Category: ಕ್ರೈಂ ಸುದ್ದಿ
Your blog category
-

ಉಡುಪಿಯಲ್ಲಿ ಉದ್ಯಮಿಯ ಗುಂಡಿಕ್ಕಿ ಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರ ವೈಷಮ್ಯಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ..!! ಆರೋಪಿಗಾಗಿ ಶೋಧ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರದ ವೈಷಮ್ಯ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಜುಲೈ 30ರ ರಾತ್ರಿ ಆರಂಭವಾದ ಮಾತಿನ ಚಕಮಕಿ, ಜುಲೈ 31ರ ಮುಂಜಾನೆ ಭೀಕರ ತಿರುವು ಪಡೆದುಕೊಂಡಿದೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಡೆರಿಕ್ ಮತ್ತು ಐವನ್ ನಡುವೆ ಗಲಾಟೆ ನಡೆದಿದ್ದು, ಬಳಿಕ ಡೆರಿಕ್ ಲೊಕೇಶನ್ ಕಳುಹಿಸಿ ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿಗೆ ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಮುಂಜಾನೆ ಸುಮಾರು 3:15ರ ವೇಳೆಗೆ ಸ್ಥಳಕ್ಕೆ ಥಾರ್ ಕಾರಿನಲ್ಲಿ ಬಂದ ಆರೋಪಿ ಡೆರಿಕ್, ಕಾರಿನಿಂದ…
-

ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್ ಮಾಡಿ ₹1 ಕೋಟಿ ಬೇಡಿಕೆ- ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಇರುವೇಲ್ ನಿವಾಸಿ ಅಕ್ಷಯ್ ಹಾಗೂ ಪಡೀಲ್ ನಿವಾಸಿ ಶ್ರೇಯಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಸಕರ ಹೆಸರಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಡಿಯೋ ಇರುವುದಾಗಿ ಆರೋಪಿಗಳು ಹೇಳಿ, ಅದನ್ನು ಬಹಿರಂಗಪಡಿಸುವ ಬೆದರಿಕೆ…
-

ಬೆಳ್ಳಂ ಬೆಳಗ್ಗೆ ಉಡುಪಿಯಲ್ಲಿ ಫೈರಿಂಗ್, ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ!!
ಕುಂದಾಪುರ: ವ್ಯಕ್ತಿಯೊಬ್ಬರನ್ನು ಪಿಸ್ತೂಲ್ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಗುಂಡೇಟಿಗೆ ಬಲಿಯಾದವರು. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಅವರು ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ…
-

ಮಂಗಳೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿ, ಬ್ರಿಟನ್ನಿಂದ ಪಾರ್ಸೆಲ್ ಬಂದಿದೆ ಎಂದು ನಂಬಿಸಿ ಮಹಿಳೆಗೆ ವಂಚನೆ!!
ಮಂಗಳೂರು : ಫೇಸ್ಬುಕ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ ಬ್ರಿಟನ್ನಿಂದ ಕಳುಹಿಸಿದ್ದಾನೆ ಎನ್ನಲಾದ ‘ಉಡುಗೊರೆ ಪಾರ್ಸೆಲ್’ ಬಿಡುಗಡೆಗೊಳಿಸುವ ನೆಪದಲ್ಲಿ, ಕಸ್ಟಮ್ಸ್ ಅಧಿಕಾರಿಯಂತೆ ನಟಿಸಿ ಗೃಹಣಿಯೊಬ್ಬರಿಂದ ಬರೋಬ್ಬರಿ ₹2,67,000 ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ಗೃಹಣಿ ಶ್ರೀಮತಿ (46) ಅವರಿಗೆ ಸುಮಾರು ಎರಡು ತಿಂಗಳ ಹಿಂದೆ ಫೇಸ್ಬುಕ್ನಲ್ಲಿ “ಡಾ. ವಿಲಿಯಮ್ಸ್ ಹೆರ್ಬರ್ಟ್” ಎಂಬ ಪ್ರೊಫೈಲ್ನಿಂದ ಪರಿಚಯವಾಗಿತ್ತು. ತಾನು ಯುನೈಟೆಡ್ ಕಿಂಗ್ಡಮ್ (UK) ಮೂಲದವನೆಂದು ಪರಿಚಯಿಸಿಕೊಂಡಿದ್ದ ಈತ, ವಾಟ್ಸಾಪ್ ಹಾಗೂ ಫೇಸ್ಬುಕ್ ಮೆಸೆಂಜರ್ ಮೂಲಕ ನಿರಂತರ ಸಂಪರ್ಕದಲ್ಲಿದ್ದು ದೂರುದಾರರ ವಿಶ್ವಾಸ ಗಳಿಸಿದ್ದ.…
-

ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ನಗದು- ತನಿಖಾಧಿಕಾರಿಗಳೇ ಶಾಕ್
ಕೇವಲ ಒಬ್ಬ ಸಾಮಾನ್ಯ ಬಸ್ ಚಾಲಕನ ಮನೆಯಲ್ಲಿ ಸಿಕ್ಕ ಸಂಪತ್ತು ಕಂಡು ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ. ಪೊಲೀಸರು ಈ ಬೃಹತ್ ಪ್ರಮಾಣದ ಕಪ್ಪು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲು 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳು, 5 ನೋಟು ಎಣಿಕೆ ಯಂತ್ರಗಳು ಹಾಗೂ ಹಲವು ಗಂಟೆಗಳ ಕಾಲ ಶ್ರಮಿಸಬೇಕಾಯಿತು. 35 ಚೀಲಗಳಲ್ಲಿ ಸಿಕ್ಕಿತು 20 ಕೋಟಿ ಕ್ಯಾಶ್, 15 ಕೆಜಿ ಬಂಗಾರ! ವರದಿಯ ಪ್ರಕಾರ, ಕೋಲ್ಕತ್ತಾ ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ (ಪತ್ನಿಯ ಸಹೋದರ) ಹಾಗೂ…
-

20,000 ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ DHO ಕಚೇರಿ ಅಧಿಕಾರಿ
ಅನುದಾನ ಬಿಡುಗಡೆ ಮಾಡಲು ಭ್ರಷ್ಟಾಚಾರದ ದಾರಿ ತುಳಿದಿದ್ದ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ ಸಾರ್ವಜನಿಕರಿಂದ 20,000 ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಈ ಪ್ರಮುಖ ಕಾರ್ಯಾಚರಣೆ ನಡೆದಿದೆ. ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಅಧಿಕಾರಿಯಾಗಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಶ್ರೀಕಾಂತ್ ಬಾವಿಮನಿ ಎಂಬವರೇ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಯಾಗಿದ್ದಾರೆ. ಜಿಲ್ಲಾ ಗುಣಮಟ್ಟ ಭರವಸೆ ಘಟಕಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಬೇಕಿದ್ದ 1.3…
-

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್
ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು…
-

ಫಾರಿನ್ ಸೀರೆ, ವಜ್ರಾಭರಣದ ಗಿಫ್ಟ್ ಆಸೆಗೆ ಬಿದ್ದು, ಮಹಿಳೆಗೆ 1.75 ಕೋಟಿ ಪಂಗನಾಮ..!!
ಸಾಮಾಜಿಕ ಜಾಲತಾಣಗಳಲ್ಲಿ ಅಜ್ಞಾತ ವ್ಯಕ್ತಿಗಳೊಂದಿಗೆ ಮುಖಾಮುಖಿಯಾಗದೆ ಬೆಳೆಸುವ ಆನ್ಲೈನ್ ಸ್ನೇಹ ಹಾಗೂ ದುಬಾರಿ ಉಡುಗೊರೆಗಳ ಆಸೆ ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಿಗಿಲು ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ. ಯಶವಂತಪುರದ ನಿವಾಸಿಯಾಗಿರುವ ಮಹಿಳೆಯೊಬ್ಬರು ದುಬಾರಿ ಸೀರೆ ಹಾಗೂ ವಜ್ರಾಭರಣಗಳ ಗಿಫ್ಟ್ನ ಮೋಹಕ್ಕೆ ಬಿದ್ದು, ಸೈಬರ್ ವಂಚಕರ ಜಾಲದಲ್ಲಿ ಸಿಲುಕಿ ಬರೋಬ್ಬರಿ 1.75 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಈ ಬೃಹತ್ ಆನ್ಲೈನ್ ವಂಚನೆಗೆ ಸಂಬಂಧಿಸಿದಂತೆ ಉತ್ತರ ವಿಭಾಗದ ಸೈಬರ್ ಕ್ರೈಂ (CEN) ಪೊಲೀಸ್ ಠಾಣೆಯಲ್ಲಿ ಎಫ್ಐಆರ್…
-

ಮಂಗಳೂರು: ಗಂಗಾಧರ ಪಾಂಗಾಳ ಕೊಲೆ ಪ್ರಕರಣ- 12 ವರ್ಷಗಳ ಬಳಿಕ ಐತಿಹಾಸಿಕ ತೀರ್ಪು..!
ಮಂಗಳೂರು: 2014ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಸಮೀಪ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿದಂತೆ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2014ರ ಮೇ 15ರಂದು ಗಂಗಾಧರ ಪಾಂಗಾಳ ಅವರು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ ಹಾಗೂ ಭಾಸ್ಕರ್ ಬೈಕಂಪಾಡಿ ಹಳೆ ದ್ವೇಷದ…
-

ಮೊಡಂಕಾಪು: ದೇವಸ್ಥಾನ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ
ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಸ್ತುಗಳಲ್ಲಿ ಹಳೆಯ ಕೊಪ್ಪರಿಗೆ, ಆರು ದೀಪಗಳು,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











