Category: ಕ್ರೈಂ ಸುದ್ದಿ
Your blog category
-

ಹನೂರು ಎನ್ಕೌಂಟರ್ ಪ್ರಕರಣ : ತನಿಖೆಗೆ CID ಎಂಟ್ರಿ, ತನಿಖೆ ಮತ್ತಷ್ಟು ಚುರುಕು
ಕಾವೇರಿ ವನ್ಯಧಾಮದಲ್ಲಿ ನಡೆದ ಬಹುಚರ್ಚಿತ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ, ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸಿಐಡಿ (CID) ತಂಡ ಅಖಾಡಕ್ಕಿಳಿದಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ಅಧಿಕಾರಿಗಳ ತಂಡ ಈಗಾಗಲೇ ಚಾಮರಾಜನಗರ ಜಿಲ್ಲೆಯ ಸಂಬಂಧಿತ ಸ್ಥಳಗಳಿಗೆ ಭೇಟಿ ನೀಡಿ ಬೀಡುಬಿಟ್ಟಿದೆ. ತನಿಖೆ ಚುರುಕುಗೊಳಿಸಲು ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ರಚಿಸಲಾಗಿರುವ ಈ ನಾಲ್ಕು ತಂಡಗಳಿಗೆ…
-

ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆಗೈದು ಹೃದಯಾಘಾತ ಎಂದು ಕಥೆ ಕಟ್ಟಿದ ಗಂಡ ಅರೆಸ್ಟ್
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ದೊಡ್ಡಗುಂಡ ಗ್ರಾಮದ ನಿವಾಸಿ ಗಣಪತಿ ಮಂಜುನಾಥ ನಾಯ್ಕ ಬಂಧಿತ ಆರೋಪಿ. ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದವರು ಆರೋಪಿ ಗಣಪತಿ ಮದ್ಯ ಸೇವಿಸಿ ಮನೆಗೆ ಬಂದು ರಾತ್ರಿ ಪತ್ನಿ ಮಂಗಲಾ ಮಲಗಿದ್ದಾಗ ಆಕೆಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಪತ್ನಿ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ಆರೋಪಿ…
-

ಮರಳು ಸಾಗಣೆ ಲಾರಿ ಚಾಲಕನಿಂದ 30 ಸಾವಿರ ಲಂಚ ಸ್ವೀಕಾರ : ಮೂವರು ಹೆಡ್ ಕಾನ್ಸ್ಟೇಬಲ್, ಓರ್ವ ಹೋಂ ಗಾರ್ಡ್ ಲೋಕಾಯುಕ್ತ ಬಲೆಗೆ
ಮರಳು ಸಾಗಣೆ ಲಾರಿ ಚಾಲಕನಿಂದ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಮೂವರು ಹೆಡ್ ಕಾನ್ಸ್ಟೇಬಲ್ ಹಾಗೂ ಓರ್ವ ಹೋಂಗಾರ್ಡನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಕೊಪ್ಪಳದ ಲಾರಿ ಚಾಲಕನ ಹನುಮಂತನಿಂದ ಲಂಚ ಪಡೆದಿರುವ ಆರೋಪ ಕೇಳಿ ಬಂದಿದೆ. 30 ಸಾವಿರ ಲಂಚ ಪಡೆದಿರುವ ಆರೋಪ ಕೇಳಿ ಬಂದಿದ್ದು ಹನುಮಂತ ಲೋಕಾಯುಕ್ತ ಪೊಲೀಸ್ ರಿಗೆ ಈ ಕುರಿತು ದೂರು ನೀಡಿದ್ದ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಲಾರಿ ಬಿಡಲು ಲಂಚ…
-

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ-ಪರಾರಿಯಾಗಲು ಯತ್ನಿಸಿ ಆರೋಪಿ ಅರೆಸ್ಟ್..!!
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್ನಿಂದ ನವೆಂಬರ್ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಈ…
-

ಕಡಬದಲ್ಲಿ ಮನೆಯಿಂದ 84,800 ರೂ. ನಗದು ಕಳ್ಳತನ: ಪ್ರಕರಣ ದಾಖಲು
ಕಡಬ: ಮನೆಯಲ್ಲಿ ಮರದ ಬಾಕ್ಸ್ನಲ್ಲಿಟ್ಟಿದ್ದ ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಗ್ರಾಮದ ಅಡ್ಡಗದ್ದೆ ನಿವಾಸಿ ತಮನ್ನಾ ಜಬೀನ್(43) ಎಂಬವರು ತಮ್ಮ ಗಂಡ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದು, ಅವರು ತಮ್ಮ ರೂಮಿನಲ್ಲಿಟ್ಟಿದ್ದ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆ.18 ರಂದು ಕಾರ್ಯಕ್ರಮವೊಂದರ ನಿಮಿತ್ತ ತಮನ್ನಾ ಜಬೀನ್ಅವರು ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿ, ಅದೇ ದಿನ ಮನೆಗೆ ಹಿಂತಿರುಗಿದ್ದಾರೆ. ಬಳಿಕ ಆ. 24 ರಂದು ಬಾಕ್ಸ್ನಲ್ಲಿದ್ದ ಹಣ…
-

ಉಡುಪಿ : 8 ವರ್ಷಗಳ ಹಿಂದೆ ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ; ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್
ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೈಯದ್ ಸೈಫ್ ಅಹಮ್ಮದ್ (40) ಬಂಧಿತ ಆರೋಪಿಗಳು. ದೂರುದಾರರಿಗೆ ಜುಲೈ 2, 2026ರಂದು ವಾಟ್ಸಾಪ್ ಕರೆಯೊಂದು ಬಂದಿದ್ದು, ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ, “ನಿಮ್ಮ…
-

ಜೈಲಲ್ಲೇ ಸಿಗುತ್ತೆ ಸ್ಪೆಷಲ್ ಕ್ಯಾಟರಿಂಗ್: ಚಿಕನ್, ಮಟನ್ಗೆ ದುಪ್ಪಟ್ಟು ರೇಟ್! ಸೆಲ್ಗೆ ಬಾಡಿಗೆ, ಖೈದಿಗಳ ಪತ್ರ ವೈರಲ್
ಮಂಡ್ಯ ಜಿಲ್ಲಾ ಕಾರಾಗೃಹದ ಮತ್ತೊಂದು ಭೀಕರ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಸಕಲ ಸವಲತ್ತು, ಊಟ-ಉಪಚಾರ ಹಾಗೂ ಸೆಲ್ಗಳನ್ನು ಕಲ್ಪಿಸಲು ಪ್ರತ್ಯೇಕ ದರ ನಿಗದಿಪಡಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಚಾರಣಾಧೀನ ಖೈದಿಗಳು ಬರೆದಿದ್ದಾರೆ ಎನ್ನಲಾದ ‘ರೇಟ್ ಲಿಸ್ಟ್’ ಸಮೇತದ ದೂರು ಪತ್ರವೊಂದು ಇದೀಗ ಭಾರೀ ವೈರಲ್ ಆಗಿದೆ. ಜೈಲಾಧಿಕಾರಿ ಶಾಂತಮ್ಮ ಹಾಗೂ ಸಿಬ್ಬಂದಿಗಳಾದ ಅನಿಲ್, ಶಿವರಾಜ್ ಮತ್ತು ರವಿ ವಿರುದ್ಧ ಸುಮಾರು 80 ಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ತಮ್ಮ ಯುಟಿಪಿ (UTP) ನಂಬರ್,…
-

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ,…
-

ಹಳೆಯಂಗಡಿ : ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರಾಗಿ ಸದಸ್ಯನಿಗೆ ಸಿಕ್ಕಿದ್ದು ₹5 ಲಕ್ಷ ಮಾತ್ರ- ಉಳಿದ ಹಣ ಅಕ್ರಮ ಬಗ್ಗೆ ದೂರು
ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಿ, ಸದಸ್ಯನಿಗೆ ಕೇವಲ ₹5 ಲಕ್ಷ ನೀಡಿ ಉಳಿದ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ವಂಚಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಪರಿಶಿಷ್ಟ ಜಾತಿಗೆ ಸೇರಿದ ಸಂಘದ ಸದಸ್ಯ ನಾಗೇಶ್ ಅವರು ಮದುವೆಗಾಗಿ ₹5 ಲಕ್ಷ ಸಾಲ ಪಡೆಯುವ ಉದ್ದೇಶದಿಂದ ಜಾಗದ ಮೂಲ ದಾಖಲೆಗಳನ್ನು ಸಂಘಕ್ಕೆ ನೀಡಿದ್ದರು. ಆದರೆ, ಅವರಿಂದ ಖಾಲಿ ಹಾಳೆಗಳಿಗೂ ಸಹಿ ಪಡೆದು, ಒಟ್ಟು 66 ಸೆಂಟ್ಸ್ ಜಾಗವನ್ನು ಅಡಮಾನವಿಟ್ಟು ಅವರ…
-

ಮಂಗಳೂರು: ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ 4 ವರ್ಷ ಜೈಲು ಶಿಕ್ಷೆ..!
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











