Category: ಕರಾವಳಿ
-

ಆಂಬುಲೆನ್ಸ್ ನಲ್ಲಿ 5.5 ಕೋಟಿ ಡ್ರಗ್ಸ್ ಸಾಗಾಟ ಪ್ರಕರಣ : ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಪರಾರಿ
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ ಡ್ರಗ್ಸ್ ಪೆಡ್ಡಿಂಗ್ ದಂಧೆ ನಡೆಸುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ವಿವರ :ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್…
-

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ನ್ಯಾಯಾಲಯವು ತನಿಖೆಗೆ ಸಹಕರಿಸುವುದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ತೊರೆಯಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯೂ ಮುಂದುವರಿಯಲಿದೆ
-

ಬರಿಮಾರ್ ದುರಂತಕ್ಕೆ ಮಹತ್ವದ ತಿರುವು; ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ : ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್ಎಸ್ (BNS) ಪ್ರಕಾರ ಪ್ರಕರಣ…
-

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ!!
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ. ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ ಕೊಲೆ ಯತ್ನಕ್ಕೆ ಒಳಗಾದ ಯವಕ. ಬೆನ್ನಿನ ಹಿಂಭಾಗಕ್ಕೆ ದಾಳಿ ನಡೆಸಿ ಬೈಕ್ ನಲ್ಲಿ ಬಂದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುವಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನನಿಬಿಡ ಜಾಗದಲ್ಲೇ ಒಬ್ಬಂಟಿಯಾಗಿ ಬಂದು ಅಪರಿಚಿತ ದಾಳಿ ನಡೆಸಿದ್ದಾನೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
-

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ- ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿ ಎಂದು ಸಾರ್ವಜನಿಕರ ಆಶಯ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ…
-

ಯು.ಟಿ. ಖಾದರ್ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ಶಿಪ್ ಅವಾರ್ಡ್–2026’ ಗೌರವ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ
ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ಶಿಪ್ ಅವಾರ್ಡ್–2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಅಮೆರಿಕದ American Multi Ethnic Commission ಈ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಸ್ವೀಕರಿಸಲು ಯು.ಟಿ. ಖಾದರ್ ಅವರು ಮಂಗಳೂರಿನಿಂದ ಅಮೆರಿಕಕ್ಕೆ ತೆರಳಿದ್ದು, ಜುಲೈ 25ರಂದು ಇಲಿನಾಯ್ಸ್ ರಾಜ್ಯದ ನೇಪರ್ವಿಲ್ನ ಯೆಲ್ಲೋ ಬಾಕ್ಸ್ ಆಡಿಟೋರಿಯಂನಲ್ಲಿ…
-

ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್.!! ವ್ಯಕ್ತಿ ಅರೆಸ್ಟ್
ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಪ್ರಕರಣದ ವಿವರ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ. ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.…
-

ಪುತ್ತೂರು ಬಳಿ ಟಾಟಾ ಏಸ್ ಪಲ್ಟಿ; 11 ವರ್ಷದ ಬಾಲಕನಿಗೆ ಗಾಯ
ಪುತ್ತೂರು: ಜುಲೈ 23 ರಂದು ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವಾಹನದ ಚಕ್ರಗಳು ರಸ್ತೆಯಂಚಿಗೆ ಇಳಿದು ಮಗುಚಿ ಬಿತ್ತು ಎಂದು ವರದಿಯಾಗಿದೆ.ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಮಜೀದ್ ಅವರ ಪುತ್ರ ಮೊಹಮ್ಮದ್ ಅಮೀನ್ (11) ಅಪಘಾತದಲ್ಲಿ ಗಾಯಗೊಂಡಿದ್ದಾರೆ.ಸ್ಥಳೀಯರ ಪ್ರಕಾರ, ಸ್ಥಳದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗಳು ಇತ್ತೀಚೆಗೆ ಪೂರ್ಣಗೊಂಡಿವೆ,…
-

ಬೆಳ್ತಂಗಡಿ: ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ನಗದು ದೋಚಿದ ಆರೋಪ!! ಇಬ್ಬರ ವಿರುದ್ಧ FIR
ಬೆಳ್ತಂಗಡಿ: ಶಿಬಾಜೆಯಲ್ಲಿರುವ ಮನೆಯೊಂದಕ್ಕೆ ಬಂದು, ಛಾವಣಿಯ ಹೆಂಚುಗಳಿಗೆ ಕಲ್ಲು ಎಸೆದು, ನಿವಾಸಿಗಳನ್ನು ನಿಂದಿಸಿ, ಜೀವ ಬೆದರಿಕೆ ಹಾಕಿ, ಹಣ ದೋಚಿದ್ದಾರೆ ಎಂಬ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಶಿಬಾಜೆ ನಿವಾಸಿ ಎಲಿಯಮ್ಮ ಥಾಮಸ್ (60) ದೂರು ನೀಡಿದ್ದವರು. ಆಕೆಯ ದೂರಿನ ಪ್ರಕಾರ, ಜುಲೈ 10 ರ ರಾತ್ರಿ ಈ ಘಟನೆ ನಡೆದಿದ್ದು, ಆಕೆ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ನಿವಾಸದಲ್ಲಿದ್ದಾಗ. ಮನೋಜ್ ಎನ್.ಕೆ ಮತ್ತು ರಾಜು ಎಂದು ಗುರುತಿಸಲಾದ ಆರೋಪಿಗಳು ಮನೆಯ…
-

ಮಂಗಳೂರು: ಪಾಂಡೇಶ್ವರ ಅಮೃತ ನಗರ ಪರಿಸರದಲ್ಲಿ ಅನಧಿಕೃತ ಪಿ.ಜಿ ಮತ್ತು ಸರ್ವಿಸ್ ಸ್ಟೇಷನ್..!! ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಮಂಗಳೂರು: ನಗರದ ಪಾಂಡೇಶ್ವರ ಅಮೃತ ನಗರ ಎಂಬಲ್ಲಿ ವಾಣಿಜ್ಯ ಕಟ್ಟಡವನ್ನು ಅನಧಿಕೃತ ಪಿ.ಜಿಯಾಗಿ ಬಳಕೆಯಾಗಿದ್ದು ಸುಮಾರು 40 ರಿಂದ 50 ಮಂದಿ ವಾಸ್ತವ್ಯ ಇದ್ದಾರೆ ಎಂದು ಮಾಹಿತಿ ಇದೆ.ಸಾರ್ವಜನಿಕರ ಆರೋಪ ಪ್ರಕಾರ ಈ ಕಟ್ಟಡವನ್ನು ಅಕ್ರಮವಾಗಿ ಮತ್ತು ಯಾವುದೇ ಪಿ.ಜಿ ಪರವಾನಿಗೆ ಇಲ್ಲದೇ ನಡೆಸಲಾಗುತ್ತಿದೆ. ಮತ್ತು ಇಲ್ಲಿ ನೀರಿನ ಅಭಾವ ಇರುವ ಕಾರಣ ಈ ಪಿ.ಜಿಗೆ ಅತೀ ಹೆಚ್ಚು ನೀರು ಬಳಕೆಯಾಗುತ್ತಿದೆ. ಮತ್ತು ಸ್ವಚ್ಚತಾ ದೃಷ್ಟಿಯಿಂದಲ್ಲೋ ಇಲ್ಲಿನ ಪರಿಸರ ಮಾಲಿನ್ಯವಾಗಿದ್ದು , ಕಾನೂನು ಪ್ರಕಾರ ಪಿ ಜಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











