Category: ಬ್ರೇಕಿಂಗ್ ನ್ಯೂಸ್
-

ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ: ಗುಂಪು ದಾಳಿ, ಪ್ರಕರಣ ದಾಖಲು
ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು ಸಂಜೆ ತನ್ನ ಸ್ನೇಹಿತರಾದ ಸುಹೇಲ್ ಹಾಗೂ ಅಝಾರ್ ಜೊತೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿ.ಕೆ. ಮೊಯಿನುದ್ದೀನ್, ಮೊಹದ್ ಸೇರಿದಂತೆ ಇತರ ಐವರು ಸ್ಥಳಕ್ಕೆ ಬಂದು ಆದಿಲ್ ಮೇಲೆ…
-

ಕೌಟುಂಬಿಕ ಕಲಹ ದುರಂತ: ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಪತಿ
ಬೆಂಗಳೂರು: ಕೌಟುಂಬಿಕ ವಿಚಾರವಾಗಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸುಮಿತ್ರಾ ಹಾಗೂ ಡೇವಿಡ್ ಎಂದು ಗುರುತಿಸಲಾಗಿದೆ. ಮೃತ ಸುಮಿತ್ರಾ ಮತ್ತು ಡೇವಿಡ್ ಕಳೆದ ಒಂದು ದಶಕದಿಂದ ಗಂಗೇನಹಳ್ಳಿಯ ಮನೆಯೊಂದರಲ್ಲಿ ವಾಸವಿದ್ದರು. ಇತ್ತೀಚಿನ ದಿನಗಳಲ್ಲಿ ಇವರ ನಡುವೆ ಪದೇ ಪದೇ ಕೌಟುಂಬಿಕ ಕಲಹಗಳು ಏರ್ಪಡುತ್ತಿದ್ದವು ಎನ್ನಲಾಗಿದೆ. ಬುಧವಾರ ಸಂಜೆ ದಂಪತಿಗಳ ನಡುವೆ ಜಗಳ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆಕ್ರೋಶಗೊಂಡ ಡೇವಿಡ್,…
-

ಉಜಿರೆಯಲ್ಲಿ ಆಘಾತಕಾರಿ ಘಟನೆ: ತಂದೆಯ ಮೇಲೆ ಮಗನಿಂದ ಮಚ್ಚು ದಾಳಿ, ಕೊಲೆಗೆ ಯತ್ನ
ಬೆಳ್ತಂಗಡಿ: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮರದ ಮಿಲ್ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ ಸೇವಿಸಿದ್ದರು. ಈ ವೇಳೆ ಇಬ್ಬರ ನಡುವೆ…
-

ತಣ್ಣೀರುಬಾವಿ ಬೀಚ್ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ.ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಇನ್ನು ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು…
-

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಹಾಗೂ ಪೇದೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಂಚದ ಬೇಡಿಕೆ ಬಗ್ಗೆ…
-

ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ- ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ
ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು…
-

ಮಂಗಳೂರಿನಲ್ಲಿ ಮೂಡ ಬೃಹತ್ ಹಗರಣ! ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಅರ್ಜಿ
ಮಂಗಳೂರಿನಲ್ಲಿ ಮತ್ತೊಂದು ಬೃಹತ್ ಹಗರಣದ ಸುಳಿವು ಸಿಕ್ಕಿದೆ. ಮೂಡ (MUDA) ಸಂಬಂಧಿತ ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಸಂಬಂಧವಾಗಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದೆ.ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮುಖದಮೆ ದಾಖಲಿಸುವಂತೆ ಒತ್ತಾಯ ಮಾಡಲಾಗಿದೆ. ಇದರಲ್ಲಿ ಅತ್ಯಂತ ಗಂಭೀರ ಆರೋಪವೇನಂದರೆ ಓಲ್ಡ್ ಏಜ್ ಹೋಂ ನಿರ್ಮಾಣಕ್ಕಾಗಿ ಮಾತ್ರ ಭೂ ಪರಿವರ್ತನೆ ಅನುಮತಿ ನೀಡಲಾಗಿತ್ತು.ಆದರೆ, ನಿಯಮಾವಳಿಗಳ ಪ್ರಕಾರ ಈ ಜಾಗವನ್ನು (old age home) ಕಟ್ಟಡ ನಿರ್ಮಾಣಕ್ಕೆ ಮಾತ್ರ…
-

ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ‘ಕೋಕಾ’ ಕಾಯ್ದೆ ಅನ್ವಯ- ಹತ್ತು ಮಂದಿ ಹಂತಕರ ಬಂಧನ, ಮೈಸೂರು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ
ಮಂಗಳೂರು: ನಗರದ ಹೊರವಲಯದ ತೊಕ್ಕೋಟಿನಲ್ಲಿ ನಡೆದ ಅರಿಫ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಇದೀಗ ಆರೋಪಿಗಳ ವಿರುದ್ಧ ಅತ್ಯಂತ ಕಠಿಣವಾದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ – KCOCA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕೊಲೆ ಕೃತ್ಯವು ವ್ಯವಸ್ಥಿತ ಸಂಘಟಿತ ಅಪರಾಧ ಜಾಲದಿಂದ ನಡೆದಿದೆ ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಇದುವರೆಗೆ ಒಟ್ಟು 15 ಮಂದಿ ಆರೋಪಿಗಳ ಭಾಗಿಯಾಗಿರುವುದನ್ನು ತನಿಖಾ ತಂಡ ಪತ್ತೆಹಚ್ಚಿದೆ. ಈ ಪೈಕಿ 10…
-

ಭೀಕರ ಹತ್ಯೆ : ಹೊಸ ಕಾರು ಖರೀದಿಸಿದ್ದ ಯುವಕನನ್ನ ಅದೇ ಕಾರಲ್ಲಿ ಸುಟ್ಟು ಕೊಂದ ಪಾಪಿಗಳು!
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಹೊಸ ಕಾರು ಖರೀದಿಸಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾರಿನ ಸಮೇತ ಯುವಕನನ್ನು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಗೀಡಾದ ವ್ಯಕ್ತಿಯ ಸಂಬಂಧಿ ಸದಾಶಿವ ಪಡಸಲಗಿ, ರವಿ ಪಾಟೀಲ್…
-

ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನಿಂದ ಹಲ್ಲೆ..!!
ಮಂಗಳೂರು : ನಗರದ ನಂತೂರು ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಸಿಪಿಸಿ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್ನಲ್ಲಿ ಮಹಿಳೆಯೊಂದಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











