Category: ಬ್ರೇಕಿಂಗ್ ನ್ಯೂಸ್
-

ಕಾರ್ಕಳದಲ್ಲಿ ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: 8 ಮಂದಿ ಬಂಧನ
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿದ್ದು, 8 ಮಂದಿಯನ್ನು ದಸ್ತಗಿರಿ ಮಾಡಿರುವ ಘಟನೆ ನಡೆದಿದೆ. ಫೆಬ್ರವರಿ 7ರ ರಾತ್ರಿ ಸುಮಾರು 8 ಗಂಟೆ 45 ನಿಮಿಷದ ವೇಳೆಗೆ, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ ಬೆಟ್ಟು ಪ್ರದೇಶದಲ್ಲಿರುವ ಸಾದ್ವಿನ್ ಎಂಬುವರ ಮನೆಯ ಮೊದಲ ಮಹಡಿಯಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿರಿಸಿ ಇಸ್ಪೀಟ್ ಎಲೆಗಳಿಂದ ಅಂದರ್-ಬಾಹರ್ ಎಂಬ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ…
-

ಬೆಳ್ತಂಗಡಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!!
ಮಂಗಳೂರು : ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಕೇಸ್ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮ ಬಯಲಾಗಿದೆ. ಮಂಗಳೂರಿನ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಈ ಒಂದು ಅಪಹರಣದ ನಾಟಕ ಮಾಡಿದ್ದು ಬಯಲಾಗಿದೆ. ಹೌದು ನಿನ್ನ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಅಪಹರಣದ ನಾಟಕವಾಡಿದ್ದು ಮಂಗಳೂರಿನ ಕಾಲೇಜಿಗೆ ಸೇರಲು ಯುವತಿ ಖತರ್ನಾಕ್ ಪ್ಲಾನ್ ಮಾಡಿದ್ದಾಳೆ. ಕಿಡ್ನಾಪ್ ಡ್ರಾಮ ಮಾಡಿದ್ದು, ಮಂಗಳೂರು ಕಾಲೇಜು ಸೇರಿಸುತ್ತಾರೆ ಎಂದು ಯುವತಿ ಪ್ಲಾನ್ ಮಾಡಿದ್ದಾಳೆ. ನಿನ್ನೆ ಬೆಳ್ತಂಗಡಿ ಠಾಣೆಯಲ್ಲಿ ಕಿಡ್ನ್ಯಾಪ್ ಯತ್ನ ಕೇಸ್ ದಾಖಲಾಗಿತ್ತು.…
-

ಮಂಗಳೂರು: apk file ಡೌನ್‌ಲೋಡ್ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ
ಮಂಗಳೂರು : ಬರೀ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಅಪರಿಚಿತರು ಪದೇಪದೆ ಪೋನ್ ಮಾಡಿ ಕೆವೈಸಿ ದಾಖಲಾತಿಗಳನ್ನು…
-

ಸೈಬರ್ ವಂಚನೆ ತಡೆಯಲು ಎಸ್‌ಒಪಿ ರೂಪಿಸಿ: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕೃತಿಯ ಮುದ್ರಣ ಪೂರ್ವ ಪ್ರತಿಯನ್ನು ಸಕ್ಷಮ ಅಧಿಕಾರಿಗಳಿಂದ ಕಡ್ಡಾಯ ಅನುಮತಿಯನ್ನು ಪಡೆಯದೆ ಪ್ರಸಾರ ಮಾಡಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ಹರಿದಾಡುತ್ತಿರುವ ಮಾಹಿತಿಯನ್ನು ದಿಲ್ಲಿ ಪೋಲಿಸರು ಗಮನಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪೊಲೀಸ್ ಹೇಳಿಕೆಯ ಪ್ರಕಾರ,ಕೃತಿಯ ಪ್ರಕಟಣೆಗೆ…
-

ಉಡುಪಿ: ಲಾಡ್ಜ್‌ನಲ್ಲಿ ವ್ಯಕ್ತಿ ಕುಳಿತ ಸ್ಥಿತಿಯಲ್ಲಿ ಶವವಾಗಿ ಪತ್ತೆ..!!
ಉಡುಪಿ : ಕುಳಿತಿದ್ದ ಸ್ಥಿತಿಯಲ್ಲೇ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ಉಡುಪಿಯ ಹಳೇ ಸರ್ಕಾರಿ ಬಸ್ ನಿಲ್ದಾಣದ ಸಮೀಪವಿರುವ ಲಾಡ್ಜ್‌ವೊಂದರಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಮೂಲದ ಮಹಾಂತೇಶ್ ಎಂ.ಜಿ. ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಹಾಂತೇಶ್ ಅವರು ಬಹಳ ಹೊತ್ತಾದರೂ ಕೊಠಡಿಯಿಂದ ಹೊರಬಾರದಿದ್ದಾಗ ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಿದೆ. ತಕ್ಷಣವೇ ಬಾಗಿಲು ತೆರೆದು ನೋಡಿದಾಗ ಅವರು ಕುರ್ಚಿಯಲ್ಲೇ ಕುಳಿತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಿಂದ ಹೊರಡುವಾಗ ಮಂಗಳೂರಿನ ಆಸ್ಪತ್ರೆಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ,…
-

ಬೆಳ್ತಂಗಡಿ: ಓಮ್ನಿ ಕಾರಿನಲ್ಲಿ ಬಂದ ಅಪರಿಚಿತ ತಂಡವೊಂದು ಬಾಲಕಿಯನ್ನು ಅಪಹರಿಸಲು ಯತ್ನ..!!
ಬೆಳ್ತಂಗಡಿ: ಶಾಲಾ ಬಾಲಕಿಯೊಬ್ಬಳನ್ನು ಮಾರುತಿ ಓಮ್ನಿ ಕಾರಿನಲ್ಲಿ ಬಂದ ಅಪರಿಚಿತ ತಂಡವೊಂದು ಅಪಹರಿಸಲು ಯತ್ನಿಸಿದ ಬೆಚ್ಚಿಬೀಳಿಸುವ ಘಟನೆ ಸೋಮವಾರ ಬೆಳಿಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯವನ್ನು ಪ್ರತಿರೋಧಿಸಿದ ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದ್ದು, ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇಲ್ಲಿನ 16 ವರ್ಷದ ಬಾಲಕಿಯು ಇಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಸ್ಕೂಟಿಯಲ್ಲಿ ಶಾಲೆಗೆ ತೆರಳುತ್ತಿದ್ದಳು. ಮನೆಯಿಂದ ಸುಮಾರು 300 ಮೀಟರ್ ಕ್ರಮಿಸುತ್ತಿದ್ದಂತೆ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಅಪರಿಚಿತರು…
-

ವಿಟ್ಲ : ಬೈಕ್ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು..!!
ವಿಟ್ಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ…
-

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್
ಬೆಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದ್ದು, ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ…
-

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ- 3 ಮೊಬೈಲ್ ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ. ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು…
-

MDMA ಮಾರಾಟ ಪ್ರಕರಣ: ಆರೋಪಿ ಅರೆಸ್ಟ್..!!
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











