Category: ಕ್ರೈಂ ಸುದ್ದಿ
Your blog category
-

ತಲೆಮರೆಸಿಕೊಂಡಿದ್ದ ಕೆಸಿಒಸಿಎ ಆರೋಪಿಗಳಿಗೆ ಬಲೆ; ಸಾರ್ವಜನಿಕರ ಸುಳಿವಿನಿಂದ ಇಬ್ಬರು ಅರೆಸ್ಟ್
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ನೀಡಿದ ಸುಳಿವಿನ ಆಧಾರ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳಾದ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೆರೆ ಮತ್ತು ಚೇತನ್ ಅಲಿಯಾಸ್ ಚೇತು ಪಡೀಲ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದು, ಹಲವು ತಿಂಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದರು.ಆರೋಪಿಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಈ ಹಿಂದೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು ಮತ್ತು ವಿಶ್ವಾಸಾರ್ಹ ಸುಳಿವುಗಳನ್ನು…
-

ಬಿಲ್ಲವ ಸಮುದಾಯವನ್ನು ಅವಮಾನಿಸುತ್ತಿರುವ ಅನಿತಾ ಕಾಸರಗೋಡು ಅರೆಸ್ಟ್!!
ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಮಾಡುತ್ತಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಬೆಂಗಳೂರಿನಲ್ಲಿ ಪೋಲಿಸರು ಬಂಧಿಸಿದ್ದಾರೆ. ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾನತೆಯ ತತ್ವಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ ಬಿಲ್ಲವ ಸಮುದಾಯಕ್ಕೆ ಅತೀವ ನೋವುಂಟು ಮಾಡಿದ್ದು, ಆದರೂ ಇದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು…
-

ನದಿ ತೀರದಲ್ಲಿ ಮಣ್ಣು ಹಾಕಿ ಒತ್ತುವರಿ ಕಾಮಗಾರಿ : ನದಿಗಳನ್ನೇ ಕಳೆದುಕೊಳ್ಳುತ್ತಾದಾ ಮಂಗಳೂರು?
ಮಂಗಳೂರು: ಸುಲ್ತಾನ್ ಬತ್ತೇರಿ ಪ್ರದೇಶದಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ನದಿಯ ತೀರ ಭಾಗದಲ್ಲಿ ಮಣ್ಣು ತುಂಬಿಸಿ ಹೊಸ ಕಾಮಗಾರಿ ಆರಂಭಿಸಿರುವ ಕುರಿತು ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ. ನದಿಯ ಸ್ವಾಭಾವಿಕ ಹರಿವು ಮತ್ತು ಅಸ್ತಿತ್ವವನ್ನು ಕಾಪಾಡಬೇಕಾದ ಪ್ರದೇಶದಲ್ಲೇ ಭೂಭರ್ತಿ ಕಾಮಗಾರಿ ನಡೆಯುತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಕಳವಳ ಮೂಡಿಸಿದೆ.ಸ್ಥಳೀಯರ ಪ್ರಕಾರ, ನದಿ ತೀರದ ಪ್ರದೇಶಕ್ಕೆ ಮಣ್ಣು ಹಾಕಿ ಕಾಮಗಾರಿ ನಡೆಸುತ್ತಿರುವುದು ನದಿಯ ಮೂಲ ಸ್ವರೂಪದ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ. ಒಮ್ಮೆ ರಾಜಕಾಲುವೆಗಳು ಮತ್ತು ನೈಸರ್ಗಿಕ ಜಲಮಾರ್ಗಗಳು ಒತ್ತುವರಿ…
-

ತಲೆಮರೆಸಿಕೊಂಡಿದ್ದ ಪೋಕ್ಸೋ ಆರೋಪಿ ಪತ್ತೆ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್
ಪುತ್ತೂರು: 2018 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ದಾಖಲಾಗಿ ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ 32 ವರ್ಷದ ವ್ಯಕ್ತಿಯನ್ನು ಪುತ್ತೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುತ್ತೂರಿನ ನರಿಮೊಗೇರು ನಿವಾಸಿ ನಮನ್ ನಾಯಕ್ (32) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಬೆಂಗಳೂರಿನ ಕೂಡ್ಲು ಗೇಟ್‌ನಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.ನಮನ್ ನಾಯಕ್ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 53/2018 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ)…
-

ಜೀವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಜೈಲು ಪಾಲು
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.ಪತ್ರಿಕಾ ಪ್ರಕಟಣೆಯ ಪ್ರಕಾರ, ಜೂನ್ 7 ರಂದು ಸಲ್ಲಿಸಿದ ದೂರಿನಲ್ಲಿ ಸಂತ್ರಸ್ತೆ ನೀಡಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಸಂಬಂಧಿ ಸುರೇಶ್ ಎಂಬ ಆರೋಪಿ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಧರ್ಮಸ್ಥಳ…
-

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು…
-

ಯು.ಟಿ. ಖಾದರ್ ಎಚ್ಚರಿಕೆ ಬಳಿಕ ಮಂಗಳೂರಿನ ಅನೇಕ ಇಂಜಿನಿಯರ್‌ಗಳಿಗೆ ಇನ್ನು ಜೈಲು ಗತಿಯಾ?
ಮಂಗಳೂರು: ರಸ್ತೆ ಗುಂಡಿಗಳಿಗೆ ಬಿದ್ದು ಸಾರ್ವಜನಿಕರು ಪ್ರಾಣ ಕಳೆದುಕೊಂಡರೆ ಸಂಬಂಧಪಟ್ಟ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂಬ ಸಚಿವ ಯು.ಟಿ. ಖಾದರ್ ಅವರ ಕಠಿಣ ಎಚ್ಚರಿಕೆ ರಾಜ್ಯಾದ್ಯಂತ ಗಮನ ಸೆಳೆದಿದೆ. ಈ ಹೇಳಿಕೆಯ ಬಳಿಕ ಮಂಗಳೂರಿನಲ್ಲಿ ನಡೆದಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ನೋಡಿದರೆ ಅಧಿಕ ಇಂಜಿನಿಯರ್ಸ್ ಗಳಿಗೆ ಜೈಲೇ ಗತಿ ಎಂದು ಕಾಣಿಸುತ್ತಿದೆ.ನಗರದ ಹಲವು ರಸ್ತೆಗಳಲ್ಲಿ ಇಂದಿಗೂ ದೊಡ್ಡ ದೊಡ್ಡ ಗುಂಡಿಗಳು, ಹಾಳಾದ ಡಾಂಬರು ಮತ್ತು ಮಳೆ ನೀರು ನಿಲ್ಲುವ ಸಮಸ್ಯೆಗಳು ಮುಂದುವರಿದಿವೆ. ಕೋಟ್ಯಂತರ ರೂಪಾಯಿ…
-

ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ
ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೈಜಲ್ ಮಂಗಳೂರು ನಗರದ ಶಾಂತಿನಗರ ನಿವಾಸಿ ರಮ್ಮಿ ಯಾನೆ ರಮಿಜ್ ಬಂಧಿತ ಆರೋಪಿ.ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಉಳ್ಳಾಲ ಸೇರಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈ ಕೆಳಕಂಡ 5 ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ: 136/2017 u/s 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.…
-

ಭರತ್ ಕುಮ್ಡೇಲ್ ಶರಣಾಗತಿ: ಮಂಗಳೂರಿನ ಕುಖ್ಯಾತ ರೌಡಿಶೀಟರ್ ಕುರಿತಾದ ಪ್ರಮುಖ ಸತ್ಯಗಳು
“ಕಾನೂನಿನ ಕೈಗಳು ದೀರ್ಘವಾಗಿರುತ್ತವೆ ಮತ್ತು ಅದರ ಸಂಕೋಲೆಯಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ” ಎಂಬ ಕಟುಸತ್ಯಕ್ಕೆ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಭರತ್ ಕುಮ್ಡೇಲ್ ಪ್ರಕರಣವು ಜ್ವಲಂತ ಸಾಕ್ಷಿಯಾಗಿದೆ. ಸುಮಾರು ನಾಲ್ಕುವರೆ ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈ ಆರೋಪಿ, ಪೊಲೀಸರ ತೀವ್ರ ಕಾರ್ಯಾಚರಣೆ ಮತ್ತು ನ್ಯಾಯಾಲಯದ ಬಿಗಿಹಿಡಿತಕ್ಕೆ ಮಣಿದು ಕೊನೆಗೂ ಶರಣಾಗಿದ್ದಾನೆ. ಬಜರಂಗದಳದ ಮುಖಂಡ ಎಂಬ ಹಣೆಪಟ್ಟಿಯನ್ನೇ ರಕ್ಷಣಾ ಕವಚವನ್ನಾಗಿ ಬಳಸಿಕೊಂಡು, ಕ್ರಿಮಿನಲ್ ಜಾಲದ ಕರಾಳ ಇತಿಹಾಸ ಸೃಷ್ಟಿಸಿದ್ದ ಈತನ ಶರಣಾಗತಿ ಕರಾವಳಿ ಭಾಗದ ಸಂಘಟಿತ ಅಪರಾಧ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ.ಮೇ…
-

ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಗೆ ವಂಚನೆ: ಕೋಟಿ ಕೋಟಿ ಲೂಟಿ ಮಾಡಿದ ಅಪ್ಪ-ಮಗಳ ಬಂಧನ
ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರನ್ನು ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಅಪ್ಪ ಮತ್ತು ಮಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಂಶಾದ್ ಬೇಗಂ ಹಾಗೂ ಆಕೆಯ ತಂದೆ ಮನ್ಸೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಅಪ್ಪ-ಮಗಳ ಜೋಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 5 ಕೋಟಿ 30 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂಬ ಆಘಾತಕಾರಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











