Category: ಕ್ರೈಂ ಸುದ್ದಿ
Your blog category
-

ಉಡುಪಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ- ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು
ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ…
-

ನಕಲಿ ಔಷಧ ಕಿಂಗ್‌ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಪೊಲೀಸರಿಗೆ ಅನುಮಾನ
ಬೆಂಗಳೂರು: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್‌ಪಿನ್ ಪ್ರಶಾಂತ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆತ ಇದುವರೆಗೂ 40,000ಕ್ಕೂ ಹೆಚ್ಚು ನಕಲಿ ಕ್ಯಾನ್ಸರ್ ಔಷಧ ಬಾಟಲಿಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ಈ ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ. ಪ್ರಶಾಂತ್‌ನ ಪತ್ನಿ ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸಲಾಗಿದ್ದು, ಆತ ವಿದೇಶದಲ್ಲಿದ್ದಾನೆ…
-

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್!!
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2026ರ ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.…
-

ಉಡುಪಿ: ಬಾಳೆ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ..!! 8.71 ಲಕ್ಷ ರೂ. ಮೌಲ್ಯದ ಬಾಳೆಹಣ್ಣು ನಾಶ
ಉಡುಪಿ: ಬಾಳೆಕಾಯಿಗಳನ್ನು ತ್ವರಿತವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ಅಲೆವೂರು ಗ್ರಾಮದ ಹಲವು ಪ್ರದೇಶಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಲಿ ಪರಿಸರದಲ್ಲಿರುವ ಬಾಳೆಹಣ್ಣು ವ್ಯಾಪಾರಿಗಳ ಮೂರು ಗೋದಾಮುಗಳನ್ನು ಅಧಿಕಾರಿಗಳ ತಂಡ ಪರಿಶೀಲಿಸಿದೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿ ವಿವೇಕ್ ತ್ರಿಮಲೆ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. ಸಾರ್ವಜನಿಕರಿಂದ ಬಂದ ಮಾಹಿತಿ…
-

ಬೆಳ್ತಂಗಡಿ: ಸುಮಂತ್ ನಿಗೂಢ ಸಾವಿನ ಪ್ರಕರಣ- ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್
ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ. ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದ್ದರೂ ಈ ಕೇಸ್ ನಿಗೂಢವಾಗಿಯೇ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ…
-

ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ
ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ…
-

ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕ ಅಕ್ರಮ ಮರಳು; ಚಾಲಕ ಸ್ಥಳದಿಂದ ಪರಾರಿ
ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಯಮಿತ ತಪಾಸಣೆಯ ಸಮಯದಲ್ಲಿ, ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದ KA 21 B 0593 ನೋಂದಣಿ ಸಂಖ್ಯೆಯನ್ನು ಹೊಂದಿರುವ ಪಿಕಪ್ ವಾಹನವನ್ನು ನಿಲ್ಲಿಸಲು ಪೊಲೀಸರು ಸಿಗ್ನಲ್ ಮಾಡಿದರು. ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನದಲ್ಲಿ 30 ಬುಟ್ಟಿ ಮರಳು ಪೊಲೀಸರಿಗೆ ಸಿಕ್ಕಿದೆ. ಚಾರ್ಮಾಡಿ ಗ್ರಾಮದ ನಿವಾಸಿ ಫಯಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
-

ಮಂಗಳೂರು: ಗಾಂಜಾ ಮಾರಾಟ,ಎರಡು ಪ್ರತ್ಯೇಕ ಪ್ರಕರಣ – ಆರೋಪಿಗಳ ಬಂಧನ
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ…
-

ಬಂಟ್ವಾಳ: ವೃದ್ದ ಮಹಿಳೆಯಿಂದ ಚಿನ್ನ ದೋಚಿದ ಆರೋಪಿ ಬಂಧನ
ಬಂಟ್ವಾಳ ಸಮೀಪ ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಕಟ್ಟಿ, ಕೈಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನದ ಬಳೆಗಳನ್ನು ಬಲಾತ್ಕಾರವಾಗಿ ಎಳೆದು ಸುಲಿಗೆ ಮಾಡಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಕೃತ್ಯವೆಸಗಿದ ವೃದ್ಧೆಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ.ಬಂಟ್ವಾಳ ತೆಂಕ ಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಅವ್ವಮ್ಮ (82) ಎಂಬವರು ಆ.14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ವ್ಯಕ್ತಿಯೋರ್ವ ಮುಖಕ್ಕೆ ಬಟ್ಟೆ ಸುತ್ತಿಕೊಂಡು…
-

ದೊಡ್ಡ ಸಂಸ್ಥೆಗಳಿಗೂ ವಿನಾಯಿತಿ ಇಲ್ಲ: ಆಹಾರ ತಪಾಸಣೆ ತೀವ್ರಗೊಳಿಸಿದ ಸರ್ಕಾರ
ಮಂಗಳೂರು: ಆಹಾರ ತಯಾರಿಕೆ ಮತ್ತು ಮಾರಾಟ ಮಾಡುವ ಸಂಸ್ಥೆಗಳು ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ಮೇಲೆ ನಡೆಯುತ್ತಿರುವ ದಿಢೀರ್ ತಪಾಸಣೆ ಹಾಗೂ ದಾಳಿಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.ಭಾನುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಆಹಾರ ತಯಾರಿಕಾ ಸಂಸ್ಥೆಗಳ ವಿರುದ್ಧ ಈಗಾಗಲೇ ದಾಳಿ ಮತ್ತು ತಪಾಸಣೆ ನಡೆಸಲಾಗುತ್ತಿದ್ದರೂ, ಮಂಗಳೂರಿನಲ್ಲಿ ಇದೇ ರೀತಿಯ ಅಸ್ವಚ್ಛ ಪರಿಸ್ಥಿತಿಗಳು ಕಂಡುಬರುತ್ತಿರುವುದು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











