Category: ಬ್ರೇಕಿಂಗ್ ನ್ಯೂಸ್
-

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಬಂಧನ
ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಧಿಕಾರಿ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್…
-

ಕಾರ್ಕಳ: ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಅರೆಸ್ಟ್!!
ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು. ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ…
-

50 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಭೂಮಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಘಟನೆಯ ವಿವರ: ದಾವಣಗೆರೆ ಜಿಲ್ಲೆಯ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಪ್ಪ ಅವರು, ಭೂಮಿಯ ಸರ್ವೆ ಕೆಲಸ ಮಾಡಿಕೊಡಲು ವೈದ್ಯರೊಬ್ಬರಿಂದ 50,000 ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ವೈದ್ಯರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಕಾರ್ಯಾಚರಣೆ: ದೂರಿನ ಅನ್ವಯ ಇಂದು ವೈದ್ಯರಿಂದ 50 ಸಾವಿರ ರೂ.…
-

ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ!
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯ್ (22) ಎನ್ನುವ ಕನನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂದು ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಯುವಕ ವಿಜಯ್ ಗೆ ಕಿರಣ ಮತ್ತು ವಿನೋದ್ ಎಂಬವರು ಚಾಕು ಇರಿದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
-

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು!!
ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್‌ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು 14 ವರ್ಷ ಒಳಗಿನವರು ಹಾಗೂ ಓರ್ವ…
-

ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ!
ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಂದೆಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಹೌದು, ಹೆಣ್ಣು ಮಕ್ಕಳು ಹುಟ್ಟಿದರೆ ಮಹಾಲಕ್ಷ್ಮಿ ಮನೆಗೆ ಬಂದಳು ಎಂದು ಸಂಭ್ರಮಿಸುವ ಈ ಕಾಲದಲ್ಲಿ, ಕೇವಲ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ಹೆತ್ತ ತಂದೆಯೇ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿದ ಭೀಕರ ಘಟನೆ ತೆಲಂಗಾಣದ ಕರೀಮನಗರ ಜಿಲ್ಲೆಯ ಜೂಬ್ಲಿನಗರದಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ:ಜೂಬ್ಲಿನಗರದ ನಿವಾಸಿ, ಖಾಸಗಿ ಉದ್ಯೋಗಿಯಾಗಿರುವ ಕಚ್ಚು ಶ್ರೀಶೈಲಂ ಮತ್ತು ಮೌನಿಕಾ ದಂಪತಿಗೆ…
-

ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ
ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದಾಳೆ. ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ. ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್.…
-

ಉಡುಪಿ: ಗಡಿಪಾರು ಆದೇಶದ ಆರೋಪಿಯ ಬಂಧನ..!!
ಉಡುಪಿ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಓಡಿ ಹೋಗಿದ್ದ ಫೈಝಲ್ ಎಂಬ ಆರೋಪಿಯನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೊರ ಜಿಲ್ಲೆಗೆ ಗಡಿಪಾರು ಆದೇಶವನ್ನು ಜಾರಿ ಮಾಡಲು ಹೋದ ವೇಳೆ ಆರೋಪಿ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ಮಲ್ಪೆ ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೋದಾಗ, ಆರೋಪಿ ತಾನು…
-

ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!!
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದು, ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.…
-

ಲಂಚ ಪಡೆದಿದ್ದ ಅಧಿಕಾರಿಗೆ ಜೈಲು ಶಿಕ್ಷೆ: ನ್ಯಾಯಾಲಯದ ಮಹತ್ವದ ತೀರ್ಪು
ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಜಿಲ್ಲಾ ವ್ಯವಸ್ಥಾಪಕರಿಗೆ ಶಿವಮೊಗ್ಗ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಕೆಲವು ವರ್ಷಗಳ ಹಿಂದೆ, ಫಲಾನುಭವಿಯೊಬ್ಬರಿಗೆ ಸಾಲ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಆರೋಪಿ ಅಧಿಕಾರಿಯು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ದೂರು ಸ್ವೀಕರಿಸಿದ್ದ ಲೋಕಾಯುಕ್ತ ಪೊಲೀಸರು, ಲಂಚದ ಹಣವನ್ನು ಪಡೆಯುತ್ತಿದ್ದಾಗಲೇ ಅಧಿಕಾರಿಯನ್ನು ಕೆಂಗೆಣ್ಣಾಗಿ ಬಂಧಿಸಿದ್ದರು. ಅಂದಿನಿಂದ ಈ ಪ್ರಕರಣದ ವಿಚಾರಣೆ ಶಿವಮೊಗ್ಗದ ವಿಶೇಷ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











