) ಕಚೇರಿಗಳ ಮೇಲೆ ಬೃಹತ್ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಿಸಿರುವ ಒಟ್ಟು 9 ಅಬಕಾರಿ ಡಿಸಿ ಕಚೇರಿಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಏಕಕಾಲಕ್ಕೆ 9 ಕಚೇರಿಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಇಂದು ಬೆಳ್ಳಂಬೆಳಗ್ಗೆ ಈ ಜಂಟಿ ಕಾರ್ಯಾಚರಣೆಯನ್ನು…

    Continue Reading

  • ಮೂರು ವರ್ಷದ ಮಗುವಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ 65 ವರ್ಷದ ವೃದ್ಧನಿಗೆ ಮರಣದಂಡನೆ ಶಿಕ್ಷೆ!
    ,

    ಮೂರು ವರ್ಷದ ಮಗುವಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ 65 ವರ್ಷದ ವೃದ್ಧನಿಗೆ ಮರಣದಂಡನೆ ಶಿಕ್ಷೆ!

    ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೇವಲ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ನಡೆದಿದ್ದ ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಸೋಮವಾರ ಮಹತ್ವದ ತೀರ್ಪು ನೀಡಿದೆ. ಘಟನೆ ನಡೆದ ಕೇವಲ ಎರಡು ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು, ಈ ಕೃತ್ಯವು “ಅಪರೂಪದಲ್ಲೇ ಅಪರೂಪದ” (Rarest of the rare) ವರ್ಗಕ್ಕೆ ಸೇರುತ್ತದೆ ಎಂದು ಅಭಿಪ್ರಾಯಪಟ್ಟು 65 ವರ್ಷದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.…

    Continue Reading

  • ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ:  ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!
    ,

    ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!

    ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ನಗರದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದ ಮೂವರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.…

    Continue Reading

  • ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ, ಕಾರು ಸಹಿತ ಚಿನ್ನಾಭರಣ ದೋಚಿದ ದರೋಡೆಕೋರರು..!!
    ,

    ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ, ಕಾರು ಸಹಿತ ಚಿನ್ನಾಭರಣ ದೋಚಿದ ದರೋಡೆಕೋರರು..!!

    ಮಂಗಳೂರು: ಮದುವೆಗೆ ಹೋಗಿ ಹಿಂದಿರುಗುತ್ತಿದ್ದ ಕೇರಳ ಮೂಲಕ ಉದ್ಯಮಿಯೊಬ್ಬರ ಕಾರಿಗೆ ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಬೆಳಗ್ಗಿನ ಜಾವ ಬೈಕಂಪಾಡಿ ದ್ವಾರ ಹೊಟೆಲ್ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ಹೋಗಿ ಹಿಂದಿರುಗುತ್ತಿದ್ದರು. ಬೆಳಗ್ಗಿನ ಜಾವ 2:30 ಸುಮಾರಿಗೆ ಉದ್ಯಮಿಯ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ…

    Continue Reading

  • ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್–ಜೆಡಿಎಸ್ ಕಾರ್ಯಕರ್ತರ ಗಲಾಟೆ; ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಸೆರೆ
    , ,

    ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್–ಜೆಡಿಎಸ್ ಕಾರ್ಯಕರ್ತರ ಗಲಾಟೆ; ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಸೆರೆ

    ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ…

    Continue Reading

  • ಪದೇ ಪದೇ ಬಾಂಬ್ ಬೆದರಿಕೆಗೆ ಗುರಿಯಾಗುತ್ತಿರುವ ಉಡುಪಿ ನ್ಯಾಯಾಲಯ; ಮತ್ತೆ ಹುಸಿ ಇಮೇಲ್
    ,

    ಪದೇ ಪದೇ ಬಾಂಬ್ ಬೆದರಿಕೆಗೆ ಗುರಿಯಾಗುತ್ತಿರುವ ಉಡುಪಿ ನ್ಯಾಯಾಲಯ; ಮತ್ತೆ ಹುಸಿ ಇಮೇಲ್

    ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಜೂನ್ 26 ರಂದು ರಾತ್ರಿ 8:53 ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆದರೆ, ನ್ಯಾಯಾಲಯದ ಸಿಬ್ಬಂದಿ ಮರುದಿನ ಬೆಳಿಗ್ಗೆ ಜೂನ್ 27 ರಂದು ಬೆಳಿಗ್ಗೆ…

    Continue Reading

  • ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ ಉಪ್ಪಿನಂಗಡಿ ಪೊಲೀಸರ  ಬಲೆ
    , ,

    ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ ಉಪ್ಪಿನಂಗಡಿ ಪೊಲೀಸರ ಬಲೆ

    ಮಂಗಳೂರು: 2005 ರ ಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನ ತಿರುನಲ್ವೇಲಿ ನಿವಾಸಿ ಮಾದ ಸ್ವಾಮಿ ಎಂದು ಗುರುತಿಸಲಾಗಿದೆ.ಅವರು ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 09/2005 ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಸೆಕ್ಷನ್ 34 ರ ಅಡಿಯಲ್ಲಿ ದಾಖಲಾಗಿದ್ದ ಆರೋಪಿಯಾಗಿದ್ದರು.ಪೊಲೀಸರ ಪ್ರಕಾರ, ಆರೋಪಿಯು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು…

    Continue Reading

  • ಆಟವಾಡಲು ಬಂದ ಯುವಕರ ಕಣ್ಣಿಗೆ ಬಿದ್ದ ಗಾಂಜಾ ಗಿಡ; ಅಧಿಕಾರಿಗಳ ಕಾರ್ಯಾಚರಣೆ
    ,

    ಆಟವಾಡಲು ಬಂದ ಯುವಕರ ಕಣ್ಣಿಗೆ ಬಿದ್ದ ಗಾಂಜಾ ಗಿಡ; ಅಧಿಕಾರಿಗಳ ಕಾರ್ಯಾಚರಣೆ

    ಕಾಸರಗೋಡು: ಕುಂಬಳೆ ಸಮೀಪದ ಬಂಬ್ರಾಣದ ಶಾಲೆಯೊಂದರ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿದೆ. ಮೈದಾನಕ್ಕೆ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಗಮನಿಸಿ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 50 ಸೆ. ಮೀಟರ್ ಉದ್ದದ ಗಾಂಜಾ ಗಿಡ ಪತ್ತೆಯಾಗಿದೆ. ಅಬಕಾರಿ ಅಧಿಕಾರಿಗಳು ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    Continue Reading

  • ಕರ್ನಾಟಕದ ಮೀನುಗಾರಿಕೆ ವಲಯಕ್ಕೆ ಎಲ್ ನಿನೊ ಶಾಕ್; ಉತ್ಪಾದನೆ ಕುಸಿಯುವ ಭೀತಿ
    ,

    ಕರ್ನಾಟಕದ ಮೀನುಗಾರಿಕೆ ವಲಯಕ್ಕೆ ಎಲ್ ನಿನೊ ಶಾಕ್; ಉತ್ಪಾದನೆ ಕುಸಿಯುವ ಭೀತಿ

    ಮಂಗಳೂರು: ಎಲ್ ನಿನೊ ಪರಿಣಾಮದಿಂದ ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಕೃಷಿ ಮಾತ್ರವಲ್ಲ, ಕರಾವಳಿಯ ಮೀನುಗಾರಿಕೆ ವಲಯದ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಪ್ರತಿ ವರ್ಷ ಜೂನ್ 1ರಿಂದ ಜುಲೈ 31ರವರೆಗೆ ಮೀನುಗಳ ಸಂತಾನೋತ್ಪತ್ತಿಗಾಗಿ ಮೀನುಗಾರಿಕೆಗೆ ನಿಷೇಧ ವಿಧಿಸಲಾಗುತ್ತದೆ. ಈ ಅವಧಿಯಲ್ಲಿ ಪಶ್ಚಿಮಘಟ್ಟದಿಂದ ಹರಿದು ಬರುವ ಸಿಹಿ ನೀರು ಸಮುದ್ರ ಸೇರುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ಅನುಕೂಲವಾಗುತ್ತದೆ. ಆದರೆ ಈ ಬಾರಿ ಮಳೆ ಕೊರತೆಯಿಂದ ಸಿಹಿ ನೀರು ಕಡಲಿಗೆ ಸಮರ್ಪಕವಾಗಿ…

    Continue Reading

  • ಮಂಗಳೂರಿನಲ್ಲಿ ಹೊರ ರಾಜ್ಯದವರ ವಾಸದ ಹಿನ್ನೆಲೆ ಪರಿಶೀಲನೆಗೆ ಆಗ್ರಹ: ಅಪರಾಧ ನಿಯಂತ್ರಣಕ್ಕೆ ಕ್ರಮ ಅಗತ್ಯ
    , ,

    ಮಂಗಳೂರಿನಲ್ಲಿ ಹೊರ ರಾಜ್ಯದವರ ವಾಸದ ಹಿನ್ನೆಲೆ ಪರಿಶೀಲನೆಗೆ ಆಗ್ರಹ: ಅಪರಾಧ ನಿಯಂತ್ರಣಕ್ಕೆ ಕ್ರಮ ಅಗತ್ಯ

    ಮಂಗಳೂರು: ನಗರದ ಬಂದರು, ಅಳಕೆ, ಸ್ಟೇಟ್ ಬ್ಯಾಂಕ್, ಪಾಂಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ನಗರದಲ್ಲಿ ನಡೆಯುವ ಹಲವು ಪ್ರಕರಣಗಳಲ್ಲಿ ಬಾಡಿಗೆದಾರರ ಹಿನ್ನೆಲೆ ಕುರಿತು ಪರಿಶೀಲನೆ ಅಗತ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಸ್ಟೇಟ್ ಬ್ಯಾಂಕ್ ಭಾಗದಲ್ಲಿ ಅಸ್ಸಾಂ, ಬಿಹಾರ ಸೇರಿದಂತೆ ವಿವಿಧ ಹೊರ ರಾಜ್ಯಗಳ ಕೆಲವರು ರಾತ್ರಿ ವೇಳೆ ಮದ್ಯ ಸೇವಿಸಿ ರಸ್ತೆ ಬದಿ ಗಲಾಟೆ ನಡೆಸುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ.…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed