Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: ದಕ್ಕೆ ತೀರದ ನದಿಯಲ್ಲಿ ಶವ ಪತ್ತೆ!!
ಮಂಗಳೂರು: ಮೀನುಗಾರಿಕೆ ಬಂದರು (ದಕ್ಕೆ) ತೀರದ ನದಿಯಲ್ಲಿ ನಾಸಿರ್ ಯಾನೆ ದಕ್ಕೆ ನಾಸಿರ್ ಎಂಬಾತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ…
-

ಆರೀಫ್ ಹತ್ಯೆ ಪ್ರಕರಣ: ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು : ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಎಂದು ತಿಳಿದುಬಂದಿದೆ. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ…
-

ಬಂಟ್ವಾಳ : ದ್ವಿಚಕ್ರ ವಾಹನ ಕಳವು – ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವಾ (55) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಇರ್ಶಾದ್ (37) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ…
-

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಿಂದ ಕಾಣಿಕೆ ಡಬ್ಬಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026, ಕಲಂ 303(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಏಪ್ರಿಲ್ 6ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ…
-

ಅಡ್ಡೂರು ಕೋಡಿಬೆಟ್ಟುವಿನಲ್ಲಿ ಭಾರಿ ಪ್ರಮಾಣದ ಅಕ್ರಮ ಮರಳು ದಾಸ್ತಾನು!! ಕಣ್ಮುಚ್ಚಿ ಕುಳಿತ ಗಣಿ ಇಲಾಖೆ
ಮಂಗಳೂರು: ಅಡ್ಡೂರು ಕೋಡಿಬೆಟ್ಟು ಎಂಬಲ್ಲಿ ಸುಮಾರು 2,500 ದಿಂದ 3,000 ಲೋಡು ವರೆಗೆ ಅಕ್ರಮವಾಗಿ ಮರಳು ಸಂಗ್ರಹಿಸಿದ್ದು , ಇದಕ್ಕೆ ಯಾವುದೇ ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ. ಈ ರೀತಿ ಕಾನೂನಿನ ಬಾಹಿರವಾಗಿ ಮರಳು ಸಂಗ್ರಹಿಸಿವವರ ವಿರುದ್ದ ಗಣಿಗಾರಿಕೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಗಣಿ ಇಲಾಖೆಯ ಅಧಿಕಾರಿಗಳಿಗೂ ಇದರ ಬಗ್ಗೆ ಪಾಲು ಇದೆ ಎಂಬ ಸಂಶಯ ಮೇಲ್ನೋಟಕ್ಕೆ ಕಾಣಿಸುತ್ತದೆ?? ಅಷ್ಟು ದೊಡ್ಡ ಮರಳು ದಾಸ್ತಾನಿಗೆ ಆದೇಶ ಕೊಟ್ಟವರು ಯಾರು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಮಾನ್ಯ…
-

ಧರ್ಮಸ್ಥಳ: ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-

ಭೀಕರ ಮರ್ಡರ್ : ಸರ್ಕಾರಿ ಶಾಲಾ ಶಿಕ್ಷಕಿಯ ಹತ್ಯೆಗೈದು, ಶವ ಸುಟ್ಟುಹಾಕಿದ ಹಂತಕರು
ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು.…
-

ಉಡುಪಿ: ಅಕ್ರಮ ಜಾನುವಾರು ಸಾಗಾಟ- ಮೂವರು ಆರೋಪಿಗಳ ಬಂಧನ!!
ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಬಂಧಿತರು. ಏಪ್ರಿಲ್ 5ರಂದು ಮುಂಜಾನೆ ಸುಮಾರು 5 ಗಂಟೆಗೆ ಪೊಲೀಸರು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುವಾಗ, ಹುಲಿಕಲ್ ಘಾಟಿ ದಿಕ್ಕಿನಿಂದ ಬರುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಎತ್ತುಗಳನ್ನು…
-

ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ
ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











