Category: ಕ್ರೈಂ ಸುದ್ದಿ
Your blog category
-

ಬೆಳ್ತಂಗಡಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಕ್ಯಾಂಟಿನ್ ಒಳಗಿನ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸಿಕಂದರ್ ಪಾಷಾ, ಪೊಲೀಸ್ ಉಪನಿರೀಕ್ಷಕರು (ತನಿಖೆ), ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿತ್ತು.…
-

ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ
ನವದೆಹಲಿ: ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕರಾಳ ಮುಖವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB 2024) ತನ್ನ ಇತ್ತೀಚಿನ ವರದಿಯಲ್ಲಿ ಬಯಲು ಮಾಡಿದೆ. ದೇಶದಲ್ಲಿ ಒಟ್ಟಾರೆ ಅಪರಾಧ ದರವು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದರೂ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಮುಂದುವರಿದಿವೆ. ವರದಿಯ ಪ್ರಕಾರ, ಭಾರತದಲ್ಲಿ ಸರಾಸರಿ ಪ್ರತಿ 18 ನಿಮಿಷಕ್ಕೊಮ್ಮೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಅಂದರೆ ಪ್ರತಿದಿನ ನೂರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.ಅಪರಾಧ ದರ vs ದಾಖಲಾತಿ:…
-

ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ
ಬೆಳಗಾವಿ: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ವಿಚಿತ್ರ ಕಳ್ಳತನ ನಡೆದಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ, ಹಸೀನಾ…
-

ಅಪಘಾತದ ನಾಟಕವಾಡಿ ಮಹಿಳೆಯ ಕೊಲೆ: ಸುಲಿಗೆಗಾಗಿ ಸಿನಿಮೀಯ ಶೈಲಿಯಲ್ಲಿ ಸಂಚು ಬಯಲು
ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿನಿಮೀಯ ರೀತಿಯ…
-

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ
ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಯಲಹಂಕ ನಿವಾಸಿಯಾದ 41 ವರ್ಷದ ವ್ಯಕ್ತಿಯೊಬ್ಬರು ನೀಡಿದ ದೂರಿನ ಪ್ರಕಾರ, ಮೇ 1ರಂದು ಶಸ್ತ್ರಚಿಕಿತ್ಸೆಗಾಗಿ ಪತ್ನಿಯನ್ನು ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಮೇ…
-

ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ
ನೆಲಮಂಗಲ: ಆರೋಪಿ ಓರ್ವ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಬಾಲಕಿ ಪೋಷಕರು ನಾಪತ್ತೆ…
-

ಪ್ರೀತಿಸಿ ಮದುವೆಯಾದ ಬಳಿಕ ಗರ್ಭಿಣಿ ಪತ್ನಿಗೆ ದ್ರೋಹ: ನ್ಯಾಯಕ್ಕಾಗಿ ಯುವತಿಯ ಹೋರಾಟ
ತುಮಕೂರು: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋದಾಗ ಶುರುವಾದ ಸ್ನೇಹ ಬಳಿಕ…
-

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ
ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣವು ಫೆಬ್ರವರಿ 8, 2014 ರಂದು ನಡೆದಿದ್ದು, ಕುಳಾಯಿ ಹೊಸಬೆಟ್ಟು ನಿವಾಸಿ ಸುಮತಿ ಪ್ರಭು ಅವರನ್ನು ಬರ್ಬರವಾಗಿ ಕೊಲೆ ಮಾಡಲಾಯಿತು. ಪೊಲೀಸ್ ದಾಖಲೆಗಳ ಪ್ರಕಾರ, ದುಷ್ಕರ್ಮಿಗಳು ಆಕೆಯ ಕತ್ತು ಸೀಳಿ 192 ಗ್ರಾಂ (24 ಪೌಂಡ್) ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ, ಇದರ ಮೌಲ್ಯ ಸುಮಾರು 3,80,000 ರೂ.ಗಳಷ್ಟಿತ್ತು. ನಂತರ ಸುರತ್ಕಲ್ ಪೊಲೀಸ್…
-

ಬೈಕ್ ಅಪಘಾತದ ಬಳಿಕ ದಾಳಿ: ಯುವಕರ ಮೇಲೆ ಗುಂಪು ಹಲ್ಲೆ, ಚಿನ್ನದ ಸರ ಲೂಟಿ
ಉಡುಪಿ : ಬೈಕ್ ಅಪಘಾತಕ್ಕೀಡಾದ ಯುವಕರು ಹಾಗೂ ಅವರ ಸಹಾಯಕ್ಕೆ ಬಂದ ಗೆಳೆಯರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಚಿನ್ನದ ಸರ ಲೂಟಿ ಮಾಡಿರುವ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಬಡಗುಬೆಟ್ಟು ನಿವಾಸಿ ವೈಭವ್ ಬಿ ನಾಯಕ್ ಅವರ ಗೆಳೆಯರಾದ ಅಭಯ್ ಸ್ಯಾಮುವೆಲ್ ಮತ್ತು ಶಾಶ್ವತ್ ಶೆಟ್ಟಿ ಮೇ 3ರಂದು ಮಧ್ಯರಾತ್ರಿ ಬೈಕ್‌ನಲ್ಲಿ ಹೊರಟಿದ್ದರು. ಕುಕ್ಕಿಕಟ್ಟೆ ಬಳಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಆಯತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದರು. ಈ…
-

ಗ್ರೀನ್ ಪಾರ್ಕ್ ನಿವಾಸದಲ್ಲಿ ನ್ಯಾಯಾಧೀಶರ ಸಾವು: ಕಿರುಕುಳ ಆರೋಪ, ತನಿಖೆ ಆರಂಭ
ನವದೆಹಲಿ: ದೆಹಲಿಯ ಸಫ್ದರ್ಜಂಗ್ ಪ್ರದೇಶದ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ನ್ಯಾಯಾಧೀಶರೊಬ್ಬರು ಶನಿವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಕಾರ್ಕಾರ್ಡೂಮಾ ನ್ಯಾಯಾಲಯಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಪೂರ್ಣ ಸಮಯದ ಕಾರ್ಯದರ್ಶಿಯಾಗಿದ್ದ ಅಮನ್ ಕುಮಾರ್ ಶರ್ಮಾ (30) ಎಂದು ಗುರುತಿಸಲಾಗಿದೆ. ಅಮನ್ ಅವರು ಸ್ನಾನಗೃಹದಲ್ಲಿ ದುಪಟ್ಟಾದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ನ್ಯಾಯಾಧೀಶೆಯಾಗಿರುವ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು ಮತ್ತು ಘಟನೆಗೆ ಮುನ್ನ ತಂದೆಗೆ ಕರೆ ಮಾಡಿ ತಮಗೆ ಕಳೆದ ಎರಡು ತಿಂಗಳಿನಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಅಳುತ್ತಾ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











