Category: ಬ್ರೇಕಿಂಗ್ ನ್ಯೂಸ್
-

ದುಬೈ ರಸ್ತೆ ಅಪಘಾತ: ಕೋಮಾದಲ್ಲಿದ್ದ ಕಿನ್ನಿಗೋಳಿ ಯುವತಿ ನಿಧನ
ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ.ಮೃತರನ್ನು ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು.ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ…
-

ಉಳ್ಳಾಲ: ಆರೀಫ್ ಮರ್ಡರ್ ಕೇಸ್‌ಗೆ ಮತ್ತೊಂದು ಟ್ವಿಸ್ಟ್-ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಆರೋಪಿ ಸೆರೆ
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮೇ 25 ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ ಯಾನೆ ಚಿನ್ನು(21) ಬಂಧಿತ ಆರೋಪಿ. ಆರೋಪಿಯು ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್ ಎಂಬಾತನ ಸಹೋದರನಾಗಿದ್ದಾನೆ. ಮಾರ್ಚ್ 27 ರಂದು ಬೆಳಗಿನ ಜಾವ, ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ…
-

ಸಿಸಿಟಿವಿಯಲ್ಲಿ ಸೆರೆ ಆಯ್ತು ‘ನಾಯಿ ದರೋಡೆ’: ಹಣಕ್ಕಾಗಿ ಗಲ್ಲಿ ಗಲ್ಲಿಯಲ್ಲಿ ಹುಡುಕಾಟ
ಬಿಜ್ನೋರ್: ಕಳ್ಳರು ಬಂದು ಹಣ ದೋಚುವುದು, ದರೋಡೆಕೋರರು ಬ್ಯಾಗ್ ಕಿತ್ತುಕೊಂಡು ಓಡುವುದು ಸಾಮಾನ್ಯ. ಆದರೆ, ಇಲ್ಲೊಂದು ಬೀದಿನಾಯಿ ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ ₹1 ಲಕ್ಷ ನಗದು ಹಣವಿದ್ದ ಪ್ಲಾಸ್ಟಿಕ್ ಕವರನ್ನು ಬೈಕ್‌ನಿಂದ ಅತ್ಯಂತ ಚಾಣಾಕ್ಷತನದಿಂದ ಹೊತ್ತೊಯ್ದಿರುವ ವಿಲಕ್ಷಣ ಘಟನೆಯೊಂದು ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.ಬುಲ್ಲಾ ಚೌಕ ನಿವಾಸಿ, ಪಶು ವೈದ್ಯಕೀಯ ಮೆಡಿಕಲ್ ಸ್ಟೋರ್ ಮಾಲೀಕ ನವಾಬ್ ಅಹಮದ್ ಎಂಬುವವರೇ ಈ ವಿಚಿತ್ರ ಕಳ್ಳತನಕ್ಕೆ ಒಳಗಾದ ದುರ್ದೈವಿ. ಶನಿವಾರ ಮಧ್ಯಾಹ್ನ ಶಂಭಾ ಬಜಾರ್‌ನ ಕಿಲ್ಲೆ ವಾಲಿ ಮಸೀದಿಗೆ…
-

ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ವೇಳೆ ಅಪಹರಣ: 112 ಕರೆ ಮೂಲಕ ಬಯಲಾಯ್ತು ಭೀಕರ ಘಟನೆ
ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್‌ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಏನಿದು ಘಟನೆ?ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ…
-

ಅಳಿಯನ ಮಾತು ನಂಬಿದ ಮಾವನಿಗೆ ಶಾಕ್: ₹15.81 ಲಕ್ಷ ಆನ್‌ಲೈನ್ ವಂಚನೆ
ಉಡುಪಿ: ಕತಾರ್‌ನಿಂದ ಖರ್ಜೂರ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುವ ಉದ್ಯಮದ ಹೆಸರಿನಲ್ಲಿ ಸ್ವಂತ ಮಾವನಿಗೆ ₹15.81 ಲಕ್ಷ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಮಾನ್ಯ ನ್ಯಾಯಾಲಯದ ಖಾಸಗಿ ದೂರಿನ ಅನ್ವಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಬಡಗುಬೆಟ್ಟು ಗ್ರಾಮದ ನಿವಾಸಿ ಇಫ್ರಾನ್ ಅಜೀಜ್ (50) ವಂಚನೆಗೊಳಗಾದ ಪಿರ್ಯಾದಿದಾರರು. ಇವರ ಅಳಿಯ, ಕತಾರ್‌ನಲ್ಲಿ ಕೆಲಸ ಮಾಡುತ್ತಿರುವ 1ನೇ ಆರೋಪಿ ಮೊಹಮ್ಮದ್ ಶರ್ಪದ್ದೀನ್, ಕೇರಳ ತ್ರಿಶೂರು ಮೂಲದ…
-

ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಅರೆಸ್ಟ್
ಶಿವಮೊಗ್ಗ: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.ಅಬ್ಬಲಗೇರಿ ಗ್ರಾಮದಲ್ಲಿ ಕಾರು ನಿಲ್ಲಿಸಿ ಪ್ರೇಮಿಗಳು ಮಾತನಾಡುತ್ತಿದ್ದ ವೇಳೆ ಕಾರಲ್ಲಿ ಬಂದಿದ್ದ ಆರೋಪಿ ಮಂಜುನಾಥ್, ಯುವತಿಯ ಕೊರಳಲ್ಲಿದ್ದ 10…
-

ಭೀಕರ ಅಪಘಾತದ ನಡುವೆ ಮಾನವೀಯತೆ ಮರೆತ ಕಳ್ಳರು – ಮೃತದೇಹದ ಮೇಲಿನ ಚಿನ್ನ ಕಳವು
ಬೈಂದೂರು: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಖದೀಮರು ಲಪಟಾಯಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಈ ಘೋರ ದುರಂತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್…
-

ಅತ್ತೆ-ಪತಿಯ ಎದುರಲ್ಲೇ ಆಸಿಡ್ ಸೇವಿಸಿದ ಯುವತಿ : ಚಿನ್ನದ ಬೇಡಿಕೆಗೆ ಬಲಿಯಾದ ಜೀವ
ಕಾಸರಗೋಡು : ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ನವವಿವಾಹಿತೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಲಂನಲ್ಲಿ ನಡೆದಿದೆ. ಚಿನ್ನದ ಆಭರಣಗಳಿಗಾಗಿ ಪತಿಯ ಕುಟುಂಬದವರು ನೀಡುತ್ತಿದ್ದ ಸರಣಿ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.ಮೂಲತಃ ಬದಿಯಡ್ಕದ ಚೆರ್ಲಡುಕ್ಕಂ ನಿವಾಸಿಯಾದ ಫಾತಿಮತ್ ಸುಫೈದಾ (24) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಆದಿಲ್‌ನನ್ನು ವಿದ್ಯಾನಗರ ಪೊಲೀಸರು ಬಂಧಿಸಿ…
-

ಪ್ರವಾಸಿಗರ ದಟ್ಟಣೆ ನಡುವೆ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ
ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ…
-

ಚರ್ಚ್ ರೋಡ್ ಸೇತುವೆ ಮೇಲೆ ಗಲಾಟೆ: ಪೊಲೀಸರ ದಾಳಿಯಲ್ಲಿ ನಾಲ್ವರು ವಶಕ್ಕೆ
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಬೊಬ್ಬೆ ಹಾಕುತ್ತಾ, ಕೈಕೈ ಮಿಲಾಯಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು, ಓಡಿಹೋದ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂದಾಪುರದ ಕಸಬಾ ಗ್ರಾಮದ ನವೀನ್, ಕೋಡಿ ಕಸಬಾ ಗ್ರಾಮದ ಪ್ರಶಾಂತ್, ಹಂಗಳೂರು ಗ್ರಾಮದ ವಿಘ್ನೇಶ್ ಹಾಗೂ ಕೋಡಿ ಕಸಬಾ ಗ್ರಾಮದ ಗಣೇಶ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡಿರುವ ಹೋವಿನಟೆಬಲ್ ಮಹೇಶ್, ನಿಶಾಂತ್ ಮತ್ತು ಇತರರ ವಿರುದ್ಧ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಹೋಟೆಲ್‌ಗಳುನಡೆದಿದ್ದೇನು? ಕುಂದಾಪುರ ಪೊಲೀಸ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











