Category: ಕ್ರೈಂ ಸುದ್ದಿ

Your blog category

  • ಮಚ್ಚಿನಿಂದ ಕೊಚ್ಚಿ ಮಾಜಿ ಪಂಚಾಯತ್ ಸದಸ್ಯನ ಕೊಲೆ
    ,

    ಮಚ್ಚಿನಿಂದ ಕೊಚ್ಚಿ ಮಾಜಿ ಪಂಚಾಯತ್ ಸದಸ್ಯನ ಕೊಲೆ

    ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ಸಂಭವಿಸಿದೆ. ಹಳೆ ದ್ವೇಷ ಅಥವಾ ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ತಂದೆ ಮತ್ತು ಮಗ ಸೇರಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್ ನಿವಾಸಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆತಾಉಲ್ಲಾ (43) ಕೊಲೆಯಾದ ದುರ್ದೈವಿ. ಬುಧವಾರ ತಡರಾತ್ರಿ ಆತಾಉಲ್ಲಾ ಅವರು ಸ್ಥಳೀಯ ಬೇಕರಿಯೊಂದರ ಬಳಿ ನಿಂತಿದ್ದಾಗ, ಹಿಂಬದಿಯಿಂದ ಬಂದ ಆರೋಪಿಗಳು ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ. ಮೈಮೇಲೆ…

    Continue Reading

  • ಭೂ ಮಾಫಿಯಾಗೆ ಅಧಿಕಾರಿಗಳ ಸಾಥ್? ಪಾಲಿಕೆ ವಿರುದ್ಧ ಗಂಭೀರ ಆರೋಪ

    ಭೂ ಮಾಫಿಯಾಗೆ ಅಧಿಕಾರಿಗಳ ಸಾಥ್? ಪಾಲಿಕೆ ವಿರುದ್ಧ ಗಂಭೀರ ಆರೋಪ

    ಹುಬ್ಬಳ್ಳಿ: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್​​ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು ಸಾಥ್ ನೀಡಿರುವ ಆರೋಪಗಳು ಕೇಳಿಬರುತ್ತಿವೆ. ಘಟನೆ ಹಿನ್ನೆಲೆ  ಹುಬ್ಬಳ್ಳಿಯ ಆನಂದ ನಗರದಲ್ಲಿ ಕಲಾವಿದರು ಸೇರಿದಂತೆ ಅನೇಕ ಹಿಂದುಳಿದ…

    Continue Reading

  • ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ
    ,

    ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

    ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ…

    Continue Reading

  • ಬುರ್ಖಾ ಧರಿಸಿ ಚಿನ್ನದ ಅಂಗಡಿಗೆ ಎಂಟ್ರಿ: ಖಾರಪುಡಿ ಎರಚಿ ದರೋಡೆ ಯತ್ನ
    ,

    ಬುರ್ಖಾ ಧರಿಸಿ ಚಿನ್ನದ ಅಂಗಡಿಗೆ ಎಂಟ್ರಿ: ಖಾರಪುಡಿ ಎರಚಿ ದರೋಡೆ ಯತ್ನ

    ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ

    Continue Reading

  • ಭುಜ ತಾಗಿದ ಕಾರಣಕ್ಕೆ ಮಾರಣಾಂತಿಕ ಹಲ್ಲೆ: ವೈರಲ್ ವಿಡಿಯೋ ಬಳಿಕ ಪ್ರಕರಣ ದಾಖಲು

    ಭುಜ ತಾಗಿದ ಕಾರಣಕ್ಕೆ ಮಾರಣಾಂತಿಕ ಹಲ್ಲೆ: ವೈರಲ್ ವಿಡಿಯೋ ಬಳಿಕ ಪ್ರಕರಣ ದಾಖಲು

    ಹಾಸನ: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ ವರುಣ್,…

    Continue Reading

  • ಎಸ್‌ಐಟಿ ತನಿಖೆ ವೇಳೆ ಕೆಲಸ ಮಾಡಿದ ಕಾರ್ಮಿಕರಿಗೆ ಹಣ ಬಾಕಿ: ಗ್ರಾಮಸ್ಥರ ಅಸಮಾಧಾನ
    ,

    ಎಸ್‌ಐಟಿ ತನಿಖೆ ವೇಳೆ ಕೆಲಸ ಮಾಡಿದ ಕಾರ್ಮಿಕರಿಗೆ ಹಣ ಬಾಕಿ: ಗ್ರಾಮಸ್ಥರ ಅಸಮಾಧಾನ

    ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣ ಬಾರೀ ಸದ್ದು ಮಾಡಿತ್ತು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿ, ಪ್ರಕರಣದ ತನಿಕೆಯನ್ನು ಎಸ್ಐಟಿ ತಂಡಕ್ಕೆ ವರ್ಗಾವಣೆ ಮಾಡಿತ್ತು. ನಂತರ ಎಸ್ಐಟಿ ತನಿಖೆ ಶುರುವಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಆತ ಹೇಳಿದ ಸ್ಥಳಕ್ಕೆ ಕರೆದುಕೊಂಡು ಬಂದು, ಸ್ಥಳ ಗುರುತು ಮಾಡಿ ಒಟ್ಟು ಹದಿನೇಳು ಕಡೆಗಳಲ್ಲಿ ಉತ್ಖನನ ಕೂಡ ನಡೆಯಿತು. ಆದ್ರೆ ಮಳೆ, ಗಾಳಿ, ಬಿಸಿಲಿಗೆ ಮೈಯೊಡ್ಡಿ ದುಡಿದವರ ದುಡ್ಡು ಪಾವತಿ ಮಾತ್ರ ಇನ್ನೂ ಬಾಕಿ ಇದೆ. 2025ರ ಜುಲೈ…

    Continue Reading

  • ನಕಲಿ ಪಾಸ್‌ಪೋರ್ಟ್ ಮೂಲಕ ಇಸ್ರೇಲ್‌ಗೆ ಹಾರಿದ ಮಹಿಳೆ: ಮಂಗಳೂರಿನಲ್ಲಿ ಅಕ್ರಮ ಜಾಲ ಬಯಲು
    , ,

    ನಕಲಿ ಪಾಸ್‌ಪೋರ್ಟ್ ಮೂಲಕ ಇಸ್ರೇಲ್‌ಗೆ ಹಾರಿದ ಮಹಿಳೆ: ಮಂಗಳೂರಿನಲ್ಲಿ ಅಕ್ರಮ ಜಾಲ ಬಯಲು

    ಮಂಗಳೂರು: ಬೇರೊಬ್ಬರ ಅಧಿಕೃತ ದಾಖಲೆಗಳನ್ನು ಬಳಸಿ ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ, ಅಕ್ರಮವಾಗಿ ವಿದೇಶಕ್ಕೆ ತೆರಳಿದ ಪ್ರಕರಣವೊಂದನ್ನು ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರೀತಾ ಡಿ ಸೋಜಾ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ನಡೆದಿದ್ದೇನು?: ಉಳ್ಳಾಲ ಬೈಲ್ ನಿವಾಸಿ ಯಶೋಧ ಕೇಶವ ಎಂಬುವವರ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್ (ನಂ. ಸಿ4042172) ಹೊಂದಿ ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಪಾಸ್‌ಪೋರ್ಟ್ ಅರ್ಜಿಯನ್ನು (BNX067061521924) ಕೂಲಂಕಷವಾಗಿ ಪರಿಶೀಲಿಸಿದಾಗ,…

    Continue Reading

  • ಕಂಕನಾಡಿಯಲ್ಲಿ ವಾಹನ ಕಳ್ಳರ ಹಾವಳಿ: ಸ್ಕೂಟರ್ ಕಳವು ಆರೋಪ
    ,

    ಕಂಕನಾಡಿಯಲ್ಲಿ ವಾಹನ ಕಳ್ಳರ ಹಾವಳಿ: ಸ್ಕೂಟರ್ ಕಳವು ಆರೋಪ

    ಮಂಗಳೂರು: ಕಂಕನಾಡಿ ಸುವರ್ಣ ಲೈನ್‌ 6ನೇ ಅಡ್ಡ ರಸ್ತೆಯ ಪಾರ್ಕಿಂಗ್‌ ಜಾಗದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್‌ ಕಳವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್‌ ಕುಮಾರ್‌ ಸ್ಕೂಟರ್‌ ಪಾರ್ಕ್ ಮಾಡಿದ್ದರು. ಮರಳಿ ಬಂದು ನೋಡಿದಾಗ ಸ್ಕೂಟರ್‌ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಕಳವಾದ ಸ್ಕೂಟರನ್ನು ಸುತ್ತಮುತ್ತ ಎಲ್ಲ ಕಡೆ ಹುಡುಕಾಡಿದರೂ ಸ್ಕೂಟರ್‌ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Continue Reading

  • 6 ವರ್ಷಗಳ ಬಳಿಕ ವಾರಂಟ್ ಆರೋಪಿ ಬಂಧನ; ನ್ಯಾಯಾಲಯಕ್ಕೆ ಹಾಜರು
    ,

    6 ವರ್ಷಗಳ ಬಳಿಕ ವಾರಂಟ್ ಆರೋಪಿ ಬಂಧನ; ನ್ಯಾಯಾಲಯಕ್ಕೆ ಹಾಜರು

    ಮಂಗಳೂರು: 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ  ಪೊಲೀಸರು ಯಶಸ್ಸಿಯಾಗಿದ್ದಾರೆ. ನ್ಯಾಯಾಲಯವು ಆರೋಪಿತನ ಮೇಲೆ ದಸ್ತಗಿರಿ ವಾರಂಟ್ ನ್ನು ಹೊರಡಿಸಿತ್ತು. ಬಳಿಕ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ, ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್  ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

  • 2.5 ಕೋಟಿ ಮೌಲ್ಯದ ಚಿನ್ನಾಭರಣ ಎಂದ ಪ್ರಚಾರಕ್ಕೆ ಟ್ವಿಸ್ಟ್; ಚಿನ್ನ ಲೇಪಿತ ತಾಮ್ರ ಪತ್ತೆ

    2.5 ಕೋಟಿ ಮೌಲ್ಯದ ಚಿನ್ನಾಭರಣ ಎಂದ ಪ್ರಚಾರಕ್ಕೆ ಟ್ವಿಸ್ಟ್; ಚಿನ್ನ ಲೇಪಿತ ತಾಮ್ರ ಪತ್ತೆ

    ಕೊಪ್ಪಳ:  ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿಗೆ ಹೈದರಾಬಾದ್ ಮೂಲದ ಉದ್ಯಮಿಯೊಬ್ಬರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳ ವಿಚಾರ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ  ಬಂಗಾರದ ಆಭರಣಗಳು ಎಂದು ಬಿಂಬಿತವಾಗಿದ್ದ ಈ ದೇಣಿಗೆಯು, ವಾಸ್ತವದಲ್ಲಿ ‘ಚಿನ್ನ ಲೇಪಿತ’ ತಾಮ್ರದ ಆಭರಣಗಳೆಂದು ಜಿಲ್ಲಾಡಳಿತದ ಪರಿಶೀಲನೆಯಲ್ಲಿ ಬಯಲಾಗಿದೆ. ಹೈದರಾಬಾದ್ ಮೂಲದ ಎಎಂಆರ್ ಗ್ರೂಪ್ ಉದ್ಯಮಿ ಮಹೇಶ ರೆಡ್ಡಿ ಅವರು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರೊಂದಿಗೆ ಇತ್ತೀಚೆಗಷ್ಟೇ ಅಂಜನಾದ್ರಿಗೆ ಆಗಮಿಸಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed