Category: ಬ್ರೇಕಿಂಗ್ ನ್ಯೂಸ್
-

ಕಬಡ್ಡಿ ಕ್ರೇಜ್‌ನಿಂದ ನಾಲ್ಕು ವರ್ಷಗಳ ಬಳಿಕ ಬಾಲಕನ ಸುಳಿವು
ಮಂಡ್ಯ: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರೂ ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷ ಅಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ ಮಾಡುವಲ್ಲಿ ಮಹತ್ವದ ಪಾತ್ರವಹಿಸಿದೆ. ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡರ 9ನೇ ತರಗತಿ ಓದುತ್ತಿದ್ದ ತಮ್ಮ…
-

ತಲಪಾಡಿ ಟೋಲ್ ಗೇಟ್ ನಲ್ಲಿ ಗಂಟೆ ಗಟ್ಟಲೆ ವಾಹನಗಳ ಸರಣಿ ಸಾಲು- ಅಧಿಕಾರಿಗಳ ನಿರ್ಲಕ್ಷ
ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಟೋಲ್ ಗೇಟ್ ಇದೀಗ ಟೋಲ್ ವಸೂಲಿ ಕೇಂದ್ರಕ್ಕಿಂತ ವಾಹನ ಸವಾರರಿಗೆ ಹಿಂಸೆ ನೀಡುವ ಸ್ಥಳವಾಗಿದೆಯೇ ಎಂಬ ಗಂಭೀರ ಪ್ರಶ್ನೆ ಉದ್ಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ಪ್ರಕಾರ, ಟೋಲ್ ಪ್ಲಾಜಾದಲ್ಲಿ ಒಂದು ವಾಹನವು ನಿರ್ದಿಷ್ಟ ಸಮಯಕ್ಕಿಂತ ಹೆಚ್ಚು ಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ವಾಹನವನ್ನು ಉಚಿತವಾಗಿ ಬಿಡಬೇಕಾಗಿದೆ. ಆದರೆ ತಲಪಾಡಿ ಟೋಲ್ ಗೇಟ್‌ನಲ್ಲಿ ಈ ನಿಯಮಗಳು ಕೇವಲ ಕಾಗದದಲ್ಲೇ ಉಳಿದಿವೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಪ್ರಶ್ನೆ ಏನೆಂದರೆ —ವಾಹನಗಳು…
-

ಸಾಧನಾ ಶೆಟ್ಟಿ ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಶಾಕಿಂಗ್ ತಿರುವು – ಪತಿಯೇ ಸುಳ್ಳು ಆರೋಪ ಮಾಡಿದನೆಂದ ಪತ್ನಿ
ಬೆಂಗಳೂರು: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ನನ್ನ ಪತಿ ಸುಳ್ಳು ಆರೋಪ ಮಾಡಿದ್ದಾರೆಂದ ಪತ್ನಿ ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕನೆಂದು ಹೇಳಿಕೊಂಡಿರುವ…
-

ಮುಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ವಿದ್ಯಾರ್ಥಿನಿ ಸೇರಿ ಹೈಡ್ರೊವಿಡ ಗಾಂಜಾ ಜಪ್ತಿ
ಮಂಗಳೂರು: ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತೆಯನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ಬಂಧಿಸಿ 35,00,000 ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೋಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ ಸುಹಾನ (21) ಬಂಧಿತ ಆರೋಪಿತೆ. ಬಂಧಿತೆ ಕುಂದಾಪುರ ಕಾಲೇಜೊಂದರ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ.ಮಂಗಳವಾರ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ…
-

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಇನ್ನಿಲ್ಲ
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್…
-

ಕಂಕನಾಡಿಯಲ್ಲಿ ವಾಹನ ಕಳ್ಳರ ಹಾವಳಿ: ಸ್ಕೂಟರ್ ಕಳವು ಆರೋಪ
ಮಂಗಳೂರು: ಕಂಕನಾಡಿ ಸುವರ್ಣ ಲೈನ್ 6ನೇ ಅಡ್ಡ ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ಸ್ಕೂಟರ್ ಪಾರ್ಕ್ ಮಾಡಿದ್ದರು. ಮರಳಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಕಳವಾದ ಸ್ಕೂಟರನ್ನು ಸುತ್ತಮುತ್ತ ಎಲ್ಲ ಕಡೆ ಹುಡುಕಾಡಿದರೂ ಸ್ಕೂಟರ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
-

ಮಂಗಳೂರಿನಲ್ಲಿ ವಕೀಲರಿಗೆ ಬೆದರಿಕೆ ಹಾಗೂ ಹಲ್ಲೆ ಯತ್ನ: ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ತನ್ನ ಕಕ್ಷಿದಾರೆಯ ಪತಿಯ ವಿರುದ್ಧ ಕಳೆದ 9 ವರ್ಷಗಳಿಂದ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ಪ್ರಕರಣದಲ್ಲಿ ಕಾನೂನು ಸಹಾಯ ಪಡೆಯಲು ನ್ಯಾಯವಾದಿ ಜೀಶನ್ ಅಲಿ ಅವರನ್ನು ಮಹಿಳೆ ಸಂಪರ್ಕಿಸಿದ್ದ ಘಟನೆಗೆ ಸಂಬಂಧಿಸಿದಂತೆ, ಇದೀಗ ನ್ಯಾಯವಾದಿಯ ಮೇಲೆಯೇ ಹಲ್ಲೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ದಿನಾಂಕ 11-05-2026ರಂದು ಸಂಜೆ ಸುಮಾರು 7 ಗಂಟೆಯ ವೇಳೆಗೆ, ನ್ಯಾಯವಾದಿ ಜೀಶನ್ ಅಲಿ ಅವರು ತಮ್ಮ ವೃತ್ತಿ ಕಾರ್ಯ ಮುಗಿಸಿ ಅತ್ತಾವರ ಪ್ರದೇಶದ ಮೂಲಕ ಮನೆಗೆ ತೆರಳುತ್ತಿದ್ದ ವೇಳೆ, ಆರೋಪಿ…
-

6 ವರ್ಷಗಳ ಬಳಿಕ ವಾರಂಟ್ ಆರೋಪಿ ಬಂಧನ; ನ್ಯಾಯಾಲಯಕ್ಕೆ ಹಾಜರು
ಮಂಗಳೂರು: 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ಸಿಯಾಗಿದ್ದಾರೆ. ನ್ಯಾಯಾಲಯವು ಆರೋಪಿತನ ಮೇಲೆ ದಸ್ತಗಿರಿ ವಾರಂಟ್ ನ್ನು ಹೊರಡಿಸಿತ್ತು. ಬಳಿಕ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ, ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
-

ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಜೆಟ್ ಮದ್ಯ ದುಬಾರಿ, ಪ್ರೀಮಿಯಂ ಮದ್ಯ ಅಗ್ಗ
ಬೆಂಗಳೂರು: ಕರ್ನಾಟಕ ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ ಮದ್ಯದ ದರವನ್ನು ಏರಿಕೆ ಮಾಡಲಿದ್ದು, ಪ್ರೀಮಿಯಂ ಅಥವಾ ವಿದೇಶಿ ಬ್ರಾಂಡ್‌ಗಳ ಮದ್ಯದ…
-

ಕರ್ನಾಟಕದಲ್ಲಿ ಪೆಟ್ರೋಲ್ ಬಂಕ್‌ಗಳಿಗೆ ಹೊಸ ನಿಯಮಗಳು: ಇಂಧನ ವಿತರಣೆಗೆ ಕಠಿಣ ಮಾರ್ಗಸೂಚಿ ಜಾರಿ
ಬೆಂಗಳೂರು: ದೇಶಾದ್ಯಂತ ಇಂಧನ ಪೂರೈಕೆಯಲ್ಲಿ ಕೊರತೆ ಉಂಟಾಗಬಹುದೆಂಬ ಆತಂಕದ ನಡುವೆ, ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು,ನಿಯಂತ್ರಿತ ಇಂಧನ ವಿತರಣಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಎಲ್ಲಾ ಇಂಧನ ಕೇಂದ್ರಗಳಿಗೆ ನಿರ್ದೇಶನ ನೀಡಿದೆ ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed









