Category: ಕ್ರೈಂ ಸುದ್ದಿ
Your blog category
-

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು…
-

ಮಂಗಳೂರು: ಕುಖ್ಯಾತ ಅಂತರರಾಜ್ಯ 17ಕ್ಕೂ ಹೆಚ್ಚು ಪ್ರಕರಣಗಳ ವಂಚಕ, ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ದಾರ ಸ್ಯಾಮ್ ಪೀಟರ್ ಬಂಧನ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64 ವರ್ಷ) ಎಂದು ಗುರತಿಸಲಾಗಿದೆ. ಪ್ರಕರಣದ ಹಿನ್ನೆಲೆ: ಆರೋಪಿ ಶ್ಯಾಮ್ ಪೀಟರ್ ಅಲಿಯಾಸ್ ಟಿ. ಸ್ಯಾಮ್…
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು
ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು…
-

ಭ್ರಷ್ಟಾಚಾರ ಪ್ರಕರಣ: ಬೆಳ್ತಂಗಡಿಯ SIT ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ನಂತರ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ವರ್ಗಾವಣೆ ಮತ್ತು ಮಾಸಿಕ ವಸೂಲಿಗಳಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಚರ್ಚೆಗಳು ನಡೆದಿವೆ ಎನ್ನಲಾದ…
-

ಸ್ಲೀಪರ್ ಬಸ್ ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನಿಂದಲೇ ಈ ಒಂದು ಹೀನ ಕೃತ್ಯ ನಡೆದಿದ್ದು, ಆಗಸ್ಟ್ 4 ರಂದು ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಪರಿಚೋಕ್ ನಲ್ಲಿ ಬಾಲಕಿಗೆ ಸ್ಲೀಪರ್ ಬಸ್…
-

ಮಂಗಳೂರು: ಮೊಬೈಲ್ ವಿಚಾರಕ್ಕೆ ಚಾಕುವಿನಿಂದ ಇರಿದು ಅಣ್ಣನ ಕೊಲೆ ಮಾಡಿದ ತಮ್ಮ..!!
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36) ಕೊಲೆ ಆರೋಪಿ ತಮ್ಮ. ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮ ಇಬ್ಬರು ತಾಯಿಯೊಂದಿಗೆ ಕೊಟ್ಟಾರ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರೂ ಕೂಲಿ…
-

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ತೌಸೀಫ್ (40), ಸೈಯದ್ ಮುಕ್ಬಾಲ್ ಅವರ ಪುತ್ರ, ಪೈವಳಿಕೆ ಟೆಂಪಲ್ ಹತ್ತಿರ, ಉಪ್ಪಳ ಅಂಚೆ, ಮಂಜೇಶ್ವರ, ಕಾಸರಗೋಡು, ಕೇರಳ ರಾಜ್ಯ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 135/2013, ಕಲಂ 392 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿಯು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ…
-

ಪಿಡಿಒ ಮನೆ ದರೋಡೆ : ಬೀಗ ಮುರಿದು ಚಿನ್ನ, ಬೆಳ್ಳಿ ಸೇರಿ ಒಟ್ಟು 1.4 ಕೋಟಿ ದೋಚಿ ಖದೀಮರು ಪರಾರಿ!
ಮನೆಯ ಬೀಗ ಮುರಿದು 1.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪಿಡಿಒ ದಂಪತಿಯ ಮನೆಗೆ ನುಗ್ಗಿ ನಗ, ನಾಣ್ಯವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 4-A ಕ್ರಾಸ್ ನಲ್ಲಿ ಈ ಒಂದು ಕಳ್ಳತನ ನಡೆದಿದೆ. ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ನಗದು ಹಣ ಕದ್ದು ಕಳ್ಳರು ಪರಾರಿ ಆಗಿದ್ದಾರೆ ಮನೆಯಲ್ಲಿದ್ದ 943 ಗ್ರಾಂ ಚಿನ್ನಾಭರಣ, 500 ಗ್ರಾಮ ಬೆಳ್ಳಿ 1.5 ಲಕ್ಷ ಮೌಲ್ಯದ 15 ವಾಚ್ 86,000 ನಗದು ಹಣ…
-

ಕೆಪಿಎಸ್ಸಿ ನೇಮಕಾತಿ ಹಗರಣ: ‘IAS’ ಅಧಿಕಾರಿ ಗ್ಯಾನೇಂದ್ರ ಕುಮಾರ ಅರೆಸ್ಟ್ ಬೆನ್ನಲ್ಲೇ ಮತ್ತೊಬ್ಬ ಪ್ರಮುಖ ಮಧ್ಯವರ್ತಿ ವಶಕ್ಕೆ
ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬಂಧನದ ಬೆನ್ನಲ್ಲೇ ಇದೀಗ ಪ್ರಕರಣದಲ್ಲಿದ್ದ ಮತ್ತೊಬ್ಬ ಪ್ರಮುಖ ಮಧ್ಯವರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಐಎಎಸ್ ಅಧಿಕಾರಿಗೆ ಅಕ್ರಮ ಎಸಗಲು ನೇರವಾಗಿ ನೆರವು ನೀಡಿದ್ದ ಆರೋಪದ ಮೇಲೆ ಈ ಮಧ್ಯವರ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಸ್ತುತ ಆತನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇದಕ್ಕೂ ಮುನ್ನ, ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಸುದೀರ್ಘ ವಿಚಾರಣೆಗೆ…
-

ಹನೂರು ಎನ್ಕೌಂಟರ್ ಪ್ರಕರಣ : ತನಿಖೆಗೆ CID ಎಂಟ್ರಿ, ತನಿಖೆ ಮತ್ತಷ್ಟು ಚುರುಕು
ಕಾವೇರಿ ವನ್ಯಧಾಮದಲ್ಲಿ ನಡೆದ ಬಹುಚರ್ಚಿತ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ, ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸಿಐಡಿ (CID) ತಂಡ ಅಖಾಡಕ್ಕಿಳಿದಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ಅಧಿಕಾರಿಗಳ ತಂಡ ಈಗಾಗಲೇ ಚಾಮರಾಜನಗರ ಜಿಲ್ಲೆಯ ಸಂಬಂಧಿತ ಸ್ಥಳಗಳಿಗೆ ಭೇಟಿ ನೀಡಿ ಬೀಡುಬಿಟ್ಟಿದೆ. ತನಿಖೆ ಚುರುಕುಗೊಳಿಸಲು ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ರಚಿಸಲಾಗಿರುವ ಈ ನಾಲ್ಕು ತಂಡಗಳಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











