Category: ಕರಾವಳಿ
-

ಕಾರಿನೊಳಗೆ ಅಡಗಿಸಿದ್ದ ನಿಷೇಧಿತ ಸರಕು; ಪೊಲೀಸ್ ದಾಳಿಯಲ್ಲಿ ಬಯಲಾದ ಜಾಲ
ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ…
-

ಡೆಬಿಟ್ ಕಾರ್ಡ್ ಬಳಸಿ ಭರ್ಜರಿ ವಂಚನೆ:ವ್ಯಕ್ತಿಯ ಖಾತೆಯಿಂದ ₹2.12 ಲಕ್ಷ ದೋಚಿದ ಖದೀಮರು
ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ…
-

ಮಂಗಳೂರಿನಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ: 6.35 ಲಕ್ಷ ಮೌಲ್ಯದ ಮರಳು ವಶಕ್ಕೆ
ಮಂಗಳೂರು: ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಪ್ರತ್ಯಕ್ಷದರ್ಶಿಗಳ ಸಮ್ಮುಖದಲ್ಲಿ ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಫಲ್ಗುಣಿ ನದಿಯ ಕಡೆಗೆ ಹೋಗುವ ರಸ್ತೆಯ ಬಲಭಾಗದಲ್ಲಿರುವ ತೆರೆದ ಜಾಗದಲ್ಲಿ ಸುಮಾರು 20 ಲೋಡ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿರುವುದನ್ನು ಪೊಲೀಸರು…
-

ದರೋಡೆ ಕೇಸ್‌ನಲ್ಲಿ ಆರೋಪ ಸಾಬೀತು: ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಪುತ್ತೂರು: ದರೋಡೆ ಪ್ರಕರಣದ ಇಬ್ಬರು ಆರೋಪಿಗಳಿಗೆ ತಲಾ 10000 ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ , ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೆ ಗುರಿಯಾದವರು.ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ಮಾರ್ಚ್ 20, 2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು…
-

ಧರ್ಮಸ್ಥಳ ಕೇಸ್‌ನ ಎಸ್‌ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ!
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಕಾರು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಹಾಗೂ ಚಾಲಕ ಸೇರಿ ನಾಲ್ವರು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸಲ್ಲಿಸಿರುವ ಹೈಕೋರ್ಟ್ ರಿಟ್ ಅರ್ಜಿಯ ಕುರಿತು ಚರ್ಚಿಸಲು, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
-

ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು, ತನಿಖೆ ಆರಂಭ
ಧರ್ಮಸ್ಥಳ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಂಗಳವಾರ ಬೆಳಿಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ, ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿ ರಮೇಶ್ ಅವರ ಪುತ್ರಿ ಶ್ವೇತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಐದು ವರ್ಷಗಳಿಂದ ಶ್ವೇತಾ ಅವರ ಪೋಷಕರು ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಮಾಹಿತಿಯ ಪ್ರಕಾರ, ಶ್ವೇತಾ…
-

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ವಿದೇಶಿ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ…
-

ಮೆಡಿಕಲ್ ಶಾಪ್‌ಗಳಲ್ಲಿ ಬಿಗಿ ನಿಯಮ: ಸಿರಪ್ ಮಾರಾಟಕ್ಕೆ ವೈದ್ಯರ ಅನುಮತಿ ಅಗತ್ಯ
ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶಿಸಿದೆ.ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಇಲಾಖೆ ಆದೇಶಿಸಿದೆ.ಕೇಂದ್ರವು 1945 ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ ಏ ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ಸಿರಪ್‌ಗಳು ಎಂಬ ಪದವನ್ನು ತೆಗೆದುಹಾಕಿದೆ. ಹೀಗಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮು…
-

ನಕಲಿ ಪಾಸ್‌ಪೋರ್ಟ್ ಪ್ರಕರಣ: ಆರೋಪಿಗಳ ಜಾಮೀನು ಬಳಿಕ ಹೆಚ್ಚಿದ ಅನುಮಾನ
ಮಂಗಳೂರು :ಬೇರೊಬ್ಬರ ದಾಖಲೆಗಳನ್ನು ಬಳಸಿ ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ ಇಸ್ರೇಲ್‌ಗೆ ತೆರಳಿದ ಪ್ರಕರಣದಲ್ಲಿ ಇದೀಗ ಹೊಸ ಬೆಳವಣಿಗೆ ನಡೆದಿದೆ. ಪ್ರಕರಣದ A2 ಮತ್ತು A3 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಮತ್ತೊಂದೆಡೆ A1 ಆರೋಪಿ ಇನ್ನೂ ಇಸ್ರೇಲ್‌ನಲ್ಲೇ ಇರುವುದಾಗಿ ವರದಿಯಾಗಿದೆ ಮಂಗಳೂರು ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ ಈ ಪ್ರಕರಣದಲ್ಲಿ, ಉಳ್ಳಾಲದ ಮಹಿಳೆಯೊಬ್ಬರ ದಾಖಲೆಗಳನ್ನು ಬಳಸಿ ಮತ್ತೋರ್ವ ಮಹಿಳೆಗೆ ಪಾಸ್‌ಪೋರ್ಟ್ ಮಾಡಿಕೊಡಲಾಗಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆದರೆ ಇದು ಕೇವಲ ಒಂದು ಪ್ರಕರಣವೇ ಅಥವಾ ಇದರ…
-

ಉಡುಪಿ: ಸರಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಚಾಕು ಹಿಡಿದು ಬೀದಿ ರಂಪಾಟ!!
ಉಡುಪಿ: ಅದಾವುದೋ ಕಾರಣಕ್ಕೆ ಮಾನಸಿಕ ಕ್ಷೋಭೆಗೆ ಒಳಗಾಗಿದ್ದ 17 ವರ್ಷದ ಅಪ್ರಾಪ್ತ ಯುವತಿ ತನ್ನನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಮೇಲೆಯೇ ಚಾಕು ಹಿಡಿದು ದಾಳಿ ನಡೆಸಿ ರಾದ್ಧಾಂತ ಸೃಷ್ಟಿಸಿದ ಘಟನೆ ಸೋಮವಾರ ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಯುವತಿ ವಿಶು ಶೆಟ್ಟಿ ಅವರ ಮೇಲೆ ಚಾಕು ಬೀಸಿದ್ದು, ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ.ಯುವತಿಯ ರಾದ್ಧಾಂತವನ್ನು ಕಂಡು ಬೆಚ್ಚಿ ಆಕೆಯ ತಾಯಿ ಮೂರ್ಚೆ ಬಿದ್ದಿದ್ದು, ಯುವತಿಯ ತಂದೆಯ ಅಪೇಕ್ಷೆ ಮೇರೆಗೆ ಯುವತಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











