Category: ಕ್ರೈಂ ಸುದ್ದಿ
Your blog category
-

ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ
ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್ ಪರಿಶೀಲನೆ…
-

5 ವರ್ಷದ ಬಾಲಕಿ ಮೇಲೆ ಅತ್ಯಾ*ಚಾ*ರ- ಮೃತದೇಹ ಗೋಣಿಚೀಲದಲ್ಲಿ ಪತ್ತೆ
ದುರ್ಗ್: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಚೀಲದಲ್ಲಿ ತುಂಬಿಸಿ ಬಾವಿ ಬಳಿ ಎಸೆದು ಹೋಗಿರುವ ಘಟನೆ ಛತ್ತೀಸಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಾಲಕಿಯು ಶಾಲೆಯಿಂದ ಮನೆಗೆ ಮರಳುವಾಗ ಚಾಕೊಲೇಟ್ ಖರೀದಿಸಲು ಅಂಗಡಿಯೊಂದಕ್ಕೆ ಹೋಗಿದ್ದರು. ಅಂಗಡಿಯಲ್ಲಿದ್ದ ಆರೋಪಿ ಧನೇಶ್ವರ್ ಸಾಹು(35) ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ‘ಬಾಲಕಿ ತನ್ನ ಮನೆಗೆ ಬರದಿರುವ ಕಾರಣ ಆತಂಕಗೊಂಡ…
-

ಕಾರ್ಕಳ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಪತ್ನಿ ಸೌಮ್ಯ ಶೆಟ್ಟಿ ಬಂಧನ!!
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ…
-

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!! 15 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಮಸಣಕ್ಕೆ!
ಧಾರವಾಡ: ಶಾಂತಿಯುತ ನಗರವಾಗಿರುವ ವಿದ್ಯಾಕಾಶಿ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ನಡೆದಿದ್ದೇನು? ಮನೆಗೇ ನುಗ್ಗಿದ ಹಂತಕರು! ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ಇಂದು ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ…
-

ಕಡಬ : ರಸ್ತೆ ಕಾಮಗಾರಿ ವಿಚಾರ-ಮಹಿಳೆಗೆ ಜಾತಿನಿಂದನೆ, ಹಲ್ಲೆ ಆರೋಪ; ಪ್ರಕರಣ ದಾಖಲು
ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.…
-

ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಇಬ್ಬರ ಬಂಧನ, ಚಿನ್ನ ವಶಕ್ಕೆ
ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ದೂರುದಾರೆಯ ತಂದೆಗೆ ಆರೋಪಿತೆ ಶೃತಿ @ ವಿಶ್ಮೀತ(37) ಎಂಬಾಕೆಯೊಂದಿಗೆ ಸಂಪರ್ಕವಿದ್ದು, ಆಕೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಆರೋಪಿತೆ ಅದನ್ನು ಮರಳಿಸುವುದಾಗಿ ಹೇಳಿ ಏಪ್ರಿಲ್ 7ರಂದು ಪುಣ್ಯಶ್ರೀಯ ಮನೆಗೆ ಬಂದಿದ್ದಳು ಎನ್ನಲಾಗಿದೆ. ಆ ದಿನ ಪುಣ್ಯಶ್ರೀ…
-

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ..!!
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ(15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 2000 ಅಡಿ ಆಳದ ಪ್ರಪಾತದಲ್ಲಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ(ಏ.7) 41 ಮಂದಿ ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀನಂದಾ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ…
-

ಮಂಗಳೂರು: ದಕ್ಕೆ ತೀರದ ನದಿಯಲ್ಲಿ ಶವ ಪತ್ತೆ!!
ಮಂಗಳೂರು: ಮೀನುಗಾರಿಕೆ ಬಂದರು (ದಕ್ಕೆ) ತೀರದ ನದಿಯಲ್ಲಿ ನಾಸಿರ್ ಯಾನೆ ದಕ್ಕೆ ನಾಸಿರ್ ಎಂಬಾತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-

ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ
ಶಿವಮೊಗ್ಗ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು, ರೈತನಿಂದ ಲಂಚ ಸ್ವೀಕರಿಸಿದ್ದ ಅಧಿಕಾರಿಯೊಬ್ಬರಿಗೆ ನ್ಯಾಯಾಲಯವು ಈಗ ತಕ್ಕ ಶಿಕ್ಷೆ ವಿಧಿಸಿದೆ. ಸುಮಾರು ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಈ ಭ್ರಷ್ಟಾಚಾರ ಪ್ರಕರಣದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಂದಿನ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಅವರಿಗೆ ಜೈಲು ಹಾಗೂ ದಂಡದ ಶಿಕ್ಷೆಯಾಗಿದೆ. ಪ್ರಕರಣದ ಹಿನ್ನೆಲೆ: ಏನಿದು ಘಟನೆ? 2017ರ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಸಾಗರ ತಾಲ್ಲೂಕಿನ ಹೊಸಗುಂದ ನಿವಾಸಿ ಹೆಚ್.ಎಸ್. ಜನಾರ್ಧನ ಎಂಬುವವರು…
-

ಭೀಕರ ಮರ್ಡರ್ : ಸರ್ಕಾರಿ ಶಾಲಾ ಶಿಕ್ಷಕಿಯ ಹತ್ಯೆಗೈದು, ಶವ ಸುಟ್ಟುಹಾಕಿದ ಹಂತಕರು
ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











