Category: ಬ್ರೇಕಿಂಗ್ ನ್ಯೂಸ್

  • ಹೈದರಾಬಾದ್ ORR ಭೀಕರ ಅಪಘಾತ: ಯುವ ನಟ ಭರತ್ ಕಾಂತ್ ಮತ್ತು ಸಿನಿಮಾಟೋಗ್ರಾಫರ್ ಸ್ಥಳದಲ್ಲೇ ಸಾವು

    ಹೈದರಾಬಾದ್ ORR ಭೀಕರ ಅಪಘಾತ: ಯುವ ನಟ ಭರತ್ ಕಾಂತ್ ಮತ್ತು ಸಿನಿಮಾಟೋಗ್ರಾಫರ್ ಸ್ಥಳದಲ್ಲೇ ಸಾವು

    ಹೈದರಾಬಾದ್:  ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಆದಿಬಟ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ (ORR) ರವಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಕೆ. ಭರತ್ ಕಾಂತ್ (31) ಮತ್ತು ಸಿನಿಮಾಟೋಗ್ರಾಫರ್ ಜಿ. ಸಾಯಿ ತ್ರಿಲೋಕ್ (31) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೇ 10ರ ರವಿವಾರ ಮುಂಜಾನೆ ಸುಮಾರು 3:20ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಿಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರಾಗಿದ್ದು, ಕೆಲಸದ ನಿಮಿತ್ತ ನೆಲ್ಲೂರಿಗೆ ಹೋಗಿ ಅಲ್ಲಿಂದ ಕಾರಿನಲ್ಲಿ ಹೈದರಾಬಾದ್‌ಗೆ ಮರಳುತ್ತಿದ್ದರು. ಕಾರು…

    Continue Reading

  • ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಅಲರ್ಟ್: ರಾಮನಗರದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ತನಿಖೆ ತೀವ್ರ
    ,

    ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಅಲರ್ಟ್: ರಾಮನಗರದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ತನಿಖೆ ತೀವ್ರ

    ರಾಮನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಏನಾಗಿತ್ತು? ನಿನ್ನೆ (ಮೇ 10) ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ…

    Continue Reading

  • ಬೆಳ್ತಂಗಡಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
    ,

    ಬೆಳ್ತಂಗಡಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

    ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಕ್ಯಾಂಟಿನ್‌ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಕ್ಯಾಂಟಿನ್ ಒಳಗಿನ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸಿಕಂದ‌ರ್ ಪಾಷಾ, ಪೊಲೀಸ್ ಉಪನಿರೀಕ್ಷಕರು (ತನಿಖೆ), ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿತ್ತು.…

    Continue Reading

  • ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ
    , ,

    ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ

    ನವದೆಹಲಿ: ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕರಾಳ ಮುಖವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB 2024) ತನ್ನ ಇತ್ತೀಚಿನ ವರದಿಯಲ್ಲಿ ಬಯಲು ಮಾಡಿದೆ. ದೇಶದಲ್ಲಿ ಒಟ್ಟಾರೆ ಅಪರಾಧ ದರವು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದರೂ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಮುಂದುವರಿದಿವೆ. ವರದಿಯ ಪ್ರಕಾರ, ಭಾರತದಲ್ಲಿ ಸರಾಸರಿ ಪ್ರತಿ 18 ನಿಮಿಷಕ್ಕೊಮ್ಮೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಅಂದರೆ ಪ್ರತಿದಿನ ನೂರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.​ಅಪರಾಧ ದರ vs ದಾಖಲಾತಿ:…

    Continue Reading

  • ಅಕ್ರಮ ಮರಳುದಂಧೆ ಪತ್ತೆ: 50-60 ಮೆಟ್ರಿಕ್ ಟನ್ ಮರಳು ವಶ- ಪ್ರಕರಣ ದಾಖಲು
    ,

    ಅಕ್ರಮ ಮರಳುದಂಧೆ ಪತ್ತೆ: 50-60 ಮೆಟ್ರಿಕ್ ಟನ್ ಮರಳು ವಶ- ಪ್ರಕರಣ ದಾಖಲು

    ಅಕ್ರಮವಾಗಿ ನದಿಯಿಂದ ಮರಳು ಕದ್ದು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸುಳ್ಯ ಪೊಲೀಸ್ ಠಾಣೆ ಪೊಲೀಸರು ಪತ್ತೆಹಚ್ಚಿದ್ದು, ಸುಮಾರು 50-60 ಮೆಟ್ರಿಕ್ ಟನ್ ತೂಕದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಮೇ 8ರಂದು ಬೆಳಿಗ್ಗೆ ತೋಡಿಕಾನ ಗ್ರಾಮದ ಶೆಟ್ಟಿಯಡ್ಕ ಪ್ರದೇಶದಲ್ಲಿ ಮನು ಪೆರ್ಮುಡ ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರು ಕಾನೂನು ಬಾಹಿರವಾಗಿ ನದಿಯಿಂದ ಮರಳು ತೆಗೆಯಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ನೇತೃತ್ವದಲ್ಲಿ ಸುಳ್ಯ ಠಾಣೆಯ…

    Continue Reading

  • ಇನ್‌ಸ್ಟಾಗ್ರಾಮ್ ಪರಿಚಯದಿಂದ ದುರಂತ: ಯುವಕ ನೇಣಿಗೆ ಶರಣು, ಮಹಿಳೆ ನಾಪತ್ತೆ
    ,

    ಇನ್‌ಸ್ಟಾಗ್ರಾಮ್ ಪರಿಚಯದಿಂದ ದುರಂತ: ಯುವಕ ನೇಣಿಗೆ ಶರಣು, ಮಹಿಳೆ ನಾಪತ್ತೆ

    ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ನಡೆದಿದ್ದೇನು? ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ…

    Continue Reading

  • ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ
    , ,

    ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ

    ಬೆಳಗಾವಿ: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ವಿಚಿತ್ರ ಕಳ್ಳತನ ನಡೆದಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ, ಹಸೀನಾ…

    Continue Reading

  • ಬಿಟ್‌ಕಾಯಿನ್ ಹಗರಣದಲ್ಲಿ ಹೊಸ ತಿರುವು:ನಲಪಾಡ್ ಲಿಂಕ್ ಆರೋಪದಿಂದ ರಾಜಕೀಯ ಸಂಚಲನ
    ,

    ಬಿಟ್‌ಕಾಯಿನ್ ಹಗರಣದಲ್ಲಿ ಹೊಸ ತಿರುವು:ನಲಪಾಡ್ ಲಿಂಕ್ ಆರೋಪದಿಂದ ರಾಜಕೀಯ ಸಂಚಲನ

    ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ. ಶ್ರೀಕಿ ಬಂಧನ ಮತ್ತು ನಲಪಾಡ್ ಲಿಂಕ್ ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ…

    Continue Reading

  • ಮನೆಯ ಬೀಗ ಮುರಿದು ₹6 ಲಕ್ಷ ದೋಚಿದ್ದ ಆರೋಪಿ ಬಂಧನ
    ,

    ಮನೆಯ ಬೀಗ ಮುರಿದು ₹6 ಲಕ್ಷ ದೋಚಿದ್ದ ಆರೋಪಿ ಬಂಧನ

    ಬೈಂದೂರು: ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ಬೈಂದೂರು ಪೊಲೀಸರು, ರಾಜಸ್ಥಾನ ಮೂಲದ ಆರೋಪಿಯನ್ನು ಬಂಧಿಸಿ 6 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಮಹೇಂದ್ರ ಸೈನ್ (23) ಬಂಧಿತ ಆರೋಪಿ. ಈತ ಬೈಂದೂರಿನ ಬಂಕೇಶ್ವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಏಪ್ರಿಲ್ 23 ರಂದು ಮಧ್ಯಾಹ್ನ ಯಡ್ತರೆ ನಿವಾಸಿ ರಾವಲ್ ಸಿಂಗ್ ಎಂಬುವವರು ಮನೆಯಲ್ಲಿ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಆರೋಪಿ, ಮುಂಭಾಗದ ಬಾಗಿಲಿನ ಬೀಗ…

    Continue Reading

  • ಹೆಂಡತಿ-ಮಕ್ಕಳನ್ನು ಮನೆಗೆ ಕಳುಹಿಸು ಎಂದಿದ್ದಕ್ಕೆ ಪೆಟ್ರೋಲ್ ಸುರಿದು ಜೀವಂತ ದಹನ
    ,

    ಹೆಂಡತಿ-ಮಕ್ಕಳನ್ನು ಮನೆಗೆ ಕಳುಹಿಸು ಎಂದಿದ್ದಕ್ಕೆ ಪೆಟ್ರೋಲ್ ಸುರಿದು ಜೀವಂತ ದಹನ

    ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿಕೊಡುವಂತೆ ಕೇಳಲು ಹೋದ ವ್ಯಕ್ತಿಯ ಮೇಲೆ ಆತನ ಮಾವ ಮತ್ತು ಭಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಾವಿಗೂ ಮುನ್ನ ತನ್ನ ಮೇಲಾದ ದೌರ್ಜನ್ಯದ ಕುರಿತು ವ್ಯಕ್ತಿ ಹೇಳಿಕೊಂಡಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗೆ ಬಾ ಎಂದಿದ್ದಕ್ಕೆ ಒಪ್ಪದ ಹೆಂಡತಿ ಆನೇಕಲ್ ತಾಲೂಕಿನ ಚೂಡೇನಹಳ್ಳಿ ನಿವಾಸಿ ವಿ. ನವೀನ್ (25)…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed