Category: ಕ್ರೈಂ ಸುದ್ದಿ
Your blog category
-

ಟೈಮಿಂಗ್ಸ್ ವಿಚಾರ ಬಸ್ಸುಗಳನ್ನು ಡಿಕ್ಕಿ ಹೊಡೆಸಿಕೊಂಡು ಹುಚ್ಚಾಟ ಮೆರೆದ ಸಿಟಿ ಬಸ್ ಸಿಬಂದಿಗಳು-ಸಾರ್ವಜನಿಕರಲ್ಲಿ ಅತಂಕ
ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿ ನಿಂತಿದ್ದ ಟಿಎಂಟಿ ಬಸ್ಸಿಗೆ ಪಿ ಎಂ ಟಿ ಬಸ್ ಚಾಲಕ ತನ್ನ ಬಸ್ಸನ್ನು ಅಡ್ಡ ತಂದು ನಿಲ್ಲಿಸಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ನಿನ್ನೆ (ಶನಿವಾರ ) ರಾತ್ರಿ ಸಂಭವಿಸಿದೆ. ಈ ಘಟನೆಯಿಂದ ಕೋಪಗೊಂಡ ಟಿ ಎಂ ಟಿ ಚಾಲಕ ಪ್ರಯಾಣಿಕರನ್ನು ಬಸ್ ನಿಂದ ಇಳಿಸಿ ಎರಡೆರಡು ಬಾರಿ ಡಿಕ್ಕಿ ಹೊಡೆದು ಹುಚ್ಚಾಟ ಮೆರೆದಿದ್ದಾನೆ. ಈ ಘಟನೆಯಿಂದ ಬಸ್ ನ ಮುಂಭಾಗದ ಗ್ಲಾಸ್ ಗಳು…
-

ಉಡುಪಿ: ಶಾಲಾ ಬಸ್ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಸುಳ್ಳು ದೂರು ನೀಡಿದ್ದ ಬಸ್ ಕಂಡಕ್ಟರ್ ಬಂಧನ
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಬಸ್ ಅಪಘಾತ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಬಸ್ ಚಾಲಕನೆಂದು ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದ ಶಾಲಾ ಬಸ್ ಕಂಡಕ್ಟರ್ನೇ ಬಸ್ ಚಲಾಯಿಸಿ ಅಪಘಾತ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಬೆಳಿಗ್ಗೆ 8:05ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 169(ಎ)ರ ಸಿಂಡಿಕೇಟ್ ಸರ್ಕಲ್ ಡೌನ್ ಸಮೀಪದ ಸೆಂಟ್ರಲ್ ಪಾರ್ಕ್ ಹೋಟೆಲ್ ಎದುರು, ಪೆರಂಪಳ್ಳಿಯ ಅಲ್ ಇಬಾದ್ ಇಂಡಿಯನ್ ಶಾಲೆಗೆ…
-

ಉಡುಪಿ: ರಿಯಲ್ ಎಸ್ಟೇಟ್ ಹೂಡಿಕೆ ಹೆಸರಲ್ಲಿ ₹70 ಲಕ್ಷ ವಂಚನೆ..!! ಬ್ಲ್ಯಾಕ್ಮೇಲ್, ಜೀವ ಬೆದರಿಕೆ ಪ್ರಕರಣದಲ್ಲಿ ಮಹಿಳೆ ಬಂಧನ,ಉದ್ಯಮಿಗಳ ಅಶ್ಲೀಲ ವಿಡಿಯೋ ಪತ್ತೆ
ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಉಡುಪಿ ಮೂಲದ ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆ ಜೀನತ್ ಇಬ್ರಾಹಿಂ ಅವರ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು. ಈ…
-

ಗಾಂಜಾ ಪೆಡ್ಲರ್ ಮನೆಯಲ್ಲಿ ಸಿಕ್ಕಿತು 230 ಮೊಬೈಲ್, 17 ಮಾರಕಾಸ್ತ್ರ- ಕಾರ್ಯಾಚರಣೆ ವೇಳೆ ಪೊಲೀಸರಿಗೆ ಶಾಕ್
ಬೆಂಗಳೂರು: ರಾಜಧಾನಿಯ ಬ್ಯಾಟರಾಯನಪುರ ಠಾಣೆಯ ಪೊಲೀಸರು ಶುಕ್ರವಾರ ತಡರಾತ್ರಿ ಭರ್ಜರಿ ಕಾರ್ಯಾಚರಣೆಯೊಂದನ್ನು ನಡೆಸಿ, ನಗರದ ಕುಖ್ಯಾತ ಡ್ರಗ್ ಪೆಡ್ಲರ್ ಅಕ್ಬರ್ ಶರೀಫ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದಾಗ ಲಭ್ಯವಾದ ಮಾಲುಗಳನ್ನು ಕಂಡು ಸ್ವತಃ ಪೊಲೀಸ್ ಅಧಿಕಾರಿಗಳೇ ಕೆಲಕಾಲ ಬೆಚ್ಚಿಬಿದ್ದಿದ್ದಾರೆ. ದಾಳಿಯ ವೇಳೆ ಬರೋಬ್ಬರಿ 230 ಮೊಬೈಲ್ ಫೋನ್ಗಳು, 17 ಮಾರಕಾಸ್ತ್ರಗಳು ಹಾಗೂ 700 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 1 ರಂದು ತಡರಾತ್ರಿ ಸುಮಾರು 10:50 ರ…
-

ಮಂಗಳೂರು: ಹೈವೇ ದರೋಡೆ, ಅಪಹರಣ ಪ್ರಕರಣ- ಮೂವರ ಬಂಧನ
ಮಂಗಳೂರು : ನಗರದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ಮುಂಜಾನೆ ಮಹಾರಾಷ್ಟ್ರದ ಕುಟುಂಬವೊಂದನ್ನು ತಡೆದು, ತಲವಾರು ತೋರಿಸಿ ಬೆದರಿಸಿ, ಚಿನ್ನಾಭರಣ ದೋಚಿ ಹೆಂಡತಿ-ಮಗನನ್ನು ಅಪಹರಿಸಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇಂಟರ್ಸ್ಟೇಟ್ ಗ್ಯಾಂಗ್ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ನಿಮಿಲ್ ಆರ್.ಕೆ (37) ಹಾಗೂ ದರೋಡೆಕೋರರಿಗೆ ಆಶ್ರಯ ಮತ್ತು ವಾಹನ ನೀಡಿ ಕೃತ್ಯಕ್ಕೆ ಸಹಕರಿಸಿದ ಕೊಡಗು ಜಿಲ್ಲೆಯ ಇರ್ಷಾದ್ (40) ಮತ್ತು ಮುಸ್ತಾಫ (49) ಬಂಧಿತ ಆರೋಪಿಗಳು. ಮಹಾರಾಷ್ಟ್ರ ಮೂಲದ ವಿಕಾಸ್ ಸುಬ್ಬರಾವ್…
-

13,000 ಲಂಚ ಸ್ವೀಕರಿಸುತ್ತಿದ್ದ ಅಕೌಂಟೆಂಟ್ ಜನರಲ್ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ!
ಬೆಂಗಳೂರು: ನ್ಯಾಯಾಲಯದ ಆದೇಶದನ್ವಯ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಲ್ಲಿನ ಅಕೌಂಟೆಂಟ್ ಜನರಲ್ (AG) ಕಚೇರಿಯ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ (ಲೋಕಾಯುಕ್ತ) ಬಲೆಗೆ ಬಿದ್ದಿದ್ದಾರೆ. ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ: ನ್ಯಾಯಾಲಯದ ಆದೇಶದ ಪ್ರಕಾರ ಸಾರ್ವಜನಿಕರೊಬ್ಬರಿಗೆ ಸೇರಬೇಕಿದ್ದ 13.90 ಲಕ್ಷ ರೂಪಾಯಿ ಮೊತ್ತದ ಹಣವನ್ನು ಬಿಡುಗಡೆ ಮಾಡಿಕೊಡಲು ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಒಟ್ಟು 16,000 ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಲಂಚ…
-

ಕ್ವಾರಿ ದುರಂತ: ಮಾಲೀಕರು ಸೇರಿ 7 ಜನರ ವಿರುದ್ಧ FIR ದಾಖಲು!
ತಾವರೆಕೆರೆ ವ್ಯಾಪ್ತಿಯಲ್ಲಿ ನಡೆದ 7 ಕಾರ್ಮಿಕರ ಸಾವಿಗೆ ಕಾರಣವಾದ ಭೀಕರ ಕ್ವಾರಿ ದುರಂತಕ್ಕೆ ಸಂಬಂಧಿಸಿದಂತೆ, ಕ್ರಷರ್ ಮಾಲೀಕರು ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಪೊಲೀಸರು ಎಫ್ಐಆರ್ (FIR) ದಾಖಲಿಸಿದ್ದಾರೆ. ಯಾರ್ಯಾರ ವಿರುದ್ಧ ಎಫ್ಐಆರ್ ದಾಖಲಾಗಿದೆ? ದುರಂತಕ್ಕೆ ಕಾರಣವಾದ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಕಾರ್ಮಿಕರಾದ ಗೋಪಿಕೃಷ್ಣನ್ ಟಿ. ಅವರು ನೀಡಿದ ಅಧಿಕೃತ ದೂರಿನ ಮೇರೆಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಹೂಡಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಈ ಕೆಳಗಿನವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ: ಆಸ್ಪತ್ರೆಗೆ ಸಚಿವ ಕೃಷ್ಣಬೈರೇಗೌಡ ಭೇಟಿ ಮತ್ತೊಂದೆಡೆ,…
-

ಉಳ್ಳಾಲ: ಆವರಣ ಗೋಡೆ ಕುಸಿದು ಮನೆ ನೆಲಸಮ- ಇಂಜಿನಿಯರ್ ತುಳಸಿ ವಿರುದ್ಧ ಕ್ರಮಕ್ಕೆ ಆಗ್ರಹ
ಉಳ್ಳಾಲ : ತೊಕ್ಕೊಟ್ಟು ಸಮೀಪದ ಕೆರೆಬೈಲ್ ಎಂಬಲ್ಲಿ ಎಸ್ಟೇಟ್ ಒಂದರ ಕಾಂಕ್ರೀಟ್ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ ಪಕ್ಕದಲ್ಲಿದ್ದ ಕಿಶೋರ್ ಎಂಬವರ ಒಂಟಿ ಮನೆ ಸಂಪೂರ್ಣ ನೆಲಸಮಗೊಂಡಿದೆ. ಅಪಾಯದ ಮುನ್ಸೂಚನೆ ಸಿಕ್ಕಿದ್ದರಿಂದ ಆ ಮನೆಯಲ್ಲಿದ್ದ ಕುಟುಂಬದ ಐವರು ಸದಸ್ಯರು ಎರಡು ವಾರಗಳ ಹಿಂದಷ್ಟೆ ಸ್ಥಳಾಂತರಗೊಂಡಿದ್ದರಿಂದ ಅನಾಹುತ ತಪ್ಪಿದೆ. ಕೆರೆಬೈಲ್ ನ ಗುಡ್ಡದ ತುದಿಯಲ್ಲಿ ಡೆಲ್ಟಾ ಇನ್ಫ್ರಾಲಾಜಿಸ್ಟಿಕ್ಸ್ ವರ್ಲ್ಡ್ ವೈಡ್ ಲಿಮಿಟೆಡ್ ಕಂಪನಿ ಮಾಲಕರಾದ ಅಹಮ್ಮದ್ ಮೊಯ್ದಿನ್ ಎಂಬವರು ಕೆಲವು ವರುಷಗಳ ಹಿಂದೆ ಬೃಹತ್ ಐಷಾರಾಮಿ ಎಸ್ಟೇಟ್…
-

ಉಡುಪಿ: ಖಾಸಗಿ ಬಸ್ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು..!! ವಿಡಿಯೋ ವೈರಲ್
ಉಡುಪಿ: ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ನೇತಾಡಿಕೊಂಡು ವಿದ್ಯಾರ್ಥಿಗಳು ಅಪಾಯಕಾರಿ ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಉಡುಪಿ ಜಿಲ್ಲೆಯ ಹರಿಕಂಡಿಗೆ-ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಏಣಿಯಲ್ಲಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ಸಿನಲ್ಲಿ ವಿಪರೀತ ಜನಸಂದಣಿ ಇದ್ದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಬಸ್ಸಿನ ಹಿಂಬದಿಯ ಏಣಿಯನ್ನು ಹಿಡಿದು ನೇತಾಡುತ್ತಾ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.ಈ…
-

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











