Category: ಕ್ರೈಂ ಸುದ್ದಿ
Your blog category
-

ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಪ್ರಸಿದ್ಧ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೈವದ ಮೂರ್ತಿ ಹಾಗೂ ಆಭರಣಗಳನ್ನು ಕಳವು ಮಾಡಿದ್ದ ಗ್ಯಾಂಗ್ ಒಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳ ವಿವರ: ಜಾಹೀದ್ ಸಿನಾನ್ (36) – ಹೆಚ್.ಕೆ. ಮಂಜಿಲ್, ಹೆಜಮಾಡಿ ಗ್ರಾಮ, ಉಡುಪಿ.ಯಾಸೀನ್…
-

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್‌ನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…
-

ಉಡುಪಿ: ಜಾಮೀನು ಕೊಡಿಸುವ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ
ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
-

ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!
ಕಾಸರಗೋಡು: ಮರಳು ಸಾಗಣೆ ದೋಣಿಯ ಮೇಲೆ ಕರಾವಳಿ ಪೊಲೀಸರು ನಡೆಸಿದ ದಾಳಿಯ ವೇಳೆ ತಪ್ಪಿಸಿಕೊಳ್ಳಲು ನದಿಗೆ ಜಿಗಿದು ನಾಪತ್ತೆಯಾಗಿದ್ದ ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹೀಂ (35) ಎಂಬವರ ಮೃತದೇಹ ನಾಲ್ಕು ದಿನಗಳ ನಿರಂತರ ಹುಡುಕಾಟದ ಬಳಿಕ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಶಿರಿಯಾ ನದಿಯ ಅಳಿವಿನಬಾಗಿಲು ಪ್ರದೇಶದಲ್ಲಿ ಮೀನುಗಾರರ ಬಲೆಗೆ ಸಿಲುಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೆ.7ರಂದು ರಾತ್ರಿ 8 ಗಂಟೆ ಸುಮಾರಿಗೆ ಶಿರಿಯಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಗೆ ಕರಾವಳಿ ಪೊಲೀಸರು ದಾಳಿ ನಡೆಸಿದ್ದರು. ಈ…
-

ಪುತ್ತೂರು: ಆಟೋದಲ್ಲಿ ಮಾರ್ಗ ಬದಲಿಸಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಚಾಲಕ ವಶಕ್ಕೆ
ಪುತ್ತೂರು : ಪ್ರಯಾಣದ ವೇಳೆ ಪರಿಚಯದ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು, ಮಾರ್ಗ ಬದಲಿಸಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಆಟೋ ಚಾಲಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆಯು ಸೆಪ್ಟೆಂಬರ್ 9ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಈ ವೇಳೆ ತಮ್ಮ ಪರಿಚಯದವರೇ ಆದ ಬಾಲಕೃಷ್ಣ ಎಂಬುವವರ ಆಟೋ ರಿಕ್ಷಾದಲ್ಲಿ ಪುತ್ತೂರು ನಗರದ…
-

ಮಂಗಳೂರು: ತಿಂಗಳ ಹಿಂದೆ ಕೆಲಸದ ಸ್ಥಳದಲ್ಲಿ ಸಾವು: ಕೊಲೆ ಶಂಕಿಸಿ ತಂದೆಯಿಂದ ಪ್ರಕರಣ ದಾಖಲು
ಮಂಗಳೂರು:ತಿಂಗಳ ಹಿಂದೆ ತನ್ನ ಕೆಲಸದ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಅಜಯ್ ಅವರದ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಿ ಆತನ ತಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಜಯ್ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬೇರುಗಳಿಂದ ತಯಾರಿಸಲಾಗುವ ಕುರ್ಚಿ, ಟೇಬಲ್ ಗಳನ್ನು ಮಾರಾಟ ಮಾಡುವ ಅಂಗಡಿ ಹೊಂದಿದ್ದರು. ತಿಂಗಳ ಹಿಂದೆ ಅವರು ಅನಾರೋಗ್ಯಕ್ಕೀಡಾಗಿದ್ದ ಅಜಯ್ ನನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ…
-

ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್
ಮುಲ್ಕಿ: ಕಿಲ್ಪಾಡಿಯ ಪ್ರಸಿದ್ಧ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದ ಸುಮಾರು ₹36 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮೂಲ್ಕಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಪಡುಬಿದ್ರೆ ಕಂಚಿನಡ್ಕದ ಜಾಹಿದ್ ಸಿನಾನ್, ಕಾರ್ನಾಡ್ ನಿವಾಸಿ ಯಾಸಿನ್ ಹಾಗೂ ದಾವಣಗೆರೆಯ ಅಬ್ದುಲ್ ಜುಮಾಲ್ ಮತ್ತು ಮಹಮ್ಮದ್ ಆಫ್ರಿದ್ ಎಂದು ಗುರುತಿಸಲಾಗಿದೆ. ದೈವಸ್ಥಾನದಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಪೂರ್ವಯೋಜಿತವಾಗಿ ಕಳ್ಳತನ ನಡೆಸಲಾಗಿತ್ತು ಎನ್ನಲಾಗಿದ್ದು,…
-

ಪುತ್ತೂರು: ವಿದ್ಯಾರ್ಥಿನಿ ನಿಲಯಕ್ಕೆ ಪ್ರವೇಶಿಸಿ ಬಟ್ಟೆ ಕಳವು ಮಾಡುತ್ತಿದ್ದ ಆರೋಪಿ ಬಂಧನ..!!
ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ ಅಪರಿಚಿತ ಯುವಕನೋರ್ವ, ವಿದ್ಯಾರ್ಥಿನಿಯರು ಒಣಗಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗಿದ್ದ. ಬಟ್ಟೆಗಳು ಕಾಣೆಯಾದ ಬಗ್ಗೆ ವಿದ್ಯಾರ್ಥಿನಿಯರು ನೀಡಿದ ಮಾಹಿತಿಯಂತೆ ಹಾಸ್ಟೆಲ್ ಮೇಲ್ವಿಚಾರಕಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ…
-

ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ
ಬೆಳ್ತಂಗಡಿ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸಾರ್ (21) ಮತ್ತು ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ಬಳಿ ನಾಲ್ವರು ವ್ಯಕ್ತಿಗಳು ನಿಂತಿರುವುದನ್ನು ಪೊಲೀಸರು ಗಮನಿಸಿದರು. ಪೊಲೀಸರು ಅವರ ಬಳಿಗೆ ಬಂದಾಗ, ಗುಂಪು…
-

ಮಂಗಳೂರು ಜೈಲಿಗೆ ಪೊಲೀಸ್ ದಿಢೀರ್ ದಾಳಿ- ರಿಫಾತ್ ಗ್ಯಾಂಗ್ ಸದಸ್ಯರು ಸೇರಿ 9 ಆರೋಪಿಗಳ ಬಳಿ ಫೋನ್ ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್‌ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್ ಬಳಸುತ್ತಿರುವುದು ಪತ್ತೆಯಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್ ಮತ್ತು ಅಬ್ದುಲ್ ಸಾದೀಕ್ ಅವರ ಬಳಿಯೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಇದೇ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











