Category: ಕ್ರೈಂ ಸುದ್ದಿ
Your blog category
-

ಕೌಟುಂಬಿಕ ಕಲಹ ದುರಂತ: ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಪತಿ
ಬೆಂಗಳೂರು: ಕೌಟುಂಬಿಕ ವಿಚಾರವಾಗಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸುಮಿತ್ರಾ ಹಾಗೂ ಡೇವಿಡ್ ಎಂದು ಗುರುತಿಸಲಾಗಿದೆ. ಮೃತ ಸುಮಿತ್ರಾ ಮತ್ತು ಡೇವಿಡ್ ಕಳೆದ ಒಂದು ದಶಕದಿಂದ ಗಂಗೇನಹಳ್ಳಿಯ ಮನೆಯೊಂದರಲ್ಲಿ ವಾಸವಿದ್ದರು. ಇತ್ತೀಚಿನ ದಿನಗಳಲ್ಲಿ ಇವರ ನಡುವೆ ಪದೇ ಪದೇ ಕೌಟುಂಬಿಕ ಕಲಹಗಳು ಏರ್ಪಡುತ್ತಿದ್ದವು ಎನ್ನಲಾಗಿದೆ. ಬುಧವಾರ ಸಂಜೆ ದಂಪತಿಗಳ ನಡುವೆ ಜಗಳ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆಕ್ರೋಶಗೊಂಡ ಡೇವಿಡ್,…
-

ಉಜಿರೆಯಲ್ಲಿ ಆಘಾತಕಾರಿ ಘಟನೆ: ತಂದೆಯ ಮೇಲೆ ಮಗನಿಂದ ಮಚ್ಚು ದಾಳಿ, ಕೊಲೆಗೆ ಯತ್ನ
ಬೆಳ್ತಂಗಡಿ: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮರದ ಮಿಲ್ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ ಸೇವಿಸಿದ್ದರು. ಈ ವೇಳೆ ಇಬ್ಬರ ನಡುವೆ…
-

ತಣ್ಣೀರುಬಾವಿ ಬೀಚ್ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ.ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಇನ್ನು ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು…
-

ಮಂಗಳೂರಿನಲ್ಲಿ ಮೂಡ ಬೃಹತ್ ಹಗರಣ! ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಅರ್ಜಿ
ಮಂಗಳೂರಿನಲ್ಲಿ ಮತ್ತೊಂದು ಬೃಹತ್ ಹಗರಣದ ಸುಳಿವು ಸಿಕ್ಕಿದೆ. ಮೂಡ (MUDA) ಸಂಬಂಧಿತ ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಸಂಬಂಧವಾಗಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದೆ.ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮುಖದಮೆ ದಾಖಲಿಸುವಂತೆ ಒತ್ತಾಯ ಮಾಡಲಾಗಿದೆ. ಇದರಲ್ಲಿ ಅತ್ಯಂತ ಗಂಭೀರ ಆರೋಪವೇನಂದರೆ ಓಲ್ಡ್ ಏಜ್ ಹೋಂ ನಿರ್ಮಾಣಕ್ಕಾಗಿ ಮಾತ್ರ ಭೂ ಪರಿವರ್ತನೆ ಅನುಮತಿ ನೀಡಲಾಗಿತ್ತು.ಆದರೆ, ನಿಯಮಾವಳಿಗಳ ಪ್ರಕಾರ ಈ ಜಾಗವನ್ನು (old age home) ಕಟ್ಟಡ ನಿರ್ಮಾಣಕ್ಕೆ ಮಾತ್ರ…
-

ಮಂಗಳೂರು:ಪೊಲೀಸ್ ಗೆ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿ ಆರೋಪ- ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ನಂತೂರು ಜಂಕ್ಷನ್ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು,ಹಲ್ಲೆ ನಡೆಸಿ, ಮೊಬೈಲ್ ಕಿತ್ತೆಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಲಿಗೆರೆ ಹಾಲೇಶಕದ್ರಿ ಠಾಣೆಗೆ ದೂರನ್ನು ನೀಡಿದ್ದಾರೆ.ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ಹಾಗೂ ಜಿ.ಚಂಪಾ ಜೊತೆ ತಾನು ನಂತೂರು ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನದ ವೇಳೆ ಬಿಕರ್ನಕಟ್ಟೆ ಕಡೆಗೆಹೋಗುವ ಫ್ರೀ ಲೆಫ್ಟ್ ರಸ್ತೆಯಲ್ಲಿ ಒಬ್ಬಾತ ಬೈಕ್ ಅಡ್ಡ ನಿಲ್ಲಿಸಿ ವಾಹನಗಳಿಗೆ ಅಡ್ಡಿಯನ್ನುಂಟು ಮಾಡುತ್ತಿದ್ದ.…
-

ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ‘ಕೋಕಾ’ ಕಾಯ್ದೆ ಅನ್ವಯ- ಹತ್ತು ಮಂದಿ ಹಂತಕರ ಬಂಧನ, ಮೈಸೂರು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ
ಮಂಗಳೂರು: ನಗರದ ಹೊರವಲಯದ ತೊಕ್ಕೋಟಿನಲ್ಲಿ ನಡೆದ ಅರಿಫ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಇದೀಗ ಆರೋಪಿಗಳ ವಿರುದ್ಧ ಅತ್ಯಂತ ಕಠಿಣವಾದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ – KCOCA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕೊಲೆ ಕೃತ್ಯವು ವ್ಯವಸ್ಥಿತ ಸಂಘಟಿತ ಅಪರಾಧ ಜಾಲದಿಂದ ನಡೆದಿದೆ ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಇದುವರೆಗೆ ಒಟ್ಟು 15 ಮಂದಿ ಆರೋಪಿಗಳ ಭಾಗಿಯಾಗಿರುವುದನ್ನು ತನಿಖಾ ತಂಡ ಪತ್ತೆಹಚ್ಚಿದೆ. ಈ ಪೈಕಿ 10…
-

ಭೀಕರ ಹತ್ಯೆ : ಹೊಸ ಕಾರು ಖರೀದಿಸಿದ್ದ ಯುವಕನನ್ನ ಅದೇ ಕಾರಲ್ಲಿ ಸುಟ್ಟು ಕೊಂದ ಪಾಪಿಗಳು!
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಹೊಸ ಕಾರು ಖರೀದಿಸಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾರಿನ ಸಮೇತ ಯುವಕನನ್ನು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಗೀಡಾದ ವ್ಯಕ್ತಿಯ ಸಂಬಂಧಿ ಸದಾಶಿವ ಪಡಸಲಗಿ, ರವಿ ಪಾಟೀಲ್…
-

ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನಿಂದ ಹಲ್ಲೆ..!!
ಮಂಗಳೂರು : ನಗರದ ನಂತೂರು ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಸಿಪಿಸಿ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್ನಲ್ಲಿ ಮಹಿಳೆಯೊಂದಿಗೆ…
-

ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ ಟೆರೆಸ್ನಿಂದ ಪಕ್ಕದ ಶೆಡ್ ಮೇಲ್ಚಾವಣಿಗೆ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಮಲ್ಪೆ ಠಾಣೆಯ ಪಿಎಸ್ಐ ಗಂಗಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಥಳೀಯರ ಮಾಹಿತಿಯ ಮೇರೆಗೆ ಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಹುಂಡೈ ಐ20…
-

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!
ಮಾನಸಿಕ ಕಿರುಕುಳ, ತಾರತಮ್ಯ ಆರೋಪ- ಪೊಲೀಸ್ ಇಲಾಖೆಯಲ್ಲಿ ಸಂಚಲನ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ DGP ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, “30 ನಿಮಿಷ ಸಮಯ ನೀಡಿದರೆ IPS ಅಧಿಕಾರಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲು ಮಾಡುತ್ತೇನೆ” ಎಂದು SP ಕಾಶಿನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. DGP…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











