Category: ಬ್ರೇಕಿಂಗ್ ನ್ಯೂಸ್
-

ಪರೀಕ್ಷಾ ಕೇಂದ್ರದಲ್ಲಿ ವೈದಿಕ ಸಂಪ್ರದಾಯದ ಜನಿವಾರ ತೆರವು ಗೊಳಿಸಿದ ಶೈಕ್ಷಣಿಕ ಸಿಬ್ಬಂದಿಗಳ ಕ್ರಮ ಖಂಡನೀಯ : ಕೆ.ಅಶ್ರಫ್
ಬೆಂಗಳೂರು: ಇತೀಚೆಗೆ ರಾಜ್ಯದಲ್ಲಿ ನಡೆದ ಸ್ಪರ್ಧಾತ್ಮಕ (ಸಿ ಇ ಟಿ) ಪರೀಕ್ಷೆ ಸಂಧರ್ಭದಲ್ಲಿ ವೈದಿಕ ವಿಧ್ಯಾರ್ಥಿಗಳ ಧಾರ್ಮಿಕ ಸಂಕೇತವಾದ ಜನಿವಾರ (ಪವಿತ್ರ ನೂಲು) ಅನ್ನು ತೆರವು ಗೊಳಿಸಲು ಶೈಕ್ಷಣಿಕ ಸಿಬ್ಬಂದಿ ಪ್ರಯತ್ನಿಸಿರುವುದು ಖಂಡನೀಯ. ಪ್ರತಿ ಶಿಕ್ಷಣಾರ್ಥಿ ಗೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಎದುರಿಸುವ ಹಕ್ಕಿನೊಂದಿಗೆ ತನ್ನ ಧಾರ್ಮಿಕ ಸಂಕೇತವನ್ನು ಪಾಲಿಸುವ ಹಕ್ಕು ಕೂಡ ಇರುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಈ ದೇಶದ ಪ್ರತಿ ಪ್ರಜೆಯ ಹಕ್ಕು, ಅದನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವಂತಿಲ್ಲ. ಯಾವುದೇ ಪರೀಕ್ಷಾ ಅಭ್ಯರ್ಥಿ ತನ್ನ ಧಾರ್ಮಿಕ…
-

ಮಂಗಳೂರಿನಲ್ಲಿ ಮಚ್ಚು ಹಿಡಿದು ಹಲ್ಲೆ ಯತ್ನ: ಸೆಕ್ಷನ್ 307 ಅಡಿ ಪ್ರಕರಣ ದಾಖಲು
ಮಂಗಳೂರು: ವಾಮಂಜೂರು ನಿವಾಸಿ ನವೀನ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಕೆಲವು ತಿಂಗಳ ಹಿಂದೆ ವಿಚ್ಛೇದನ ಪಡೆದು ಜೋಕಟ್ಟೆಗೆ ಸ್ಥಳಾಂತರಗೊಂಡ ನಂತರ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಏಪ್ರಿಲ್ 24 ರ ಶುಕ್ರವಾರ ರಾತ್ರಿ, ನವೀನ್ ಮಚ್ಚು ತೆಗೆದುಕೊಂಡು ಕಲವರ್ ನಿವಾಸಿ ದೇವಿ ಪ್ರಸಾದ್ ಮೇಲೆ ಹಲ್ಲೆ ಮಾಡಲು ಹೋಗಿ, ಆತನ ಮತ್ತು ಆತನ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾಗಿ ವರದಿಯಾಗಿದೆ.ದೇವಿ ಪ್ರಸಾದ್ 112 ಗೆ ಕರೆ ಮಾಡುವ ಮೂಲಕ ತುರ್ತು ಸೇವೆಗಳಿಗೆ ಮಾಹಿತಿ ನೀಡಿದರು. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ…
-

ಇನ್‌ಸ್ಟಾಗ್ರಾಂ ಪರಿಚಯದಿಂದ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ದೂರು ದಾಖಲು
ಕಾರ್ಕಳ : ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ವಿವಿಧ ಸಬೂಬುಗಳನ್ನು ಹೇಳಿ ಕಾರ್ಕಳದ ವ್ಯಕ್ತಿಯೊಬ್ಬರಿಂದ ₹25.66 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ಈ ಸಂಬಂಧ ನಲ್ಲೂರು ಗ್ರಾಮದ ಗಣೇಶ ಆಚಾರ್ಯ (34) ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರ ಗಣೇಶ ಆಚಾರ್ಯ ಅವರಿಗೆ 2024ರ ಜುಲೈನಲ್ಲಿ ಇನ್‌ಸ್ಟಾಗ್ರಾಂ ಮೂಲಕ ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತನ ಪರಿಚಯವಾಗಿತ್ತು. ಆರಂಭದಲ್ಲಿ ಕಾಲೇಜಿಗೆ ಹೋಗಲು ₹200 ಬೇಕೆಂದು ಕೇಳಿ ಗೂಗಲ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ…
-

ಗರುಡ ಗ್ಯಾಂಗ್ ಮೇಲೆ ಕಟ್ಟೆಚ್ಚರ: ಗ್ಯಾಂಗ್‌ನ ಸದಸ್ಯನ ಮೇಲೆ ಗೂಂಡಾ ಕಾಯ್ದೆ ಪ್ರಯೋಗ
ಉಡುಪಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಉಡುಪಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್”ನ ಸಕ್ರೀಯ ಸದಸ್ಯ ಮಹಮ್ಮದ್ ಅಲ್ಫಾಜ್ (25) ವಿರುದ್ಧ ಗೂಂಡಾ ಕಾಯ್ದೆಯಡಿ ಅರೆಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಾದ ಶಿರ್ವಾ, ಗಂಗೊಳ್ಳಿ, ಬೈಂದೂರು, ಉಡುಪಿ ನಗರ, ಕುಂದಾಪುರ ಗ್ರಾಮಾಂತರ ಮತ್ತು ಕುಂದಾಪುರ ನಗರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಪೊಲೀಸ್…
-

ಬ್ಯಾಂಕ್‌ನಲ್ಲಿ 4 ಕೋಟಿ ಚಿನ್ನ ಕಳವು: ಬ್ಯಾಂಕ್ ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರು : ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿ ಮೂರು ತಿಂಗಳಾದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ.ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಚಿನ್ನಾಭರಣ ಕಳವು ಪ್ರಕರಣದಲ್ಲಿ ಕಿರಣ್ ಬಂಧನವಾಗಿತ್ತಾದರೂ ಪೊಲೀಸರು ಆತನ ವಿರುದ್ಧ ಸರಿಯಾದ ಕ್ರಮ…
-

ವೈರಲ್ ವಿಡಿಯೋದಿಂದ ಸಿಕ್ಕಿಬಿದ್ದ ಪುಂಡಾಟ:ಆಟೋ ಚಾಲಕರ ಅಟ್ಟಹಾಸಕ್ಕೆ ಕಡಿವಾಣ
ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ಸಾರಿಗೆ ಸಂಸ್ಥೆಯ ಬಸ್ ಅನ್ನು ರಸ್ತೆ ಮಧ್ಯೆಯೇ ಅಡ್ಡಗಟ್ಟಿ, ಚಾಲಕನೊಂದಿಗೆ ಕಿರಿಕ್ ಮಾಡಿ ವಿಕೃತಿ ಮೆರೆದಿದ್ದ ಮೂವರು ಆಟೋ ಚಾಲಕರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರಿನಿಂದ ಪ್ರಯಾಣಿಕರನ್ನು ಹೊತ್ತು ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಬಸ್ಸನ್ನು ಈ ಮೂವರು ಯುವಕರು ತಡೆದಿದ್ದಾರೆ. ತಮ್ಮ ಆಟೋವನ್ನು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಬಸ್ಸಿನ ಮುಂಭಾಗದಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾ ಪುಂಡಾಟ ಮೆರೆದಿದ್ದಾರೆ. ಬಸ್ ಚಾಲಕ ಹಾರ್ನ್ ಮಾಡಿ ದಾರಿ ಬಿಡುವಂತೆ…
-

ಪತ್ನಿಯ ಶಿರಚ್ಛೇದ ಮಾಡಿ ತಲೆಯೊಂದಿಗೆ ಬೀದಿಯಲ್ಲಿ ಅಟ್ಟಹಾಸ ಮೆರೆದ ಪತಿ
ಕೊರ್ಬಾ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ. ಆರೋಪಿ…
-

ಕಾರ್ಖಾನೆ ಶೌಚಾಲಯದಲ್ಲಿ ಭ್ರೂಣ ಪತ್ತೆ ಪ್ರಕರಣ: 19 ವರ್ಷದ ಯುವತಿ ವಶಕ್ಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ…
-

ಪಾರಿವಾಳದಿಂದ ಪ್ರಾರಂಭವಾದ ಜಗಳ: ಯುವಕನ ಮೇಲೆ ಮಾರಕ ದಾಳಿ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್‌ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ. ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ ಮಲ್ಲಿಕಾರ್ಜುನ್ ಕಳೆದ ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ಸೋಮವಾರ ಸಂಜೆ ಮಲ್ಲಿಕಾರ್ಜುನ್ ಸ್ನೇಹಿತ ಪ್ರಶಾಂತ್ ಎಂಬಾತ ಸಾಕಿದ್ದ ಪಾರಿವಾಳವನ್ನು ಅದೇ…
-

ತೊಕ್ಕೊಟ್ಟು ಫ್ಲೈಓವರ್ ರೌಡಿ ಶೀಟರ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.ಆರೋಪಿಯು ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











