Category: ಕರಾವಳಿ
-

ಮಂಗಳೂರು: ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿ ಅರೆಸ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ 66(C), 66(D)ಹಾಗೂ **ಭಾರತೀಯ ನ್ಯಾಯ ಸಂಹಿತೆ (BNS)**ಯ 126(2), 308(6), 318(4), 319(2) ಮತ್ತು 3(5) ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು 2026ರ…
-

ಬಂಟ್ವಾಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ..!! ಪೊಲೀಸರ ದಾಳಿ- ವಾಹನ, ಯಂತ್ರೋಪಕರಣಗಳ ವಶಕ್ಕೆ..!!
ಬಂಟ್ವಾಳ: ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 2ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಠಾಣಾ ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶಕ್ಕೆ ತೆರಳಿದ ವೇಳೆ, ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳ…
-

ಗೋವಾದಲ್ಲಿ ಉಡುಪಿಯ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣ: ಯುವತಿಯ ಬಂಧನ!!
ಉಡುಪಿ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಅಕ್ಷತಾ ಎಂ.ಕೆ. ಎಂದು ಗುರುತಿಸಲಾಗಿದ್ದು, ಮೂಲತಃ ಮಂಗಳೂರಿನವರಾದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ನಿವಾಸಿಯಾಗಿದ್ದ ಸಂದೀಪ್ ಸಾಲಿಯಾನ್ ಕೆಲ ದಿನಗಳ ಹಿಂದೆ ಪ್ರವಾಸಕ್ಕಾಗಿ ಗೋವಾಗೆ ತೆರಳಿದ್ದರು. ಬಳಿಕ ಕ್ಯಾಲಂಗುಟ್ನ ಅತಿಥಿ ಗೃಹವೊಂದರಲ್ಲಿ ಅವರ ಮೃತದೇಹ…
-

ಸಾರ್ವಜನಿಕ ಬಸ್ ತಂಗುದಾಣವನ್ನು ಸೌದೆ ಸಂಗ್ರಹಿಸುವ ದಾಸ್ತಾನುವಾಗಿ ಬಳಕೆ..!! ಸಾರ್ವಜನಿಕರ ಆಕ್ರೋಶ, ಮೌನವಾದ ಜಿಲ್ಲಾಡಳಿತ
ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಬಡಬಾಳು ರಾಜ್ಯ ಹೆದ್ದಾರಿ ಪಕ್ಕದಲ್ಲಿ ಸರ್ಕಾರಿ ಅನುದಾನದಲ್ಲಿ ನಿರ್ಮಿಸಲಾದ ಬಸ್ ತಂಗುದಾಣವನ್ನು ಖಾಸಗಿ ವ್ಯಕ್ತಿಯೊಬ್ಬರು ಸೌದೆ ಸಂಗ್ರಹಿಸುವ ಕೊಟ್ಟಿಗೆಯಾಗಿ ಬಳಸುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಲಾದ ಈ ಬಸ್ ತಂಗುದಾಣವು ಇದೀಗ ತನ್ನ ಮೂಲ ಉದ್ದೇಶ ಕಳೆದುಕೊಂಡಿದೆ. ತಂಗುದಾಣದ ಒಳಗೆ ಸೌದೆ ರಾಶಿ ಹಾಕಿರುವುದರಿಂದ ಬಸ್ ಕಾಯಲು ಸ್ಥಳವೇ ಇಲ್ಲದಂತಾಗಿದೆ. ಮಳೆ ಹಾಗೂ ಬಿಸಿಲಿನಿಂದ ಆಶ್ರಯ ಪಡೆಯಬೇಕಾದ ಸ್ಥಳವೇ ಈಗ ಅಸೌಕರ್ಯದ ಕೇಂದ್ರವಾಗಿರುವುದಾಗಿ…
-

ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ: ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು
ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಗುರುವಾರ ಮುಂಜಾನೆ ಸುಮಾರು 4:20ರ ವೇಳೆಗೆ ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಅನುಮಾನಾಸ್ಪದ ವಸ್ತುವನ್ನು ಅಪರಿಚಿತ ವ್ಯಕ್ತಿಯೊಬ್ಬ ಎಸೆದಿರುವುದನ್ನು ಕರ್ತವ್ಯನಿರತ ಕೆಎಸ್‌ಐಎಸ್‌ಎಫ್ ಆರ್‌ಪಿಸಿ ಕಿರಣ್ ಎಂಬವರು ಗಮನಿಸಿದರು. ಹಾಗೇ ಎಎಸ್ಸೆಗೆ ಮಾಹಿತಿ ನೀಡಿ ಸುಮಾರು 500 ಮೀಟರ್ ದೂರದವರೆಗೆ…
-

ದ.ಕ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರ: 88 ಪ್ರದೇಶಗಳು ಡೇಂಜರ್ ಝೋನ್,
ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಜಿಲ್ಲೆಯ 88 ಪ್ರದೇಶಗಳನ್ನು ಭೂಕುಸಿತ ಸಂಭವಿಸುವ ಅತಿ ಹೆಚ್ಚು ಅಪಾಯದ ವಲಯಗಳಾಗಿ (Danger Zone) ಗುರುತಿಸಿದ್ದು, ಸಾರ್ವಜನಿಕರು ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ. ಅಧಿಕೃತ ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿಯೂ ಈಗಾಗಲೇ ಮೂರು ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಪಾಯದ…
-

ಬೆಳ್ತಂಗಡಿ: 27 ವರ್ಷದ ಯುವಕನ ಮೃತದೇಹ ಪತ್ತೆ..!! ಕೊಲೆ ಶಂಕೆ
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ…
-

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!
ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಮಂಗಳವಾರ ಗೋವಾದ ಕಲ್ಲಂಗೂಟ್ ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಂದೀಪ್ ಉಡುಪಿ ಜಿಲ್ಲೆಯ ಮಲ್ಪೆ ಮೂಲದವರು. ಸಂದೀಪ್ ಹಲವು ವರ್ಷಗಳ ಹಿಂದೆ ಪ್ರಮೋದ್ ಮಧ್ವರಾಜ್ ಅವರ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಮಲ್ಪೆಯಲ್ಲಿ ಪ್ರವಾಸಿ ದೋಣಿಯನ್ನು ಹೊಂದಿದ್ದರು ಎಂದು ವರದಿಯಾಗಿದೆ. ಅವರು ಮೂರು…
-

ಮಂಗಳೂರಿನಲ್ಲಿ ಮತ್ತೊಂದು ದುರಂತ: ಗೆಸ್ಟ್ ಹೌಸನ ಬೃಹತ್ ಕಾಂಪೌಂಡ್ ಮನೆ ಮೇಲೆ ಕುಸಿತ
ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ ಇಲ್ಲಿನ ನಿವಾಸಿ ಕಿಶೋರ್…
-

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಾರು ಪತ್ತೆ..!! ತನಿಖೆ ತೀವ್ರ
ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











