Category: ಕ್ರೈಂ ಸುದ್ದಿ
Your blog category
-

ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಬಂಧನ
ಉಡುಪಿ: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂಬುದಾಗಿ ಬ್ಲ್ಯಾಕ್ ಮೇಲ್ ಮಾಡಿ, ಈಗ ಆತ ಪೊಲೀಸರ ವಶದಲ್ಲಿದ್ದಾನೆ. ಉಡುಪಿಯ ಕಾಪುವಿನ ಅಭಿಷೇಕ್ ಸುರೇಂದ್ರ ಪೂಜಾರಿ ಬಂಧಿತ ಆರೋಪಿ. ಮಾರ್ಫ್ ಮಾಡಲಾದ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಸಂಸ್ಥೆ ಮಾಲಕರ ಪುತ್ರಿ ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ…
-

ಬೆಳ್ತಂಗಡಿ: ಬೇಟೆ ಬಾಂಬ್ ಸ್ಫೋಟ- ಬಾಲಕನಿಗೆ ಗಾಯ
ಬೆಳ್ತಂಗಡಿ: ಚೆಂಡಿನ ಆಕಾರದ(ಬೇಟೆ ಬಾಂಬ್) ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ.…
-

ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ತನಿಖಾಧಿಕಾರಿಗಳು ಈಗ ದರೋಡೆಯೇ ನಡೆದಿಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಖಾನಾಪುರದ ಚೋರ್ಲಾ ಘಾಟ್ ಬಳಿ ಈ ದರೋಡೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೂರಿನ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್‌ಐಟಿ ಹೇಳಿದೆ ಎಂದು ವರದಿಯಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ, ಸ್ಥಳದಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಹೇಳುವ ವರದಿಯನ್ನು ಎಸ್‌ಐಟಿ ಸಲ್ಲಿಸಿದೆ ಎಂದು…
-

BREAKING : ನಕಲಿ ದಾಖಲೆ ಪತ್ರ ಸೃಷ್ಟಿಸಿ ಅಕ್ರಮವಾಗಿ ಭೂಮಿ ಮಾರಾಟ : ಸಬ್ ರಿಜಿಸ್ಟರ್ ಸೇರಿ 9 ಜನ ಅರೆಸ್ಟ್!
ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ ಮಾರಾಟ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಅಕ್ರಮವಾಗಿ ಭೂಮಿ ಮಾರಿ ವಂಚನೆ ಎಸಗಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ಸಬ್ ರೆಜಿಸ್ಟರ್ ಸೇರಿದಂತೆ ಒಟ್ಟು ಒಂಬತ್ತು ಜನರನ್ನು ಅರೆಸ್ಟ್ ಮಾಡಿದ್ದಾರೆ. ಭೂಗಳ್ಳರ ಜೊತೆಗೆ ಸಬ್ ರಿಜಿಸ್ಟರ್ ಅಧಿಕಾರಿ ಸೇರಿದಂತೆ ಹಲವರು ಶಾಮೀಲು ಆಗಿದ್ದರು. ಬೆಳಗಾವಿ ಜಿಲ್ಲಾ ಪೊಲೀಸರಿಂದ ಸಬ್ ರಿಜಿಸ್ಟರ್ ಸೇರಿದಂತೆ ಮೊದಲು 6 ಜನರನ್ನು ಅರೆಸ್ಟ್ ಮಾಡಲಾಗಿದೆ. ಹುಕ್ಕೇರಿ ಪಟ್ಟಣದ…
-

ಮಣಿಪಾಲ : ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಸಿಂಡಿಕೇಟ್ ಸರ್ಕಲ್ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಮೊಹಮ್ಮದ್ ಅಜ್ಮಲ್ (26) ಎಂದು ಗುರುತಿಸಲಾಗಿದ್ದು, ಈತನಿಂದ 1 ಲಕ್ಷ ಮೌಲ್ಯದ 2084 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಗಾಂಜಾ ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದ್ದು, ಐದು ಮಂದಿ ವಿರುದ್ಧವೂ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ…
-

ಕಾರ್ಕಳ : ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ- ತಂದೆ-ಮಗ ಬಂಧನ
ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತರು. ಇವರು ಜ.21ರಂದು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
-

ಉಳ್ಳಾಲ: ಎರಡು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ
ಉಳ್ಳಾಲ: ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲ ನಿವಾಸಿ, ಆರೋಪಿ ಮೊಹಮ್ಮದ್ ಸಂಶೀರ್ ತೋಯಿಬ್ ಎಂಬಾತನನ್ನು ಈ ದಿನ ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಯಿತು. ಮಾನ್ಯ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿದ್ದು, 14 ವರ್ಷಗಳ ಬಳಿಕ ಆರೋಪಿಯನ್ನುಬಂಧನ ಮಾಡಲಾಗಿದೆ.
-

ಸುಳ್ಯ: ಯುವತಿಯ ಮೇಲೆ ಪತಿ ಸೇರಿ ಮೂವರಿಂದ ಹಲ್ಲೆ..!! ಪ್ರಕರಣ ದಾಖಲು
ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ ಮಾವರು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸಾಹಿತ್ಯಾ ರೈ ಅವರ ಪತಿ ಯಶಸ್ವಿ ರೈ (30) ಹಾಗೂ ಮಾವ ನಿತ್ಯಾನಂದ ರೈ (58) ಇಬ್ಬರೂ ಸೇರಿ ಮುಖಕ್ಕೆ ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸಾಹಿತ್ಯಾ ರೈ ಅವರು ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ತಮ್ಮ ಪೋಷಕರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.…
-

ಮಂಗಳೂರು: ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ ಕೊಲೆಯತ್ನ..!! ಆರೋಪಿಗೆ 4 ವರ್ಷ ಜೈಲು ಶಿಕ್ಷೆ
ಮಂಗಳೂರು: ನಗರದ, ಜೆಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ರವರು ಸಂಜಯ್ ಪೂಜಾರಿ ಎಂಬುವರನ್ನು Free Fire ಎಂಬ ಮೊಬೈಲ್ ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ, ಪ್ರತ್ಯುಶ್ ಸಾಲಿಯಾನ್ ಮೇಲೆ ಸಂಜಯ್ ಪೂಜಾರಿ ಗೆ ದ್ವೇಷವಿದ್ದು, ದಿನಾಂಕ 17-05-2023 ರಂದು ಪ್ರತ್ಯುಶ್ ಸಾಲಿಯಾನ್ ರವರು ಮಂಗಳೂರು ನಗರದ ಜೆಪ್ಪು ಬಪ್ಪಾಲ್ ನ ತನ್ನ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ ಹೋಗುತ್ತಿದ್ದಾಗ, ಸಂಜಯ್ ಪೂಜಾರಿ ಪ್ರತ್ಯುಶ್ ಸಾಲಿಯಾನ್ ರವರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ…
-

ಬೃಹತ್ ಡ್ರಗ್ಸ್ ಜಾಲ ಭೇದಿಸಿದ ಪುತ್ತೂರು ಪೊಲೀಸರು : 6.50 ಲ.ರೂ. ಮೌಲ್ಯದ ಮಾದಕ ವಸ್ತು ವಶ
ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಹಾಗೂ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಬಂಟ್ವಾಳದ ಮುಸ್ತಾಫ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 6.39 ಗ್ರಾಂ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಮಾಫಿಯಾದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಶಪಡಿಸಿಕೊಂಡ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











