Category: ಕರಾವಳಿ
-

ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ
ಬೆಳ್ತಂಗಡಿ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸಾರ್ (21) ಮತ್ತು ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ಬಳಿ ನಾಲ್ವರು ವ್ಯಕ್ತಿಗಳು ನಿಂತಿರುವುದನ್ನು ಪೊಲೀಸರು ಗಮನಿಸಿದರು. ಪೊಲೀಸರು ಅವರ ಬಳಿಗೆ ಬಂದಾಗ, ಗುಂಪು…
-

ಮಂಗಳೂರು ಜೈಲಿಗೆ ಪೊಲೀಸ್ ದಿಢೀರ್ ದಾಳಿ- ರಿಫಾತ್ ಗ್ಯಾಂಗ್ ಸದಸ್ಯರು ಸೇರಿ 9 ಆರೋಪಿಗಳ ಬಳಿ ಫೋನ್ ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹದ ಎ-ಬ್ಲಾಕ್‌ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಮೊಬೈಲ್ ಫೋನ್ ಬಳಸುತ್ತಿರುವುದು ಪತ್ತೆಯಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್ ಮತ್ತು ಅಬ್ದುಲ್ ಸಾದೀಕ್ ಅವರ ಬಳಿಯೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಇದೇ…
-

ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು
ಮಂಗಳೂರು: ಕೆಲಸಕ್ಕಾಗಿ ಐದು ತಿಂಗಳ ಹಿಂದಷ್ಟೇ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ಮೂಲದ ಯುವಕನೋರ್ವ ತಾನು ವಾಸವಿದ್ದ ಕೊಠಡಿಯಲ್ಲೇ ದಿಢೀರ್ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರದ ಸಮೀಪದ ನಿವಾಸಿ ಶರತ್ ಕುಮಾರ್ (35) ಮೃತಪಟ್ಟ ಯುವಕ. ಅವಿವಾಹಿತರಾಗಿದ್ದ ಶರತ್ ಅವರು ಐದು ತಿಂಗಳ ಹಿಂದೆ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದು, ಖಾಸಗಿ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಶರತ್ ಅವರು ತಮಿಳುನಾಡು…
-

ದ.ಕ. ಗ್ರಾಮ ಪಂಚಾಯತಿಗಳಿಗೆ ಲೋಕಾಯುಕ್ತ ದಾಳಿ ಸ್ವಾಗತಾರ್ಹ- ಮಂಗಳೂರಿನ RTO ಮಾತ್ರ ಯಾಕೆ ಲೋಕಾಯುಕ್ತರ ಕಣ್ಣಿಗೆ ಬೀಳುತ್ತಿಲ್ಲ??
ದಕ್ಷಿಣ ಕನ್ನಡದ 7 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಿಢೀರ್ ಪರಿಶೀಲನೆ ನಡೆಸಿರುವುದು ವರದಿಯಾಗಿದೆ. ಸಾರ್ವಜನಿಕರಿಂದ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರಿ ಯೋಜನೆಗಳು ಮತ್ತು ಲಂಚದ ಬೇಡಿಕೆ ಕುರಿತ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ನಡೆದಿದೆ. ಗ್ರಾ.ಮ.ಪಂಚಾಯತಿಗಳಿಗೆ ದಾಳಿ ನಡೆಸಿರುವುದು ಸ್ವಾಗತಾರ್ಹ ಮಂಗಳೂರಿನ RTO ಕಚೇರಿಗೇ ಯಾಕಿಲ್ಲ ದಾಳಿ?? ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಲೋಕಾಯುಕ್ತ ಅಧಿಕಾರಿಗಳು ಇಲ್ಲಿಗೆ ತಲೆಹಾಕದೇ ಇರುವುದೇ ಇಲ್ಲಿನ ಮುಖ್ಯ ಸಮಸ್ಯೆ. ಇಲ್ಲಿನ ಗುಮಾಸ್ತ ಸೋಮರಾಜ್ ಎಂಬವ ಕಾರ್ಕ್…
-

ದಕ್ಷಿಣ ಕನ್ನಡದ 7 ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ವಿವಿಧ ತಾಲೂಕುಗಳ ಒಟ್ಟು ೭ ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಏಕಕಾಲಕ್ಕೆ ಸಮಗ್ರ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ಕೈಗೊಂಡಿದ್ದಾರೆ. ಸಾರ್ವಜನಿಕರಿಂದ ಸರಣಿ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಕೆಲಸಗಳಲ್ಲಿ ಅಕ್ರಮ ಮತ್ತು ಲಂಚದ ಬೇಡಿಕೆ ಕುರಿತು ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ. ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತಿ,…
-

ನಾಪತ್ತೆಯಾಗಿದ್ದ ಮಂಗಳೂರಿನ ಇಬ್ಬರು ಅಪ್ರಾಪ್ತರು ಬೆಂಗಳೂರಿನಲ್ಲಿ ಪತ್ತೆ
ಮಂಗಳೂರು: ನಗರದ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಇರುವ ಬಗ್ಗೆ ಕುಟುಂಬದವರಿಗೆ ಮಾಹಿತಿ ಲಭ್ಯವಾಗಿದೆ.ಮೊಹಮ್ಮದ್ ಶಯಾನ್ (14) ಹಾಗೂ ಮೊಹಮ್ಮದ್ ಶಾಝಿಲ್ (13) ಎಂಬ ಇಬ್ಬರು ಬಾಲಕರು ಕಾಣೆಯಾಗಿರುವ ಕುರಿತು ಈ ಹಿಂದೆ ಮಾಹಿತಿ ನೀಡಲಾಗಿತ್ತು. ಬಾಲಕರ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಲಾಗಿತ್ತು.ಇದೀಗ ಇಬ್ಬರೂ ಬಾಲಕರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
-

ಮಂಗಳೂರು : ತಡರಾತ್ರಿ ಜೈಲಿಗೆ ಪೊಲೀಸ್ ದಾಳಿ- ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ
ಮಂಗಳೂರು ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಜೈಲಿನ ಎ ಮತ್ತು ಬಿ ಬ್ಯಾರಕ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಅಡಗಿಸಿಟ್ಟಿದ್ದ ಎಂಟಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಜೈಲಿನಲ್ಲಿ…
-

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ SIR ನೋಟಿಸ್: ಸಂಜೆ ವಾಪಸ್ ಪಡೆದ ಅಧಿಕಾರಿಗಳು
ಮಂಗಳೂರು: ಪದ್ಮಶ್ರೀ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ (SIR) ನೋಟಿಸ್ ಜಾರಿಗೊಳಿಸಿದ್ದು, ತಪ್ಪು ಅರಿವಾದ ಬಳಿಕ ಅಧಿಕಾರಿಗಳು ಅವರ ಬಳಿ ಕ್ಷಮೆಯಾಚಿಸಿರುವ ಪ್ರಸಂಗ ಮಂಗಳೂರು ತಾಲೂಕಿನಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಹಾಜಬ್ಬ ಅವರ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸ್ವತಃ ಪಡೆದುಕೊಂಡು ಹೋಗಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳದ ನಿವಾಸಿಯಾಗಿರುವ ಹಾಜಬ್ಬ ಅವರಿಗೆ ಎಸ್‌ಐಆರ್ ಪರಿಶೀಲನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ…
-

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR
ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲೊಡ್ಡಿ ನಿವಾಸಿ ಜಿಜೊ ಪೌಲ್ ಅವರ ಮಗ, ಪ್ರಸ್ತುತ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಜಿತಿನ್ ಜಿಜೋ (26) ಎಂಬಾತನೇ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ: ಬೆಂಗಳೂರು ನಿವಾಸಿಯಾಗಿರುವ 36…
-

ಉಳ್ಳಾಲ: ಕಟ್ಟಡಕ್ಕೆ ಹೆಚ್ಚುವರಿಯಾಗಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಳ್ಳಾಲ ನಗರಸಭೆ ನೋಟಿಸ್
ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ನಿರ್ಮಿಸುತ್ತಿರುವ ಕಟ್ಟಡಕ್ಕೆ ಹೆಚ್ಚುವರಿಯಾಗಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಳ್ಳಾಲ ನಗರಸಭೆಯು ನೋಟಿಸ್ ಹೊರಡಿಸಿದೆ. ಈ ಬಗ್ಗೆ ಕ್ರೈಂ ವಾರ್ತೆಯ ನಿರಂತರವಾಗಿ ವರದಿ ಪ್ರಕಟಿಸಿದ ಹಿನ್ನೆಲೆ ಎಚ್ಚೆತ್ತ ಉಳ್ಳಾಲ ನರಸಭೆಯು ಕಟ್ಟಡ ಮಾಲಿಕರಿಗೆ ನೋಟಿಸ್ ನೀಡಲಾಗಿದೆ. ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸುತ್ತಿರುವುದು ಸರಿಯಷ್ಟೇ, ಪ್ರಸ್ತುತ ನಿವೇಶನದ ಬಲಭಾಗದಲ್ಲಿ ಹಿಂದಿನ ನಿವೇಶನದಾರರಿಗೆ ಹೋಗುವ ರಸ್ತೆಯಿರುತ್ತದೆ. ಆದರೆ ತಾವು ಸದರಿ ಭಾಗದಲ್ಲಿ ತಾತ್ಕಾಲಿಕ ನಿರ್ಮಾಣ ಮಾಡಿದ್ದು ರಸ್ತೆಗೆ ಅಡಚಣೆಯಾಗಿರುತ್ತದೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











