Category: ಕ್ರೈಂ ಸುದ್ದಿ
Your blog category
-

ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ- ಮಹಿಳೆಗೆ 10.50 ಲಕ್ಷ ಆನ್ಲೈನ್ ವಂಚನೆ!!
ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ ವಾಟ್ಸಾಪ್ನಲ್ಲಿ ಜಾಹೀರಾತು ನೀಡಿ, ಆಪ್ ಡೌನ್ಲೋಡ್ ಮಾಡಿಸಿ 55 ವರ್ಷದ ಮಹಿಳೆಯೊಬ್ಬರಿಗೆ ಬರೋಬ್ಬರಿ ₹10,50,000 (ರೂ. 10.50 ಲಕ್ಷ) ಆನ್ಲೈನ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 29-06-2026ರಂದು ಸಂತ್ರಸ್ತ ಮಹಿಳೆಯು ತಮ್ಮ ಮೊಬೈಲ್ನಲ್ಲಿ ವಾಟ್ಸಾಪ್ ಬಳಸುತ್ತಿದ್ದಾಗ ‘Private Equity Fund Investment Block Deal’ ಎಂಬ ಹೂಡಿಕೆ ಕುರಿತ ಜಾಹೀರಾತು ಕಂಡಿದೆ. ಅದರಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ‘B.R.NOVA’ ಎಂಬ ಆ್ಯಪ್ ಡೌನ್ಲೋಡ್ ಮಾಡಲು…
-

ಸುಳ್ಯ: ವಿವಾಹಿತ ಮಹಿಳೆಯನ್ನು ಬೆದರಿಸಿ ಅತ್ಯಾಚಾರ..!! ಆಟೋ ಚಾಲಕ ಅರೆಸ್ಟ್
ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು…
-

ಉಳ್ಳಾಲ: ಇನ್ಫೋಸಿಸ್ ಉದ್ಯೋಗಿಗಳು ಎಂದು ಹೇಳಿ ಮನೆಗೆ ನುಗ್ಗಿದ ಕಳ್ಳರು- ವೃದ್ಧೆಯ ಚಿನ್ನ ದರೋಡೆ
ಉಳ್ಳಾಲ : ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ವೃದ್ಧೆಯನ್ನು ನೂಕಿ, ಅವರ ಬಾಯಿ ಒತ್ತಿ ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿ ಬಂಗಾರದ ಸರ ಹಾಗೂ ಬಳೆಯನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಕಾಯರಗೋಳಿಯಲ್ಲಿ ಸಂಭವಿಸಿದೆ. ಕಾಯರಗೋಳಿ ನಿವಾಸಿ ಭವಾನಿ ಎಂಬವರು ಆಗಸ್ಟ್ 3ರಂದು ಮಧ್ಯಾಹ್ನ 1.15ರ ಸುಮಾರಿಗೆ ಮನೆಯಲ್ಲಿದ್ದಾಗ ಈ ದುರಂತ ನಡೆದಿದೆ. ಮಗ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ತಟ್ಟಿದ ಇಬ್ಬರು ಅಪರಿಚಿತ ಯುವಕರು, “ನಮಗೆ ಬಾಡಿಗೆ ಮನೆ ಬೇಕು,…
-

ಮಂಗಳೂರು: ಕಾಲೇಜಿನ ಕ್ಯಾಂಪಸ್ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ…
-

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್!!
ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ. 2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆತ ತಲೆಮರೆಸಿಕೊಂಡಿದ್ದ, ಬಂಧನದಿಂದ ತಪ್ಪಿಸಿಕೊಂಡಿದ್ದ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾಗಿದ್ದ ಮತ್ತು ಪತ್ತೆಯಾಗದಂತೆ ವಿಳಾಸ ಬದಲಾಯಿಸಿದ್ದ. ಆತನ ವಿರುದ್ಧ ನಾಪತ್ತೆ ಆರೋಪಪಟ್ಟಿ ಕೂಡ…
-

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್- FIR ದಾಖಲು
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ…
-

ಬೆಳ್ತಂಗಡಿ : ರಿಯಾಜ್ ಪರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ..!!
ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ…
-

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ..! ವಾಹನ ವಶ, ಆರೋಪಿಗಳು ಅರೆಸ್ಟ್
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನ ಮತ್ತು ಮರದ ಮೌಲ್ಯ ಅಂದಾಜು 10 ಲಕ್ಷ ರೂಪಾಯಿ ಅಗಿರುತ್ತದೆ. ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ರೋಹಿತ್.ಎಸ್(20) ಎಂಬಾತನ ವಿರುದ್ಧ ಪ್ರಕರಣ…
-

ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ
ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ್ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಎರಡು…
-

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ- ಭ್ರಷ್ಟಾಚಾರಿ ತುಳಸಿದಾಸ್ ನನ್ನು ವರ್ಗಾಯಿಸಿ ಸ್ಥಳೀಯರ ಪಟ್ಟು
ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಉಳ್ಳಾಲ ನರಸಭೆಯಲ್ಲಿ ಜೆ.ಇ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











