Category: ಬ್ರೇಕಿಂಗ್ ನ್ಯೂಸ್
-

ಉಡುಪಿ ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ: ಬಾಕಿ ಅರ್ಜಿಗಳ ಬಗ್ಗೆ ಅಧಿಕಾರಿಗಳಿಗೆ ಶಾಕ್
ಉಡುಪಿ: ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್ ದಾಳಿ ನಡೆಸಿದರು.ಉಡುಪಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ ಕಚೇರಿಯ ವಿವಿಧ ಪ್ರಮುಖ ವಿಭಾಗಗಳು ಮತ್ತು ಇಲಾಖೆಗಳಿಗೆ ಭೇಟಿ ನೀಡಿ ಬಾಕಿ ಇರುವ ಸಾರ್ವಜನಿಕ ಅರ್ಜಿಗಳ ಸ್ಥಿತಿ, ಕಡತ ವಿಲೇವಾರಿಯ ವೇಗ ಮತ್ತು ಒಟ್ಟಾರೆ ಆಡಳಿತಾತ್ಮಕ…
-

ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು
ಮಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನೌಕರರು ಕಚೇರಿಗೆ ಗೈರಾಗಿದ್ದರೂ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಪದ್ಧತಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು. ಕಛೇರಿಗೆ ಪ್ರವೇಶಿಸುವಾಗ ಮತ್ತು ಹೊರಗಡೆ ತೆರಲುವಾಗ ಮತ್ತೆ ಕಛೇರಿಗೆ ಭೇಟಿ ನೀಡಿದಾಗ ತಮ್ಮಲ್ಲಿ ಎಷ್ಟು ಮೊತ್ತವಿದೆ ಎಂದು ತಿಳಿಯಲು…
-

ಅಪ್ರಾಪ್ತ ಬಾಲಕನ ಕಾರು ಚಾಲನೆಗೆ ಅಪಘಾತ: ಸ್ಕೂಟರ್ ಜಖಂ, ಮಾಲಕನ ವಿರುದ್ಧವೂ ಕೇಸ್
ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು…
-

ವಿಟ್ಲ: ಅಕ್ರಮ ಎನ್ನಲಾದ ಬಾಕ್ಸೈಟ್ ಗಣಿಗಾರಿಕೆ ಸ್ಥಳದಲ್ಲಿ ಭೀಕರ ದುರಂತ; ಟಿಪ್ಪರ್ ಲಾರಿ ಚಲಿಸಿ ಚಾಲಕ ಸ್ಥಳದಲ್ಲೇ ಸಾವು
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಅಕ್ರಮ ಎನ್ನಲಾದ ಬಾಕ್ಸೖಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ,…
-

ಎರಡು ಕಾರು–ಬೈಕ್ ನಡುವೆ ಡಿಕ್ಕಿ; ಅಪಘಾತದ ರಭಸಕ್ಕೆ ಕಾರು ಪಲ್ಟಿ
ಬೆಳ್ತಂಗಡಿ: ಎರಡು ಕಾರುಗಳು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಾರು ಮತ್ತು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಡಿಕ್ಕಿಯ ಬಲಕ್ಕೆ ಒಂದು ಕಾರು…
-

ಮಂಗಳೂರು: ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ! ಮ.ನ.ಪಾ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಸಾರ್ವಜನಿಕರಿಂದ ಹಿಡಿಶಾಪ
ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಕರಾವಳಿಯ ನಾಗರಿಕರು ಭಾರಿ ಬೆಲೆ ತೆರುವಂತಾಗಿದೆ. ಪಾಲಿಕೆಯಿಂದ ಸರಬರಾಜಾಗುತ್ತಿರುವ ಕಲುಷಿತ ಕುಡಿಯುವ ನೀರನ್ನು ಸೇವಿಸಿ ನಗರದ ನೂರಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ತೀವ್ರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಜನರ ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದ ಬಿಜೈ ನ್ಯೂರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರು-ನಾಲ್ಕು ವಾರಗಳಿಂದ ಮನೆಯ ಟ್ಯಾಪ್ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರನ್ನು ಬಳಸಿದ…
-

ಕೋರ್ಟ್ ವಿಚಾರಣೆಗೆ ಹಾಜರಾಗದ ಆರೋಪಿ ಅರೆಸ್ಟ್: ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ
ಪುತ್ತೂರು: ಕಳ್ಳತನ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಯಾನೆ ಕೆ.ಎಂ ಸಲಾಂ ಯಾನೆ ಡಾಲರ್ ಸಲಾಂ ಬಂಧಿತ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 24/2020 Se. 457.380 IPC ಮತ್ತು ಅ.ಕ್ರ ನಂ: 34/2022 ಕಲಂ. 457.380. IPC ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಪುತ್ತೂರು ರೈಲ್ವೆ…
-

ಆಸ್ಪತ್ರೆಯಲ್ಲಿ ಸರಣಿ ಸಾವು; ಮೃತರ ಸಂಬಂಧಿಕರಿಂದ ವೈದ್ಯರ ವಿರುದ್ಧ ಆಕ್ರೋಶ
ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11 ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಳೆದ 24 ಗಂಟೆಗಳಲ್ಲಿ 11 ಮಂದಿ ಸಾವನ್ನಪ್ಪಿರುವುದು ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ರೋಗಿಗಳ ಸರಣಿ…
-

ಕಾರಿನೊಳಗೆ ಅಡಗಿಸಿದ್ದ ನಿಷೇಧಿತ ಸರಕು; ಪೊಲೀಸ್ ದಾಳಿಯಲ್ಲಿ ಬಯಲಾದ ಜಾಲ
ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ…
-

ಡೆಬಿಟ್ ಕಾರ್ಡ್ ಬಳಸಿ ಭರ್ಜರಿ ವಂಚನೆ:ವ್ಯಕ್ತಿಯ ಖಾತೆಯಿಂದ ₹2.12 ಲಕ್ಷ ದೋಚಿದ ಖದೀಮರು
ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್ಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











