Category: ಕರಾವಳಿ
-

ಫರಂಗಿಪೇಟೆ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ
ಬಂಟ್ವಾಳ: ಫರಂಗಿಪೇಟೆಯ ಬ್ಯಾಂಕ್ನಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಬಂಟ್ವಾಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್ಪಿ) ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 12ರ ರಾತ್ರಿ ಫರಂಗಿಪೇಟೆಯ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ದುಷ್ಕರ್ಮಿಗಳು ಕಟ್ಟಡದ ಮೇಲ್ಛಾವಣಿಯನ್ನು ಕೊರೆದು ಬ್ಯಾಂಕ್ ಒಳನುಗ್ಗಿದ್ದರು. ಆದರೆ ಬ್ಯಾಂಕ್ನ ಲಾಕರ್ ತೆರೆಯಲು ವಿಫಲರಾದ ಅವರು ಯಾವುದೇ ನಗದು ಅಥವಾ…
-

ಮಂಗಳೂರು: ವಿದ್ಯಾರ್ಥಿಯ ಬ್ಯಾಂಕ್ ಖಾತೆ, ಚೆಕ್ ಬುಕ್ ಹಾಗೂ ಸಿಮ್ ಕಾರ್ಡ್ ಪಡೆದು ಸೈಬರ್ ವಂಚನೆ!! ನಂಬಿಕೆ ದ್ರೋಹ ಮಾಡಿದ ಗೆಳೆಯ
ಮಂಗಳೂರು : ಗೆಳೆಯರ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿಯೊಬ್ಬರ ಬ್ಯಾಂಕ್ ಖಾತೆ, ಚೆಕ್ ಬುಕ್ ಹಾಗೂ ಸಿಮ್ ಕಾರ್ಡ್ ಪಡೆದು ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ವಂಚನೆ ಎಸಗಿರುವ ಆಘಾತಕಾರಿ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ 23 ವರ್ಷದ ಯುವಕ 2022ರಲ್ಲಿ ಬಲ್ಮಠದ ಖಾಸಗಿ ಕಾಲೇಜಿನಲ್ಲಿ ಐಟಿಐ ಕಲಿಯುತ್ತಿದ್ದಾಗ ಮಂಥನ್ ಎಂಬಾತನ ಪರಿಚಯವಾಗಿತ್ತು. 2023ರ ಅಕ್ಟೋಬರ್ನಲ್ಲಿ ಮಂಥನ್, ತನ್ನ ಪರಿಚಯದ ಮೊಹಮ್ಮದ್ ಹಮ್ರಾಜ್ ಹಾಗೂ ಮೊಹಮ್ಮದ್ ನಿಜಾಮುದ್ದೀನ್ ಎಂಬುವವರನ್ನು ಕಾಲೇಜು ಬಳಿ ಕರೆತಂದು ದೂರುದಾರರಿಗೆ ಪರಿಚಯಿಸಿದ್ದ. ಈ…
-

ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ
ಮಂಗಳೂರು: ಮನೆ ದುರಸ್ತಿ ಕಾಮಗಾರಿ ವೇಳೆ ಸುಮಾರು ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಜಹೀರುದ್ದೀನ್ (24), ನಿರಾಜುದ್ದೀನ್ ಅವರ ಪುತ್ರ, ಮೂಲತಃ ಉತ್ತರ ಪ್ರದೇಶದ ಬಲರಾಮ್ಪುರ ಜಿಲ್ಲೆಯ ಮುಜಾಹನಿ, ಗುಮಾರಿ ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದ ಅಜಿಜುದ್ದೀನ್ ರಸ್ತೆಯಲ್ಲಿ ವಾಸವಾಗಿರುವವನಾಗಿ ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಪ್ರದೇಶದ…
-

ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಖತರ್ನಾಕ್ ಕಿಲಾಡಿ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನಕ್ಕೊಂದರಂತೆ ಹೆಚ್ಚಾಗುತ್ತಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು ಉದ್ಯಮಿಯೊಬ್ಬರಿಗೆ ಬರೋಬ್ಬರಿ 87 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಜಾಲ ಬೆಳಕಿಗೆ ಬಂದಿದೆ. ಹಂತ ಹಂತವಾಗಿ ಕೋಟಿ ರೂಪಾಯಿಯ ಸಮೀಪದ ಮೊತ್ತವನ್ನು ಕಸಿದು, ಸದ್ಯ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಮಹಿಳೆಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕು ನಿವಾಸಿಯಾಗಿರುವ ಉದ್ಯಮಿಯೊಬ್ಬರಿಗೆ 2024ರ…
-

ಉಡುಪಿ: ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ನೀಡುವುದಾಗಿ ನಂಬಿಸಿ 5.11 ಲಕ್ಷಕ್ಕೂ ಅಧಿಕ ಹಣ ವಂಚನೆ
ಉಡುಪಿ: ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ನೀಡುವುದಾಗಿ ನಂಬಿಸಿ 66 ವರ್ಷದ ವ್ಯಕ್ತಿಯಿಂದ ಸುಮಾರು 5.11 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಕಡಿಯಾಳಿ ನಿವಾಸಿ ಉಸ್ಮಾನ್ ಸಾಹೇಬ್ (66) ಅವರು ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ಪಡೆಯುವ ಉದ್ದೇಶದಿಂದ ಹಂತ ಹಂತವಾಗಿ ಆರೋಪಿಗಳ ಸೂಚನೆಯಂತೆ ಹಣ ವರ್ಗಾಯಿಸಿದ್ದರು. ಜೂನ್ 27ರಂದು 29,000 ರೂ, ಜುಲೈ 9ರಂದು 84,882 ರೂ. ಹಾಗೂ…
-

ಮಂಗಳೂರು: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ
ಮಂಗಳೂರು: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಸದ್ಯ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆಗೈದ ಆರೋಪಿ ಎನ್ನಲಾಗಿದ್ದು ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಲಗಿದ್ದಲ್ಲೇ…
-

ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ…
-

ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಸಚಿವ ಯು.ಟಿ. ಖಾದರ್
ಮಂಗಳೂರು : ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ ತರಗತಿವರೆಗಿನ ಶಾಲೆ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿ ಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ RAPCC ಯ ಸಭಾಂಗಣದಲ್ಲಿ ಶನಿವಾರ ಆಸ್ಪತ್ರೆಯ ಕುಂದುಕೊರತೆ ಹಾಗೂ ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಆಹಾರ ಸುರಕ್ಷತೆಯಲ್ಲಿ ಮಹತ್ತರವಾದ ಬದಲಾವಣೆ…
-

ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.
-

ಮಂಗಳೂರು: ನೇಪಾಳ ಮೂಲದ ಮೂವರು ಕುಖ್ಯಾತ ಕಳ್ಳರ ಬಂಧನ..!! 10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ
ಮಂಗಳೂರು : ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನೇಪಾಳ ಮೂಲದ ಕುಖ್ಯಾತ ಅಂತರ್ ರಾಷ್ಟ್ರ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, 10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನೇಪಾಳದ ಚೈನ್ಪೂರು ಜಿಲ್ಲೆ ನಿವಾಸಿ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ(36), ನೇಪಾಳದ ಬಜಂಗ್ ಜಿಲ್ಲೆ ನಿವಾಸಿ ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ(33), ನೇಪಾಳದ ಕೈಲಾಲಿ ಜಿಲ್ಲೆ ನಿವಾಸಿ ದಿಪೆಂದರ್ ರಸೈಲಿ(25) ಬಂಧಿತ ಆರೋಪಿಗಳು.ಮಂಗಳೂರು ನಗರದ, ಉರ್ವ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











