Category: ಕ್ರೈಂ ಸುದ್ದಿ
Your blog category
-

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಆರೋಪ; ತಾಯಿಯ ಆತ್ಮಹತ್ಯೆಯಿಂದ ಪ್ರಕರಣಕ್ಕೆ ವಿಷಾದಕರ ತಿರುವು
ಬೆಳಗಾವಿ : ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನನ್ನೇ ಕೊಲೆ ಮಾಡಿದ್ದ ಪತ್ನಿಯ ಕೃತ್ಯಕ್ಕೆ ಮನನೊಂದು, ಆಕೆಯ ತಾಯಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ನಡೆದಿದೆ.ಮಾಜಿ ಯೋಧ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಗಳು ಪೊಲೀಸರಿಂದ ಬಂಧನಕ್ಕೊಳಗಾಗುತ್ತಿದ್ದಂತೆ ತೀವ್ರ ಆಘಾತಕ್ಕೊಳಗಾಗಿದ್ದ ಮಹಾದೇವಿ ಅವರು, ಮರ್ಯಾದೆಗೆ…
-

ಎರಡು ವರ್ಷದ ಮಗು ಅನಾಥ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಶಂಕೆ
ಕಡಬ: ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಮಧ್ಯಾಹ್ನ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಕಾರು ಕಜೆಯಲ್ಲಿ ನಡೆದಿದೆ.ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು.ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಈ…
-

ಸಾರ್ವಜನಿಕರ ಕೈಗೆ ಸಿಗುವ ಭಯದಲ್ಲಿ ಓಡಿದ ಕಳ್ಳ; ಫುಟ್‌ಪಾತ್ ಮೇಲೆಯೇ ಪ್ರಾಣ ಬಿಟ್ಟ
ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನೋರ್ವ, ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಓಡುವಾಗ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಮೃತಪಟ್ಟಿರುವ ಅಪರೂಪದ ಘಟನೆ ನಗರದ ಕಬ್ಬನ್‌ಪೇಟೆ ಸಮೀಪ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೃತ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಅರ್ಬಾಜ್ ಎಂಬಾತನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ಮೇ 15ರಂದು ಸಂಜೆ ಕಬ್ಬನ್‌ಪೇಟೆಯ 14ನೇ ಕ್ರಾಸ್‌ನಲ್ಲಿ ಪಾದಚಾರಿಯೊಬ್ಬರು ರಸ್ತೆಯಲ್ಲಿ ಮೊಬೈಲ್ ನೋಡುತ್ತಾ ನಡೆದುಕೊಂಡು ಹೋಗುತ್ತಿದ್ದರು. ಈ…
-

ಬಜಪೆ ಠಾಣೆಯಲ್ಲಿ PCC ಅಕ್ರಮ ಪತ್ತೆ; ಕಾನ್‌ಸ್ಟೇಬಲ್‌ಗಳು ಸಸ್ಪೆಂಡ್, ಏಜೆಂಟ್ ಅರೆಸ್ಟ್
ಮಂಗಳೂರು: ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಸಾರ್ವಜನಿಕರು ಸಲ್ಲಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ಅರ್ಜಿಗಳನ್ನು ಠಾಣಾ ಇನ್‌ಸ್ಪೆಕ್ಟರ್ ಗಮನಕ್ಕೆ ತಾರದೆ, ಅವರ ಕೆಜಿಐಡಿ ಮತ್ತು ಪಾಸ್‌ವರ್ಡ್ ಬಳಸಿ ಅಕ್ರಮವಾಗಿ ವಿಲೇವಾರಿ ಮಾಡಿದ ಬಜಪೆ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಬಜಪೆ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಮತ್ತು ಆಶಾ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ದಂಧೆಗೆ ಸಹಕರಿಸಿದ ಎಕ್ಕಾರಿನ ಭರತ್ ಎಂಬ ಏಜೆಂಟ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಒಟ್ಟು 33 ಮಂದಿ ಪೊಲೀಸ್…
-

ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ: 13 ವರ್ಷಗಳ ಬಳಿಕ ಆರೋಪಿಯ ಬಂಧನ
ಉಡುಪಿ: ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೀಡಗಾನಹಳ್ಳಿ ಗ್ರಾಮದ ನಿವಾಸಿ ಮಧು ಅಲಿಯಾಸ್ ಉಮೇಶ್ ಎಂದು ಗುರುತಿಸಲಾಗಿದೆ.ಅಂಬಲಪಾಡಿಯ ಕಪ್ಪೆಟ್ಟು ಸಮೀಪದ ದೇವಸ್ಥಾನವೊಂದರ ಹುಂಡಿಯಿಂದ ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ, ವಾರಂಟ್ ವಿಭಾಗದ ಸಿಬ್ಬಂದಿಗಳಾದ…
-

ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು
ಮಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನೌಕರರು ಕಚೇರಿಗೆ ಗೈರಾಗಿದ್ದರೂ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಪದ್ಧತಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು. ಕಛೇರಿಗೆ ಪ್ರವೇಶಿಸುವಾಗ ಮತ್ತು ಹೊರಗಡೆ ತೆರಲುವಾಗ ಮತ್ತೆ ಕಛೇರಿಗೆ ಭೇಟಿ ನೀಡಿದಾಗ ತಮ್ಮಲ್ಲಿ ಎಷ್ಟು ಮೊತ್ತವಿದೆ ಎಂದು ತಿಳಿಯಲು…
-

ಅಪ್ರಾಪ್ತ ಬಾಲಕನ ಕಾರು ಚಾಲನೆಗೆ ಅಪಘಾತ: ಸ್ಕೂಟರ್ ಜಖಂ, ಮಾಲಕನ ವಿರುದ್ಧವೂ ಕೇಸ್
ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು…
-

ಕೋರ್ಟ್ ವಿಚಾರಣೆಗೆ ಹಾಜರಾಗದ ಆರೋಪಿ ಅರೆಸ್ಟ್: ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ
ಪುತ್ತೂರು: ಕಳ್ಳತನ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಯಾನೆ ಕೆ.ಎಂ ಸಲಾಂ ಯಾನೆ ಡಾಲರ್ ಸಲಾಂ ಬಂಧಿತ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 24/2020 Se. 457.380 IPC ಮತ್ತು ಅ.ಕ್ರ ನಂ: 34/2022 ಕಲಂ. 457.380. IPC ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಪುತ್ತೂರು ರೈಲ್ವೆ…
-

ಆಸ್ಪತ್ರೆಯಲ್ಲಿ ಸರಣಿ ಸಾವು; ಮೃತರ ಸಂಬಂಧಿಕರಿಂದ ವೈದ್ಯರ ವಿರುದ್ಧ ಆಕ್ರೋಶ
ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11 ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಳೆದ 24 ಗಂಟೆಗಳಲ್ಲಿ 11 ಮಂದಿ ಸಾವನ್ನಪ್ಪಿರುವುದು ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ರೋಗಿಗಳ ಸರಣಿ…
-

ಕಾರಿನೊಳಗೆ ಅಡಗಿಸಿದ್ದ ನಿಷೇಧಿತ ಸರಕು; ಪೊಲೀಸ್ ದಾಳಿಯಲ್ಲಿ ಬಯಲಾದ ಜಾಲ
ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











