Category: ಕ್ರೈಂ ಸುದ್ದಿ
Your blog category
-

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನ ಹುಚ್ಚಾಟ: ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ
ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ವಿಚಿತ್ರ ವರ್ತನೆಯ ಮೂಲಕ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಬೆಲ್ಲದ ಗಣಪತಿ ದೇವಸ್ಥಾನ ಸಮೀಪ ನಿವಾಸಿಯಾಗಿರುವ ರಂಜಿತ್ ಸೋಮಯಾಜಿ (25) ಎಂಬಾತ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಇದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಉದ್ದನೆಯ ತಲೆಕೂದಲು ಹಾಗೂ ಗಡ್ಡ ಹೊಂದಿದ್ದ ಯುವಕನ ವರ್ತನೆ…
-

ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ
ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ…
-

ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ: ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮೊಯಿದ್ದೀನ್ ಇಸ್ಲಾಂ , ದಿಲ್ವಾರ್…
-

ಬೆಳ್ತಂಗಡಿ: ಮುಸ್ತಾಕ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್..!!
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿ ಅನುಮಾನಾಸ್ಪದವಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ನಡೆದಿದ್ದು ಇಲ್ಲಿಂದ ಅಲ್ಯೂಮಿನಿಯಂ ತಂತಿ ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಎಸ್.ಎಲ್.ವಿ.ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು.1ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ತಂತಿಗೆ ಸಿಲುಕಿ ಅಥವಾ ಇನ್ಯಾವುದೋ ರೀತಿಯಲ್ಲಿ ಕರಾಯ ಗ್ರಾಮದ ನಿವಾಸಿ…
-

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್
ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು…
-

ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಗಲಾಟೆ : ಸ್ನೇಹಿತನಿಗೆ ಚಾಕು ಇರಿದು ಹಲ್ಲೆ, ಯುವಕ ಅರೆಸ್ಟ್!
ಯುವತಿ ವಿಚಾರಕ್ಕೆ ವಾಗುವ ಹಾಗೆ ಯುವಕನಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ಶರತ್ (21) ಮೇಲೆ ಪ್ರಜ್ವಲ್ ಎಂಬ ಯುವಕ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಶರತ್ ಹಾಗೂ ಪ್ರಜ್ವಲ್ ಇಬ್ಬರು ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು ಇದೇ ವಿಚಾರಕ್ಕೆ ಕಳೆದ ಎರಡು ದಿನಗಳಿಂದ ಇಬ್ಬರ ನಡುವೆ ಗಲಾಟೆ ಆಗಿದೆ ಇಂದು ಬೆಳಿಗ್ಗೆ ಪ್ರಜ್ವಲ್ ಅನ್ನು ಶರತ್ ಮಾತನಾಡಿಸಲು ಬಂದಿದ್ದ ಈ ವೇಳೆ ಇಬ್ಬರ ನಡುವೆ…
-

ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ: ಮುಂಬೈಯಲ್ಲಿ ಉಡುಪಿ ಮೂಲದ ಮಹಿಳೆ ಅರೆಸ್ಟ್
ಷೇರು ಮಾರುಕಟ್ಟೆ ಹೂಡಿಕೆಯಿಂದ ಭಾರೀ ಲಾಭದ ಭರವಸೆ ನೀಡಿ ಜನರಿಗೆ ವಂಚಿಸಿದ ಆರೋಪದ ಮೇಲೆ ಉಡುಪಿ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಚೆಕ್ ಬೌನ್ಸ್ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದ ಆರೋಪಗಳೂ ಇವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೂರಿನ ಪ್ರಕಾರ, ಆರೋಪಿಯು ಹೂಡಿಕೆಯ ಮೇಲೆ 10% ರಿಟರ್ನ್ ನೀಡುವುದಾಗಿ ಭರವಸೆ ನೀಡಿ ಒಬ್ಬ ಮಹಿಳೆ ಮತ್ತು ಆಕೆಯ ಸಹೋದರನನ್ನು ಷೇರು ಮಾರುಕಟ್ಟೆಯಲ್ಲಿ ಹಣ…
-

1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಭ್ರಷ್ಟ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ.!
ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಲಬುರಗಿ ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಏನಿದು ಪ್ರಕರಣ?ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ…
-

ಮಂಗಳೂರು:- ಬಸ್ನಲ್ಲಿ ಯುವತಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ- ಕಂಡಕ್ಟರ್ ಅರೆಸ್ಟ್
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ನ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆಯ ನಿವಾಸಿ, ಕರ್ವೇಲು, ಉಪ್ಪಿನಂಗಡಿ, ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 9,…
-

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ..!!ಗಡೀಪಾರಿಗೆ ಪ್ರಕ್ರಿಯೆ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯವಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ನಗರ ಪೊಲೀಸರು ಜುಲೈ 9, 2026ರಂದು ದಾಳಿ ನಡೆಸಿದರು. ದಾಳಿಯ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಒಟ್ಟು 54 ಕಾರ್ಮಿಕರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಯಿತು. ಸುದೀರ್ಘ ಪರಿಶೀಲನೆಯ ಬಳಿಕ ಅವರಲ್ಲಿ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿ ವಾಸ್ತವ್ಯ ಹೂಡಿರುವುದು ದೃಢಪಟ್ಟಿತು. ಬಂಧಿತರನ್ನು ಈ ಕೆಳಕಂಡಂತೆ ಗುರುತಿಸಲಾಗಿದೆ: ಪೊಲೀಸರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











