Category: ಕರಾವಳಿ
-

ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ..!!
ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ…
-

ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.
-

ಕುಂದಾಪುರ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ
ಕುಂದಾಪುರ: ಇಂದು ಬೆಳ್ಳಂಬೆಳಿಗ್ಗೆಯೇ ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅನಿರೀಕ್ಷಿತವಾಗಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಆಗಮಿಸುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಕ್ಕಾಬಿಕ್ಕಿಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಅಧಿಕಾರಿಗಳ ತಂಡ ಪುರಸಭೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪ್ರಮುಖ ಕಡತಗಳು ಮತ್ತು ದಾಖಲೆಗಳ ಪರಿಶೀಲನೆ ನಡೆಸಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಲಾಗಿದೆ ಎಂದು ತಿಳಿದುಬಂದಿದೆ. ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಅಧಿಕಾರಿಗಳ ಈ ದಿಢೀರ್…
-

ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ!!
ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು…
-

ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ..!! ಆರೋಪಿ ಬಂಧನ
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಶರತ್ ಟಾಟಾ ಸುಮೊ (KA-05-AD-6341) ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ…
-

ಡೇವಿಡ್ ಹತ್ಯೆ ಪ್ರಕರಣ: ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು
ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಪೊಲೀಸರ ಮೇಲೆ ಮದ್ಯಪಾನ ಆರೋಪ..!!
ಪುತ್ತೂರು: ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್‌ಸ್ಟೇಬಲ್‌ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯಪಾನ ಮಾಡಿಲ್ಲ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಪ್ರಕರಣದ ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಬಳಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ, ಅಲ್ಲಿ ಸೇರಿದ್ದ ಕೆಲವರು ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡಿರುವುದಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಆಲ್ಕೋಮೀಟರ್…
-

ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್‌ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ…
-

ಬೆಳ್ತಂಗಡಿ: ಪಿಲ್ಯ ಕಪ್ಪು ಕಲ್ಲಿನ ಗಣಿಗಾರಿಕೆ- ಪೋಲಿಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಸ್ಥಳಕ್ಕೆ ಭೇಟಿ
ಬೆಳ್ತಂಗಡಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಭೂಮಾಲೀಕ ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ…
-

ಅಮೃತ್ ನಗರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪಾಲಿಕೆ ತಕ್ಷಣ ಕ್ರಮ ಕೈಗೊಳ್ಳಲಿ: ಶರೀಫ್ ಪಾಂಡೇಶ್ವರ್
ಮಂಗಳೂರು: ಪಾಂಡೇಶ್ವರದ ಅಮೃತ್ ನಗರ ವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಒದಗಿಸಲು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಶರೀಫ್ ಪಾಂಡೇಶ್ವರ್ ಆಗ್ರಹಿಸಿದ್ದಾರೆ. ಅಮೃತ್ ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಮತ್ತೊಂದೆಡೆ ಪಾಲಿಕೆಯ ನೀರು ವಾಣಿಜ್ಯ ಉದ್ದೇಶಗಳಿಗೆ ಹಾಗೂ ಅನಧಿಕೃತ ಪಿ.ಜಿ.ಗಳಿಗೆ ಬಳಕೆಯಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಕುರಿತು ಪಾಲಿಕೆ ಅಧಿಕಾರಿಗಳು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











