Category: ಕರಾವಳಿ
-

ಉಳ್ಳಾಲ: ಕಟ್ಟಡಕ್ಕೆ ಹೆಚ್ಚುವರಿಯಾಗಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಳ್ಳಾಲ ನಗರಸಭೆ ನೋಟಿಸ್
ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ನಿರ್ಮಿಸುತ್ತಿರುವ ಕಟ್ಟಡಕ್ಕೆ ಹೆಚ್ಚುವರಿಯಾಗಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಳ್ಳಾಲ ನಗರಸಭೆಯು ನೋಟಿಸ್ ಹೊರಡಿಸಿದೆ. ಈ ಬಗ್ಗೆ ಕ್ರೈಂ ವಾರ್ತೆಯ ನಿರಂತರವಾಗಿ ವರದಿ ಪ್ರಕಟಿಸಿದ ಹಿನ್ನೆಲೆ ಎಚ್ಚೆತ್ತ ಉಳ್ಳಾಲ ನರಸಭೆಯು ಕಟ್ಟಡ ಮಾಲಿಕರಿಗೆ ನೋಟಿಸ್ ನೀಡಲಾಗಿದೆ. ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸುತ್ತಿರುವುದು ಸರಿಯಷ್ಟೇ, ಪ್ರಸ್ತುತ ನಿವೇಶನದ ಬಲಭಾಗದಲ್ಲಿ ಹಿಂದಿನ ನಿವೇಶನದಾರರಿಗೆ ಹೋಗುವ ರಸ್ತೆಯಿರುತ್ತದೆ. ಆದರೆ ತಾವು ಸದರಿ ಭಾಗದಲ್ಲಿ ತಾತ್ಕಾಲಿಕ ನಿರ್ಮಾಣ ಮಾಡಿದ್ದು ರಸ್ತೆಗೆ ಅಡಚಣೆಯಾಗಿರುತ್ತದೆ…
-

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ ನರಸಿಂಹ ಶೆಟ್ಟಿ ಯಾನೆ ‘ಮಾಣಿ ನರಸಿಂಹ’ (ತಂದೆ: ದಿವಂಗತ ನಾರಾಯಣ ಶೆಟ್ಟಿ) ಅವರಿಗೆ ಜಿಲ್ಲೆಯಿಂದ ಗಡಿಪಾರು (Externment) ಮಾಡುವ ಕುರಿತು ಕಾರಣ ಕೇಳಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸೂಚನಾ ಪತ್ರ (ನೋಟಿಸ್) ಜಾರಿಗೊಳಿಸಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರು ಸಲ್ಲಿಸಿರುವ ವರದಿಯನ್ನಾಧರಿಸಿ, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ…
-

ಮಂಗಳೂರಿನಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆ..!! ಪತ್ತೆಗೆ ಮನವಿ
ಮಂಗಳೂರು: ನಗರದ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಅವರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಮೊಹಮ್ಮದ್ ಶಯಾನ್ (14) ಹಾಗೂ ಮೊಹಮ್ಮದ್ ಶಾಝಿಲ್ (13) ಎಂಬ ಇಬ್ಬರು ಬಾಲಕರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಾಲಕರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಬಾಲಕರ ಕುರಿತು ಮಾಹಿತಿ ದೊರೆತರೆ ಮ್ಯಾನ್ಸೂರ್ ಮಂಚಿಲಾ ಅವರನ್ನು +91 96323 22351 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.ಇಬ್ಬರು ಬಾಲಕರ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ…
-

ಮೂಡಬಿದ್ರೆ: ಅಮಾನತುಗೊಂಡ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು- ತನಿಖೆಗೆ ಆದೇಶ
ಮೂಡಬಿದ್ರೆ: ಪೊಲೀಸ್ ಅಧಿಕಾರಿಗಳು ನಾಗರಿಕರ ವೈಯಕ್ತಿಕ ಮಾಹಿತಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ(KSHRC) ತನಿಖೆಗೆ ಆದೇಶಿಸಿದೆ. ಅಮಾನತಿನಲ್ಲಿರುವ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಮತ್ತು ಮಂಗಳೂರು ಉತ್ತರ(ಪಣಂಬೂರು) ವಿಭಾಗದ ಎಸಿಪಿ ಶ್ರೀಕಾಂತ್ ಅವರ ವಿರುದ್ಧ ಉನ್ನತಾಧಿಕಾರಿಗಳಿಂದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆಯೋಗ ನಿರ್ದೇಶನ ನೀಡಿದೆ. (ಪ್ರಕರಣ ಸಂಖ್ಯೆ: 3141/10/21/2026) ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚೋಳ್ಯಾಡಿ ರಸ್ತೆ ನಿವಾಸಿ…
-

ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ
ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್ಸಿ ಮಧು ಹಾಗೂ ಸಿಪಿಸಿ ಭೀಮನಗೌಡ ಎಂ. ಬಿರಾದರ್ ಅವರು ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಂದ ದೂರಿನ ಮೇರೆಗೆ ಪಡ್ನೂರು ಗ್ರಾಮದ ಮುಂಡಾಜೆ ಎಂಬಲ್ಲಿಗೆ ತೆರಳಿದ್ದರು.ಅಲ್ಲಿ ಮಹಿಳೆಯೊಬ್ಬರು ತನ್ನ ಪತಿ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ…
-

ಮಂಗಳೂರು ಕೇಂದ್ರ ಮಾರುಕಟ್ಟೆ ಕಾಮಗಾರಿಯಲ್ಲಿ ಅಕ್ರಮಕ್ಕೆ ಸರ್ಕಾರಿ ರಸ್ತೆಯೇ ಮಾಯವಾಯಿತೇ?
ಮಂಗಳೂರು:ಕೇಂದ್ರ ಮಾರುಕಟ್ಟೆಯ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಹಾಗೂ ಅಕ್ರಮದ ಆರೋಪಗಳು ಕೇಳಿಬಂದಿವೆ. ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಜಾಯಿಂಟ್ ಕಾಮಗಾರಿ ಎಂಬ ನೆಪದಲ್ಲಿ ಕಾಮಗಾರಿಯನ್ನು ಗುತ್ತಿಗೆ ನೀಡಲಾಗಿದ್ದು, 60:40ರ ಅನುಪಾತದಲ್ಲಿ ಸಂಸ್ಥೆಗೆ ಶೇ.60ರಷ್ಟು ಹಾಗೂ ಮಹಾನಗರ ಪಾಲಿಕೆಗೆ ಶೇ.40ರಷ್ಟು ಪಾಲು ಇರುವುದಾಗಿ ಆರೋಪಿಸಲಾಗಿದೆ. ಮಾರುಕಟ್ಟೆ ನಿರ್ಮಾಣದ ಹೆಸರಿನಲ್ಲಿ ಇದೀಗ ಬೃಹತ್ ಮಾಲ್ ಮಾದರಿಯ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಸಾಂಪ್ರದಾಯಿಕ ಮಾರುಕಟ್ಟೆಯ ಸ್ವರೂಪದಲ್ಲೇ ಇಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ. ಈ ಕಾಮಗಾರಿಯಲ್ಲಿ ಕೋಟಿ ಕೋಟಿ ರೂಪಾಯಿ…
-

ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ
ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಮದ್ಯಪಾನದ ವೇಳೆ ನಡೆದ ಜಗಳವೇ ಸಾವಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಇದನ್ನು ಕೊಲೆ ಪ್ರಕರಣವೆಂದು ಶಂಕಿಸಿದ್ದಾರೆ. ದಿನ ಕೂಲಿ ಕೆಲಸ…
-

ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಆರೋಪ: ಸುರತ್ಕಲ್ NITKಯ ಇಬ್ಬರು ಪ್ರಾಧ್ಯಾಪಕರ ಬಂಧನ
ಮಂಗಳೂರು: ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಎಸಗಿದ ಆರೋಪದ ಮೇಲೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ಸುರತ್ಕಲ್ನ ಇಬ್ಬರು ಹಿರಿಯ ಪ್ರಾಧ್ಯಾಪಕರ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.NITK ಆಡಳಿತ ಮಂಡಳಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಕ್ಕೆ ಸಂಬಂಧಿಸಿದಂತೆ ಎನ್ಐಟಿ ಮಂಡಳಿಯು ಮೊದಲು ಆಂತರಿಕ ತನಿಖೆ ನಡೆಸಿತ್ತು. ಈ ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಬೋಧಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂಸ್ಥೆಯ ಹಣವನ್ನು ದುರ್ಬಳಕೆ…
-

ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ
ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಅವರು ಪರಾರಿಯಾಗಲು ಯತ್ನಿಸಿದಾಗ…
-

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ
ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ ದೂರಿನ ಆಧಾರದಲ್ಲಿ ಕಾಸರಗೋಡಿನ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನಲ್ಲಿ ಉಲ್ಲೇಖಿಸಲಾದ ವಿವರಗಳ ಪ್ರಕಾರ, ಆಗಸ್ಟ್ 29ರಂದು ಸಂಜೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











