Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್..!!
ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ ಡಿ.26ರ ರಾತ್ರಿ ಹೆಂಚು ತೆಗೆದು ಒಳ ಪ್ರವೇಶಿಸಿ…
-

ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ಇಂದು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ…
-

ಪ್ರವಾಸಿ ಬೋಟುಗಳಿಗೆ ಕಡಲಿಗಿಳಿಯಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ
ಉಡುಪಿ ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದOತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದ್ದಾರೆ. ಕೋಡಿಬೆಂಗ್ರೆ ಬೀಚ್ ನಲ್ಲಿ ಪ್ರವಾಸೀ ಬೋಟ್ ದುರಂತಕ್ಕೀಡಾದ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು…
-

4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : 10 ಆರೋಪಿಗಳು ಅರೆಸ್ಟ್
ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 4 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ಮೂಲದ 7 ಆರೋಪಿಗಳು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. 3 ಕೆಜಿ ಹೈಡ್ರೋಗಾಂಜಾ, 50 ಗ್ರಾಂ MDMA, 500 ಚರಸ್, 500 LSD ಮಾತ್ರೆ, 10 ಕೆಜಿ ಗಾಂಜಾ, ಎರಡು ಕಾರು ಹಾಗೂ 14 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೇರಳ…
-

ಸಂಪತ್ ಕುಮಾರ್ ಶೆಟ್ಟಿಯ ಭಂಡ ಧೈರ್ಯಕ್ಕೆ ಕೊನೆ ಎಂದೂ.?? ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ ವಿರುದ್ಧ ಧ್ವನಿ ಎತ್ತುವವರಿಗೆ ಮಾನಹಾನಿ ನೋಟಿಸ್ ಸರಿಯೇ..!?
ಕುರುಡು ಕಾಂಚಾಣ ಕುಣಿಯುತ್ತಲಿತು ಕಾಲಿಗೆ ಬಿದ್ದವರ ತುಳಿಯುತ್ತಲಿತೋ ಎಂಬ ಗಾದೆ ಮಾತು ಈ ಸಂಪತ್ ಕುಮಾರ್ ಶೆಟ್ಟಿಗೆ ಸರಿಯಾಗಿ ಅನ್ವಯಿಸುತ್ತದೆ. ಯಾಕೆಂದರೆ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣದ ಕುರಿತು ಮಾನ್ಯ ನ್ಯಾಯಾಲಯದ ಆದೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪೋಲಿಸರು ನೋಟಿಸ್ ಮೇಲೆ ನೋಟಿಸ್ ಕಳಿಸಿದರು ತನಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುವ ಸಂಪತ್ ಕುಮಾರ್ ಶೆಟ್ಟಿಗೆ ಪೋಲಿಸರು ತಮ್ಮ ಲಾಟಿ ರುಚಿ ತೋರಿಸುವುದೇ ಉತ್ತಮ ಎಂಬುವಂತಾಗಿದೆ. ಅಕ್ರಮ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಮಾನ…
-

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವು
ನವದೆಹಲಿ: ಮಹಾರಾಷ್ಟ್ರದ 8 ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತದ ಪ್ರಮುಖ ರಾಜಕಾರಣಿ ಅಜಿತ್ ಪವಾರ್ ಬುಧವಾರ (ಜನವರಿ 28) ವಿಮಾನ ಅಪಘಾತದಲ್ಲಿ ನಿಧನರಾದರು. ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುವಾಗ ವಿಮಾನವು ನಿಯಂತ್ರಣ ಕಳೆದುಕೊಂಡಿತು, ರನ್ ವೇಯಿಂದ ಹೊರನಡೆದಿತು ಮತ್ತು ಪರಿಣಾಮದ ನಂತರ ಬೆಂಕಿಗೆ ಆಹುತಿಯಾಯಿತು. ಜಿಲ್ಲಾ ಪರಿಷತ್ ಚುನಾವಣೆಗೆ ಮುಂಚಿತವಾಗಿ ಬಾರಾಮತಿಯಲ್ಲಿ ನಿಗದಿಯಾಗಿರುವ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಅವರು ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕಾರ್ಯಕ್ರಮವನ್ನು ಬೆಳಿಗ್ಗೆ 10:00 ರಿಂದ ಸಂಜೆ…
-

ಬೃಹತ್ ಡ್ರಗ್ಸ್ ಜಾಲ ಭೇದಿಸಿದ ಪುತ್ತೂರು ಪೊಲೀಸರು : 6.50 ಲ.ರೂ. ಮೌಲ್ಯದ ಮಾದಕ ವಸ್ತು ವಶ
ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಹಾಗೂ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಬಂಟ್ವಾಳದ ಮುಸ್ತಾಫ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 6.39 ಗ್ರಾಂ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಮಾಫಿಯಾದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಶಪಡಿಸಿಕೊಂಡ…
-

ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಮಂಗಳೂರಿನ ಉದ್ಯಮಿ ಅರೆಸ್ಟ್..!!
ಮಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಬಂಧಿಸಲಾಗಿದೆ. ಈ ಬೆನ್ನಲ್ಲೇ ಅವರು ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಮಂಗಳೂರಿನ ಉದ್ಯಮಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಉದ್ಯಮಿ ಮೈಕಲ್ ಜೊಸೇಫ್ ರೆಗೋ ಅವರನ್ನು ಬಂಧಿಸಲಾಗಿದೆ. ಪಚ್ಚನಾಡಿ ಬಳಿಯ ಈತನಿಗೆ ಸೇರಿದ್ದ ಜೆ.ಕೆ ಫಾರ್ಮ್ ಹೌಸ್ ನಲ್ಲಿ ರಾಜೀವ್ ಗೌಡ ಅವರನ್ನು ತಲೆಮರೆಸಿಕೊಳ್ಳೋದಕ್ಕೆ ನೆರವಾಗಿದ್ದರು. ಇದಲ್ಲದೇ ಮಂಗಳೂರಿನ…
-

ATM ವಾಹನ ದರೋಡೆ : HITACHI ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!
ಬೆಂಗಳೂರು : ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ ಹಣ ವಂಚಿಸಲಾಗಿದ್ದು, ಕೋರಮಂಗಲ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಪೇಮೆಂಟ್ ಸರ್ವಿಸ್ ಕಂಪನಿಯೊಂದು ಕೆಲವು ಬ್ಯಾಂಕ್‌ಗಳ ಎಟಿಎಂ ಯಂತ್ರಗಳಿಗೆ ಹಣ ತುಂಬಿಸುವ ಪರವಾನಗಿ ಪಡೆದಿತ್ತು. ಆದರೆ ಈ ಕೆಲಸ ಮಾಡುತ್ತಿದ್ದ ಪ್ರವೀಣ್, ಧನಶೇಖರ್, ರಾಮಕ್ಕ ಹಾಗೂ ಹರೀಶ್ ಕುಮಾರ್ ಎಂಬ…
-

ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಊಹಾಪೋಹಗಳಿಗೆ ತೆರೆ..!!
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಕುರಿತು ಕಳೆದ ಹಲವು ದಿನಗಳಿಂದ ವಿವಿಧ ರೀತಿಯ ಮಾತುಗಳು ಮತ್ತು ವದಂತಿಗಳು ಕೇಳಿಬರುತ್ತಿದ್ದವು. ಆದರೆ ಇದೀಗ ಆ ಎಲ್ಲಾ ವರ್ಗಾವಣೆಯ ಚರ್ಚೆಗಳಿಗೆ ಪೂರ್ಣ ವಿರಾಮ ಬಿದ್ದಿದೆ. ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಅರುಣ್ ಕುಮಾರ್ ಐಪಿಎಸ್ ಅವರನ್ನು ಮುಂದಿನ ಎರಡು ವರ್ಷದವರೆಗೆ ಯಾವುದೇ ಕಾರಣಕ್ಕೂ ವರ್ಗಾವಣೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











