Category: ಕ್ರೈಂ ಸುದ್ದಿ
Your blog category
-

KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ
ಕಡಬ: ಶೀಘ್ರವಾಗಿ ಹಣ ಗಳಿಸುವ ಅವಕಾಶ ಹಾಗೂ ಕಡಿಮೆ ದರದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರನ್ನು ಯೋಜನೆಗೆ ಸೇರಿಸಿದರೆ ಕಮಿಷನ್ ನೀಡುವುದಾಗಿ ಭರವಸೆ ನೀಡಿ ಅಕ್ರಮವಾಗಿ ಹಣಪರಿಚಲನೆ ಯೋಜನೆ ನಡೆಸುತ್ತಿದ್ದ ಆರೋಪದ ಮೇಲೆ ಕಡಬ ಪೊಲೀಸರು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಬ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಹಾವೇರಿ ಮೂಲದ KINGS Bazaar ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸ್ವೀಕರಿಸಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.…
-

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್
ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋರ್ ಪೂಜಾರಿ, ತನ್ನ ಸಹೋದರ ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶೂಟ್‌ಔಟ್ ಪ್ರಕರಣದ ಬೆಳವಣಿಗೆಯ ಮಾಹಿತಿಗಳನ್ನು ನೀಡಿದರು. ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ…
-

ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ- ಆರೋಪಿ ಪೊಲೀಸ್ ವಶಕ್ಕೆ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ…
-

ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ..!!
ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ…
-

ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ!!
ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು…
-

ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ..!! ಆರೋಪಿ ಬಂಧನ
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಶರತ್ ಟಾಟಾ ಸುಮೊ (KA-05-AD-6341) ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ…
-

ಡೇವಿಡ್ ಹತ್ಯೆ ಪ್ರಕರಣ: ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಪೊಲೀಸರ ಮೇಲೆ ಮದ್ಯಪಾನ ಆರೋಪ..!!
ಪುತ್ತೂರು: ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್‌ಸ್ಟೇಬಲ್‌ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯಪಾನ ಮಾಡಿಲ್ಲ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಪ್ರಕರಣದ ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಬಳಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ, ಅಲ್ಲಿ ಸೇರಿದ್ದ ಕೆಲವರು ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡಿರುವುದಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಆಲ್ಕೋಮೀಟರ್…
-

ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್‌ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ…
-

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ..!! ಸಾವಿನ ಬಗ್ಗೆ ಪೋಷಕರು ಅನುಮಾನ
ಬಿಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ. ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











